ಬೆಂಗಳೂರು: ಇಂದು ರಾಜ್ಯದಲ್ಲಿ ಶೂನ್ಯ ಮರಣ ಪ್ರಮಾಣಯಿದ್ದು, 53 ಜನರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ.
Advertisement
ಆಸ್ಪತ್ರೆಯಿಂದ 44 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದು, ಇಲ್ಲಿವರೆಗೂ ಬಟ್ಟು 39,04,850 ಜನರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 5,301 ಜನರು ಕೋವಿಡ್ ಪರೀಕ್ಷೆಗೆ ಒಳಗಾಗಿದ್ದಾರೆ. ಪ್ರಸ್ತುತ 1,473 ಜನರಿಗೆ ಕೊರೊನಾ ಸೋಂಕು ಇದೆ. ಸೋಂಕಿನ ಪ್ರಮಾಣ 0.99% ಮತ್ತು ಮರಣವಾರು ಪ್ರಮಾಣ 0.00% ಇದೆ. ಈ ವಾರ ಪೂರ್ತಿ ಕೊರೊನಾ ಸೋಂಕಿನಿಂದ ಯಾರು ಮೃತಪಟ್ಟಿಲ್ಲ. ಇದನ್ನೂ ಓದಿ: ಕರ್ನಾಟಕದಲ್ಲಿ ಮುಂದಿನ ವಿಧಾನಸಭಾ ಚುನಾವಣೆಗೆ 50ಜನ ಸಂತರು ಸ್ಪರ್ಧಿಸಲಿದ್ದಾರೆ: ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ
Advertisement
Advertisement
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು 51 ಕೊರೊನಾ ಪ್ರಕರಣ ದಾಖಲಾಗಿದ್ದು, ಶೂನ್ಯ ಮರಣ ಪ್ರಮಾಣವಿದೆ. ರಾಜ್ಯದಲ್ಲಿ ಇಂದು ಒಟ್ಟು 47,019 ಜನರಿಗೆ ಕೊರೊನಾ ಲಸಿಕೆ ಹಾಕಿಸಲಾಗಿದೆ. ಒಟ್ಟು 5,301 ಸ್ಯಾಂಪಲ್(ಆರ್‌ಟಿಪಿಸಿಆರ್ 4,544 + 757 ರ‍್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ.
Advertisement
ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ ಬೆಂಗಳೂರು ನಗರ 51, ದಕ್ಷಿಣಕನ್ನಡ 2 ಕೊರೊನಾ ಪ್ರಕರಣಗಳು ದಾಖಲಾಗಿದೆ. ಉಳಿದ 28 ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣಗಳು ದಾಖಲಾಗಿದೆ. ಇದನ್ನೂ ಓದಿ: ದಲಿತರ ಓಲೈಕೆಗಾಗಿ SC, ST ಸಮಾವೇಶ ಮಾಡಿದ ರೇಣುಕಾಚಾರ್ಯ – ಮಹಿಳೆಯರೊಂದಿಗೆ ಸಖತ್ ಸ್ಟೆಪ್