ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಬ್ಲಾಸ್ಟ್ ಆಗುತ್ತಿದ್ದು, 525 ಜನರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿರುವುದು ದಾಖಲಾಗಿದೆ.
ರಾಜ್ಯದಲ್ಲಿ ಇಂದು 228 ಜನರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಇಲ್ಲಿವರೆಗೂ 39,12,024 ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ. 22,673 ಜನರು ಇಂದು ಕೊರೊನಾ ಪರೀಕ್ಷೆ ಮಾಡಿಸಿಕೊಂಡಿದ್ದಾರೆ. ರಾಜ್ಯದಲ್ಲಿ ಶೂನ್ಯ ಮರಣ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ವಿಧಾನಸಭೆ ಚುನಾವಣೆಯಲ್ಲಿ 30% ಯುವಕರಿಗೆ ಟಿಕೆಟ್: ನಿಖಿಲ್ ಕುಮಾರಸ್ವಾಮಿ
Advertisement
Advertisement
ಬೆಂಗಳೂರಿನಲ್ಲಿ ಇಂದು 494 ಕೇಸ್ ದಾಖಲಾಗಿದ್ದು, ಬೆಂಗಳೂರಿನಲ್ಲಿ ಕೊರೊನಾಗೆ ಶೂನ್ಯ ಸಾವು ದಾಖಲಾಗಿದೆ. ರಾಜ್ಯದ ಕೋವಿಡ್ ಪಾಸಿಟಿವಿಟಿ ರೇಟ್ 2.31% ಗೆ ಏರಿಕೆಯಾಗಿದೆ.
Advertisement
Advertisement
74,134 ಜನರು ಕೊರೊನಾ ಲಸಿಕೆ ಹಾಕಿಸಿಕೊಂಡಿದ್ದು, ಇಲ್ಲಿವರೆಗೂ ರಾಜ್ಯದಲ್ಲಿ 11,00,25,194 ಜನರು ಲಸಿಕೆ ಹಾಕಿಸಿಕೊಂಡಿದ್ದಾರೆ. ಒಟ್ಟು 22,673 ಸ್ಯಾಂಪಲ್ (ಆರ್‌ಟಿ ಪಿಸಿಆರ್ 15,972 + 6701 ರ‍್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದನ್ನೂ ಓದಿ: ನಮ್ಮ ಪಕ್ಷದವರಲ್ಲದವರು ಅಡ್ಡ ಮತದಾನ ಮಾಡಿರುವುದಕ್ಕೆ ನಾನ್ಯಾಕೆ ಉತ್ತರ ಕೊಡಲಿ: ಪ್ರಜ್ವಲ್ ರೇವಣ್ಣ
ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಳ್ಳಾರಿ 04, ಬೆಳಗಾವಿ 02, ಬೆಂಗಳೂರು ಗ್ರಾಮಾಂತರ 01, ಬೆಂಗಳೂರು ನಗರ 494, ಚಿಕ್ಕಮಗಳೂರು 01, ಚಿತ್ರದುರ್ಗ 02, ದ.ಕನ್ನಡ 07, ಧಾರವಾಡ 01, ಮೈಸೂರು 08 ಮತ್ತು ಉಡುಪಿ 03 ಕೊರೊನಾ ಪ್ರಕರಣಗಳು ದಾಖಲಾಗಿವೆ.