ಬೆಂಗಳೂರು: ಡೇಟಾ ಪೋರ್ಟಲ್‌ನಲ್ಲಿ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡಿರುವುದರಿಂದ ಕಳೆದ ಎರಡು ದಿನಗಳಿಂದ ರಾಜ್ಯದಲ್ಲಿ ದಾಖಲಾಗುತ್ತಿರುವ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಕಡಿಮೆ ದಾಖಲಾಗುತ್ತಿದೆ.
ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 133 ಜನರಿಗೆ ಕೊರೊನಾ ವೈರಸ್ ಇರುವುದು ದೃಢಪಟ್ಟಿದೆ. 517 ಜನರು ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇದನ್ನೂ ಓದಿ: ಪಾಕ್ ವ್ಯಕ್ತಿ ಭೇಟಿಯಾಗಲು ತೆರಳುತ್ತಿದ್ದ ಯುವತಿಯನ್ನು ಗಡಿಯಲ್ಲಿ ತಡೆದ ಪೊಲೀಸರು – ಲುಕ್‍ಔಟ್ ನೋಟಿಸ್ ಜಾರಿ
Advertisement
Advertisement
ಇದುವರೆಗೆ 39,20,283 ಜನರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇಲ್ಲಿವರೆಗೂ 4,438 ಜನರಿಗೆ ಕೊರೊನಾ ಸಕ್ರಿಯ ಪ್ರಕರಣಗಳು ಪತ್ತೆಯಾಗಿದೆ. ಇಂದು ರಾಜ್ಯದಲ್ಲಿ ಶೂನ್ಯ ಮರಣ ಪ್ರಕರಣ ದಾಖಲಾಗಿದೆ. ಕೋವಿಡ್ ಪಾಸಿಟಿವಿಟಿ ದರ ಶೇ.0.40 ಇದ್ದು, ಮೃತರ ಪ್ರಮಾಣ ಶೇ.0.00 ಇದೆ.
Advertisement
Advertisement
ಇಂದು 8,081 ಜನರು ಕೊರೊನಾ ಲಸಿಕೆಯನ್ನು ಹಾಕಿಸಿಕೊಂಡಿದ್ದಾರೆ. ಒಟ್ಟು 32,575 ಸ್ಯಾಂಪಲ್(ಆರ್‌ಟಿಪಿಸಿಆರ್ 25,460 + 7,115 ರ‍್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ.
ಹೆಲ್ತ್ ಬುಲೆಟಿನ್ ವರದಿಗಳ ಪ್ರಕಾರ ಬೆಂಗಳೂರು ನಗರ ಒಂದರಲ್ಲೇ 131 ಪ್ರಕರಣಗಳು ಪತ್ತೆಯಾಗಿದ್ದು, ಬಳ್ಳಾರಿ 1, ಉಡುಪಿಯಲ್ಲಿ 1 ಕೊರೊನಾ ಪ್ರಕರಣ ಪತ್ತೆಯಾಗಿದೆ. ಇದನ್ನೂ ಓದಿ: ಕೋಟೆನಾಡಿನ ಜಲಾಶಯಗಳ ಬಳಿ ಯದುವೀರ್ ಒಡೆಯರ್ ಫ್ಯಾಮಿಲಿ ರೌಂಡ್ಸ್