ಬೆಂಗಳೂರು: ರಾಜ್ಯದಲ್ಲಿ ನಿನ್ನೆಗೆ ಹೋಲಿಸಿಕೊಂಡರೆ ಇಂದು ಕೊರೊನಾ ಸಂಖ್ಯೆ ಸ್ವಲ್ಪ ಪ್ರಮಾಣದಲ್ಲಿ ಹೆಚ್ಚಾಗಿದೆ. ಇಂದು ರಾಜ್ಯದಲ್ಲಿ 139 ಜನರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ.
Advertisement
ರಾಜ್ಯದಲ್ಲಿ ಇಂದು 55 ಜನರು ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಜಾರ್ಜ್ ಆಗಿದ್ದಾರೆ. ಇಲ್ಲಿವರೆಗೂ 39,05,096 ಜನರು ಕೊರೊನಾದಿಂದ ಗುಣಮುಖರಾಗಿದ್ದಾರೆ. 10,118 ಜನರು ಕೋವಿಡ್-19 ಪರೀಕ್ಷೆಗೆ ಒಳಗಾಗಿದ್ದಾರೆ. ಇಲ್ಲಿವೆರಗೂ ರಾಜ್ಯದಲ್ಲಿ 40,057 ಜನರು ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಇದನ್ನೂ ಓದಿ: ಇನ್-ಸ್ಟಂಟ್ ಡೆಲಿವರಿ ಇಲ್ಲ: 1,300 ಫುಡ್ ಡೆಲಿವರಿ ಬಾಯ್‍ಗಳಿಗೆ ದಂಡ
Advertisement
Advertisement
ಕೋವಿಡ್-19 ಸೋಂಕಿನ ಖಚಿತವಾರು ಪ್ರಮಾಣ 1.37% ಇದ್ದು, 0.00 ಮರಣ ಪ್ರಮಾಣವಿದೆ. ಒಟ್ಟು 1,679 ಕೋವಿಡ್-19 ಸಕ್ರಿಯ ಪ್ರಕರಣಗಳು ಕಂಡುಬಂದಿದೆ. ರಾಜ್ಯದಲ್ಲಿ ಇಂದು ಒಟ್ಟು 44,902 ಜನರಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 10,118 ಸ್ಯಾಂಪಲ್ (ಆರ್‌ಟಿಪಿಸಿಆರ್ 7,936 + 2,182 ರ‍್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ.
Advertisement
ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ ಬೆಂಗಳೂರು ಗ್ರಾಮಾಂತರ 01, ಬೆಂಗಳೂರು ನಗರ 132, ಚಿಕ್ಕಮಗಳೂರು 01, ಚಿತ್ರದುರ್ಗ 02, ದಾವಣಗೆರೆ 01, ಕೋಲಾರ 01, ರಾಮನಗರ 01 ಪಾಸಿಟಿವ್ ಕೇಸ್ ದಾಖಲಾಗಿದೆ. 23 ರಾಜ್ಯಗಳಲ್ಲಿ ಕೊರೊನಾ ಸೋಂಕು ಶೂನ್ಯ ಪ್ರಕರಣಗಳು ಕಂಡುಬಂದಿದೆ. ಇದನ್ನೂ ಓದಿ: ಸೈನಿಕರಿಗಾಗಿ ವೈದ್ಯಕೀಯ ಸಲಕರಣೆ ರವಾನೆ ಮಾಡಿದ ಇನ್ಫೋಸಿಸ್ ಕಂಪನಿ ಸಹ-ಸಂಸ್ಥಾಪಕ ಕೆ.ದಿನೇಶ್