ಬೆಂಗಳೂರು: ಇಂದು ರಾಜ್ಯದಲ್ಲಿ 106 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ನಾಲ್ಕು ಮಂದಿ ಸಾವನ್ನಪ್ಪಿದ್ದಾರೆ.
Advertisement
ರಾಜ್ಯದಲ್ಲಿ ನಿನ್ನೆ ಶೂನ್ಯ ಪ್ರಕರಣಗಳು ದಾಖಲಾಗಿದ್ದು, ಇಂದು ನಾಲ್ಕು ಮೃತಪಟ್ಟಿದ್ದಾರೆ. ಒಟ್ಟು ರಾಜ್ಯದಲ್ಲಿ ಇಂದು 337 ಜನರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಇಲ್ಲಿವರೆಗೂ 39,01,430 ಜನರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇಲ್ಲಿವರೆಗೂ ರಾಜ್ಯದಲ್ಲಿ 40,022 ಮಂದಿ ಕೊರೊನಾದಿಂದ ಬಳಲುತ್ತಿದ್ದಾರೆ. ಆದರೆ ಸ್ಥಿತಿ ಗಂಭೀರವಾಗಿಲ್ಲ ಎಂದು ತಜ್ಞರು ತಿಳಿಸಿದ್ದಾರೆ. ಇದನ್ನೂ ಓದಿ: ಕಾಶ್ಮೀರದಲ್ಲಿದ್ದ ನನ್ನ ಪೂರ್ವಜರು ನೋವು ತಿಂದೆ ಕಾಶ್ಮೀರ ಬಿಟ್ಟರು : ಅನಂತ್ ನಾಗ್ ಬಿಚ್ಚಿಟ್ಟ ಕಾಶ್ಮೀರಿ ಕ್ರೌರ್ಯ
Advertisement
Advertisement
ಕೋವಿಡ್-19 ಸೋಂಕಿನ ಖಚಿತ ಪ್ರಕರಣ 0.45% ಇದ್ದು, ಸೋಂಕಿನಿಂದ 3.77% ಜನರು ಇಲ್ಲಿವರೆಗೂ ಮೃತಪಟ್ಟಿದ್ದಾರೆ. ಇಂದು ರಾಜ್ಯದಲ್ಲಿ 69,473 ಕನರಿಗೆ ಲಸಿಕೆಯನ್ನು ಹಾಕಿಸಲಾಗಿದೆ.
Advertisement
ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ ಬಾಗಲಕೋಟೆ 0, ಬಳ್ಳಾರಿ 3, ಬೆಳಗಾವಿ 0, ಬೆಂಗಳೂರು ಗ್ರಾಮಾಂತರ 0, ಬೆಂಗಳೂರು ನಗರ 61, ಬೀದರ್ 0, ಚಾಮರಾಜನಗರ 0, ಚಿಕ್ಕಬಳ್ಳಾಪುರ 0, ಚಿಕ್ಕಮಗಳೂರು 1, ಚಿತ್ರದುರ್ಗ 6, ದಕ್ಷಿಣ ಕನ್ನಡ 4, ದಾವಣಗೆರೆ 0, ಧಾರವಾಡ 0, ಗದಗ 0, ಹಾಸನ 0, ಹಾವೇರಿ 1, ಕಲಬುರಗಿ 1, ಕೊಡಗು 3, ಕೋಲಾರ 1, ಕೊಪ್ಪಳ 0, ಮಂಡ್ಯ 11, ಮೈಸೂರು 11, ರಾಯಚೂರು 0, ರಾಮನಗರ 1, ಶಿವಮೊಗ್ಗ 8, ತುಮಕೂರು 4, ಉಡುಪಿ 0, ಉತ್ತರ ಕನ್ನಡ 0, ವಿಜಯಪುರ 1 ಮತ್ತು ಯಾದಗಿರಿಯಲ್ಲಿ 0 ಪಾಸಿಟಿವ್ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: RSS ಪಥಸಂಚಲನ – ರಸ್ತೆಯುದ್ದಕ್ಕೂ ರಂಗೋಲಿ ಬಿಡಿಸಿ ಹೂಹಾರ ಹಾಕಿ ಸ್ವಾಗತ