ಬೆಂಗಳೂರು: ಇಂದು ರಾಜ್ಯದಲ್ಲಿ ಕೊರೊನಾ ಸೋಂಕಿನ ಸಂಖ್ಯೆ ಹೆಚ್ಚಾಗಿದ್ದು, 1,552 ಜನರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಒಬ್ಬರು ಸೋಂಕಿನಿಂದ ಮೃತಪಟ್ಟಿದ್ದಾರೆ.
ಇಂದು ರಾಜ್ಯದಲ್ಲಿ 1,384 ಜನರು ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದು, ಇಲ್ಲಿವರೆಗೂ 39,43,444 ಜನರು ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ಇಂದು 33,671 ಜನರು ಕೋವಿಡ್-19 ಪರೀಕ್ಷೆಯನ್ನು ಮಾಡಿಸಿಕೊಂಡಿದ್ದಾರೆ. ರಾಜಧಾನಿ ಬೆಂಗಳೂರು ನಗರದಲ್ಲಿಯೇ 1,285 ಜನರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ.
Advertisement
Advertisement
ಕೋವಿಡ್-19 ಸೋಂಕಿನ ಖಚಿತ ಪ್ರಕರಣಗಳ ಶೇಕಡಾವಾರು ಪ್ರಮಾಣ 4.60 ಮತ್ತು ಮರಣ ಶೇ. 0.06 ಇದೆ. ಇಂದು 1,00,369 ಜನರು ಲಸಿಕೆಯನ್ನು ಹಾಕಿಸಿಕೊಂಡಿದ್ದಾರೆ. ಇದನ್ನೂ ಓದಿ: ಡಿಸಿ ನೀಡಿದ್ದ ತೀರ್ಪು ಎತ್ತಿಹಿಡಿದ ಹೈಕೋರ್ಟ್ – ನಗರಸಭೆಯ ಏಳು ಸದಸ್ಯರು ಅನರ್ಹ
Advertisement
Advertisement
ಒಟ್ಟು 33,671 ಸ್ಯಾಂಪಲ್ (ಆರ್ಟಿ ಪಿಸಿಆರ್ 25,821 + 7,850 ರ್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ.
ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 03, ಬಳ್ಳಾರಿ 14, ಬೆಳಗಾವಿ 37, ಬೆಂಗಳೂರು ಗ್ರಾಮಾಂತರ 11, ಬೆಂಗಳೂರು ನಗರ 1,285, ಬೀದರ್ 3, ಚಾಮರಾಜನಗರ 7, ಚಿಕ್ಕಬಳ್ಳಾಪುರ 1, ಚಿಕ್ಕಮಗಳೂರು 8, ಚಿತ್ರದುರ್ಗ 1, ದಕ್ಷಿಣ ಕನ್ನಡ 9, ದಾವಣಗೆರೆ 5, ಧಾರವಾಡ 35, ಗದಗ 2, ಹಾಸನ 1, ಹಾವೇರಿ 1, ಕಲಬುರಗಿ 20, ಕೊಡಗು 15, ಕೋಲಾರ 16, ಕೊಪ್ಪಳ 1, ಮಂಡ್ಯ 6, ಮೈಸೂರು 31, ರಾಯಚೂರು 3, ರಾಮನಗರ 2, ಶಿವಮೊಗ್ಗ 7, ತುಮಕೂರು 2, ಉಡುಪಿ 14, ಉತ್ತರ ಕನ್ನಡ 7, ವಿಜಯಪುರ 3 ಪಾಸಿಟಿವ್ ಪ್ರಕರಣ ದಾಖಲಾಗಿದೆ.