ಬೆಂಗಳೂರು: ರಾಜ್ಯದಲ್ಲಿ ನಿನ್ನೆಗಿಂತ ಇಂದು ಕೊರೊನಾ ಪ್ರಕರಣ ಹೆಚ್ಚು ದಾಖಲಾಗಿದೆ. ರಾಜ್ಯದಲ್ಲಿ 1,231 ಮಂದಿಗೆ ಕೊರೊನಾ ಪ್ರಕರಣ ಕಾಣಿಸಿಕೊಂಡರೆ ಬೆಂಗಳೂರಿನಲ್ಲಿಯೇ 1,124 ಪ್ರಕರಣ ವರದಿಯಾಗಿದೆ.
ರಾಜ್ಯದ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 6,603ಕ್ಕೆ ತಲುಪಿದೆ. ಬೆಂಗಳೂರಿನ ಬಳಿಕ ಅತಿ ಹೆಚ್ಚು ಪಾಸಿಟಿವ್ ಪ್ರಕರಣ ದಾಖಲಾಗಿದ್ದು, ಶೂನ್ಯ ಮರಣ ಪ್ರಮಾಣ ದಾಖಲಾಗಿದೆ. ರಾಜ್ಯದ ಇಂದಿನ ಪಾಸಿಟಿವಿಟಿ ರೇಟ್ ಶೇ.4.78 ಕ್ಕೆ ತಲುಪಿದೆ. ಇದನ್ನೂ ಓದಿ: ಊಟ ಬಿಟ್ಟು ಮರವಂತೆಗೆ ಸಿಎಂ ದೌಡಾಯಿಸಿದ್ದು ಯಾಕೆ?
Advertisement
Advertisement
ಇಂದು 1,047 ಮಂದಿ ಆಸ್ಪತ್ರೆಯಿಂದ ಡಿಸ್ಚಾಜ್ ಆಗಿದ್ದಾರೆ. ಒಟ್ಟು ಇಲ್ಲಿವರೆಗೂ 39,35,088 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಕೊರೊನಾ ಸೋಂಕಿನಿಂದ ಒಟ್ಟು 40,083 ಮಂದಿ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಇಂದು 25,743 ಮಂದಿ ಕೊರೊನಾ ಪರೀಕ್ಷೆಗೆ ಒಳಗಾಗಿದ್ದಾರೆ.
Advertisement
Advertisement
ರಾಜ್ಯದಲ್ಲಿ ಇಂದು ಒಟ್ಟು 2,78,780 ಮಂದಿ ಕೊರೊನಾ ಲಸಿಕೆ ಹಾಕಿಸಿಕೊಂಡಿದ್ದಾರೆ. ಒಟ್ಟು 25,743 ಸ್ಯಾಂಪಲ್(ಆರ್ಟಿ-ಪಿಸಿಆರ್ 18,595 + 7,148 ರ್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ.
ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ ಬಾಗಲಕೋಟೆ 01, ಬಳ್ಳಾರಿ 05, ಬೆಂಗಳೂರು ಗ್ರಾಮಾಂತರ 01, ಬೆಂಗಳೂರು ನಗರ 1,124, ಬೀದರ್ 04, ಚಿತ್ರದುರ್ಗ 04, ದಕ್ಷಿಣ ಕನ್ನಡ 09, ಧಾರವಾಡ 19, ಹಾಸನ 01, ಕೋಲಾರ 11, ಮಂಡ್ಯ 04, ಮೈಸೂರು 13, ರಾಮನಗರ 05, ಶಿವಮೊಗ್ಗ 03, ತುಮಕೂರು 07, ಉಡುಪಿ 07 ಉಳಿದ ಎಲ್ಲಾ ಜಿಲ್ಲೆಗಳಲ್ಲಿ ಶೂನ್ಯ ಪಾಸಿಟಿವ್ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಪ್ರೇಯಸಿಯನ್ನು ಚಾಕುವಿನಿಂದ ಇರಿದು ಪೊಲೀಸರಿಗೆ ಶರಣಾದ