ಬೆಂಗಳೂರು: ನಿನ್ನೆಗೆ ಹೋಲಿಸಿದ್ರೆ ಇಂದು ರಾಜ್ಯದಲ್ಲಿ ಕೊರೊನಾ ಸೋಂಕು ಮತ್ತು ಸಾವಿನ ಪ್ರಕರಣ ಕಡಿಮೆಯಾಗಿದೆ. ಇಂದು 1,019 ಪಾಸಿಟಿವ್ ಕೇಸ್ ವರದಿಯಾಗಿದ್ದು, ಸೋಂಕಿಗೆ 3 ಮಂದಿ ಸಾವನ್ನಪ್ಪಿದ್ದಾರೆ.
Advertisement
ರಾಜ್ಯದ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 16,502 ಇದೆ. ರಾಜಧಾನಿ ಬೆಂಗಳೂರು ನಗರದಲ್ಲಿ ಇಂದು ಕೂಡ ಪಾಸಿಟಿವ್ ಕೇಸ್ಗಳ ಸಂಖ್ಯೆ 655 ಇದೆ. ಜಿಲ್ಲೆಗಳಲ್ಲೂ ಪಾಸಿಟಿವ್ ಪ್ರಕರಣಗಳ ಏರಿಳಿತ ಮುಂದುವರಿದಿದೆ. ಈವರೆಗೆ ಒಟ್ಟು 40,121 ಮಂದಿ ಕೊರೊನಾದಿಂದ ಮೃತಪಟ್ಟಿದ್ದಾರೆ. ಇಂದು ರಾಜ್ಯದಲ್ಲಿ 1,662 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದನ್ನೂ ಓದಿ: ನನ್ನ ಚುನಾವಣಾ ಸ್ಪರ್ಧೆ ಬಗ್ಗೆ ಪಕ್ಷ ತೀರ್ಮಾನಿಸುತ್ತೆ: ವಿಜಯೇಂದ್ರ
Advertisement
Advertisement
ರಾಜ್ಯದ ಪಾಸಿಟಿವಿಟಿ ರೇಟ್ ಶೇ. 6.36ಕ್ಕೆ ತಲುಪಿದೆ. ಮರಣ ಪ್ರಮಾಣ ಶೇ.0.29ಗೆ ತಲುಪಿದೆ. ರಾಜ್ಯದಲ್ಲಿ ಇಂದು ಒಟ್ಟು 71,125 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 16,502 ಸ್ಯಾಂಪಲ್(ಆರ್ಟಿ-ಪಿಸಿಆರ್ 13,156+ 3,346 ರ್ಯಾಪಿಡ್ ಆ್ಯಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ.
Advertisement
ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ ಬಾಗಲಕೋಟೆ 7, ಬಳ್ಳಾರಿ 34, ಬೆಳಗಾವಿ 60, ಬೆಂಗಳೂರು ಗ್ರಾಮಾಂತರ 0, ಬೆಂಗಳೂರು ನಗರ 655, ಬೀದರ್ 4, ಚಾಮರಾಜನಗರ 09, ಚಿಕ್ಕಬಳ್ಳಾಪುರ 15, ಚಿಕ್ಕಮಗಳೂರು 0, ಚಿತ್ರದುರ್ಗ 04, ದಕ್ಷಿಣ ಕನ್ನಡ 10, ದಾವಣಗೆರೆ 25, ಧಾರವಾಡ 16, ಗದಗ 1, ಹಾಸನ 0, ಹಾವೇರಿ 0, ಕಲಬುರಗಿ 24, ಕೊಡಗು 05, ಕೋಲಾರ 02, ಕೊಪ್ಪಳ 01, ಮಂಡ್ಯ 07, ಮೈಸೂರು 60, ರಾಯಚೂರು 32, ರಾಮನಗರ 12, ಶಿವಮೊಗ್ಗ 02, ತುಮಕೂರು 12, ಉಡುಪಿ 08, ಉತ್ತರ ಕನ್ನಡ 09, ವಿಜಯಪುರ 00 ಮತ್ತು ಯಾದಗಿರಿಯಲ್ಲಿ 03ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಧ್ವಜದ ಬಗ್ಗೆ ಸಿದ್ದರಾಮಯ್ಯ ಮಾತು ಕೇಳಿ ದುಃಖವಾಗುತ್ತಿದೆ: ನಾಗೇಶ್ ಕಿಡಿ