Bengaluru CityCoronaDistrictsKarnatakaLatestMain Post

ರಾಜ್ಯದಲ್ಲಿಂದು 1,608 ಮಂದಿಗೆ ಕೊರೊನಾ – ಇಬ್ಬರು ಸಾವು

ಬೆಂಗಳೂರು: ರಾಜ್ಯದಲ್ಲಿ ಹಲವು ದಿನಗಳಿಂದ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಏರಿಳಿತಗಳು ಆಗುತ್ತಲೇ ಇದೆ. ನಿನ್ನೆ ರಾಜ್ಯದಲ್ಲಿ 1,019 ಕೊರೊನಾ ಕೇಸ್ ದಾಖಲಾಗಿದ್ದು, ಇಂದು 1,608ಕ್ಕೆ ಏರಿಕೆಯಾಗಿದೆ. ಸೋಂಕಿಗೆ ರಾಜ್ಯದಲ್ಲಿ ಇಬ್ಬರು ಬಲಿಯಾಗಿದ್ದಾರೆ.

ರಾಜ್ಯದ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 10,790 ಇದೆ. ರಾಜಧಾನಿ ಬೆಂಗಳೂರಿನಲ್ಲಿ 1,098 ಮಂದಿಗೆ ಕೊರೊನಾ ಸೋಂಕು ತಗುಲಿದೆ. ಜಿಲ್ಲೆಗಳಲ್ಲೂ ಪಾಸಿಟಿವ್ ಪ್ರಕರಣಗಳ ಏರಿಳಿತ ಮುಂದುವರಿದಿದೆ. ಈವರೆಗೆ ಒಟ್ಟು 40,123 ಮಂದಿ ಕೊರೊನಾದಿಂದ ಮೃತಪಟ್ಟಿದ್ದಾರೆ. ಇಂದು ರಾಜ್ಯದಲ್ಲಿ 2,068 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ರಾಜ್ಯದ ಪಾಸಿಟಿವಿಟಿ ರೇಟ್ ಶೇ. 6.29ಕ್ಕೆ ತಲುಪಿದೆ. ಮರಣ ಪ್ರಮಾಣ ಶೇ.0.12ಕ್ಕೆ ತಲುಪಿದೆ. ರಾಜ್ಯದಲ್ಲಿ ಇಂದು ಒಟ್ಟು 16,928 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 25,524 ಸ್ಯಾಂಪಲ್(ಆರ್‌ಟಿ-ಪಿಸಿಆರ್ 16,669 + 8,855 ರ‍್ಯಾಪಿಡ್ ಆ್ಯಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದನ್ನೂ ಓದಿ: ನಾಳೆ ಬಿಹಾರದಲ್ಲಿ ಆರ್‌ಜೆಡಿ-ಕಾಂಗ್ರೆಸ್‌ನೊಂದಿಗೆ ನಿತೀಶ್ ಹೊಸ ಸರ್ಕಾರ ಸ್ಥಾಪನೆ

ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ ಬಾಗಲಕೋಟೆ 18, ಬಳ್ಳಾರಿ 69, ಬೆಳಗಾವಿ 26, ಬೆಂಗಳೂರು ಗ್ರಾಮಾಂತರ 6, ಬೆಂಗಳೂರು ನಗರ 1,098, ಬೀದರ್ 4, ಚಾಮರಾಜನಗರ 27, ಚಿಕ್ಕಬಳ್ಳಾಪುರ 6, ಚಿಕ್ಕಮಗಳೂರು 13, ಚಿತ್ರದುರ್ಗ 6, ದಕ್ಷಿಣ ಕನ್ನಡ 5, ದಾವಣಗೆರೆ 37, ಧಾರವಾಡ 40, ಗದಗ 6, ಹಾಸನ 24, ಹಾವೇರಿ 4, ಕಲಬುರಗಿ 6, ಕೊಡಗು 25, ಕೋಲಾರ 6, ಕೊಪ್ಪಳ 19, ಮಂಡ್ಯ 15, ಮೈಸೂರು 41, ರಾಯಚೂರು 10, ರಾಮನಗರ 1, ಶಿವಮೊಗ್ಗ 43, ತುಮಕೂರು 28, ಉಡುಪಿ 4, ಉತ್ತರ ಕನ್ನಡ 9, ವಿಜಯಪುರ 9 ಹಾಗೂ ಯಾದಗಿರಿಯಲ್ಲಿ 3 ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಈದ್ಗಾ ಮೈದಾನದಲ್ಲಿ ಶಿವಲಿಂಗ ಪ್ರತಿಷ್ಠಾಪನೆಗೆ ಪ್ಲ್ಯಾನ್‌ – ವಿವಾದ ತಿಳಿಗೊಳಿಸಲು ಶಾಂತಿ ಸಭೆ

Live Tv

Leave a Reply

Your email address will not be published.

Back to top button