ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ಕೊರೊನಾ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿದ್ದು, ಇಂದು ಒಟ್ಟು 277 ಹೊಸ ಕೊರೊನಾ ಪ್ರಕರಣ ದಾಖಲಾಗಿದ್ದು, 7 ಜನರು ಸೋಂಕಿನಿಂದ ಸಾವನ್ನಪ್ಪಿದ್ದಾರೆ.
ಬೆಂಗಳೂರು ನಗರದಲ್ಲಿ 169 ಜನರಲ್ಲಿ ಪಾಸಿಟಿವ್ ಪತ್ತೆಯಾಗಿದ್ದು, 1 ಜನರು ಸೋಂಕಿನಿಂದ ಸಾವನ್ನಪ್ಪಿದ್ದಾರೆ. 123 ಜನರು ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.
Advertisement
Advertisement
ರಾಜ್ಯದಲ್ಲಿ 343 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು 8,510 ಸಕ್ರಿಯ ಪ್ರಕರಣಗಳು ಇದ್ದು, ಈವರೆಗೆ ರಾಜ್ಯದಲ್ಲಿ ಒಟ್ಟು 29,39,990 ಜನರಿಗೆ ಕೊರೊನಾ ಬಂದಿದೆ. 29,86,553 ಜನರು ಈವರೆಗೆ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಕೋವಿಡ್-19 ಮರಣ ಪ್ರಮಾಣ 3.52% ರಷ್ಟಿದ್ದರೆ, ಪಾಸಿಟಿವಿಟಿ ರೇಟ್ 0.36% ರಷ್ಟಿದೆ. ಇದನ್ನೂ ಓದಿ: ಬೆತ್ತಲಾಗಿ ಕಳ್ಳತನ – ಅಂತರಾಜ್ಯ ಕಳ್ಳ ದಂಪತಿ ಅರೆಸ್ಟ್
Advertisement
Advertisement
ಇಂದು ರಾಜ್ಯದಲ್ಲಿ ಒಟ್ಟು 75,283 ಸ್ಯಾಂಪಲ್ (ಆರ್ಟಿಪಿಸಿಆರ್ 49,788 + 25,495 ರ್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ.
ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಳ್ಳಾರಿ 3, ಬೆಳಗಾವಿ 1, ಬೆಂಗಳೂರು ಗ್ರಾಮಾಂತರ 4, ಬೆಂಗಳೂರು ನಗರ 169, ಚಿಕ್ಕಬಳ್ಳಾಪುರ 1, ಚಿಕ್ಕಮಗಳೂರು 6, ಚಿತ್ರದುರ್ಗ 2, ದಕ್ಷಿಣ ಕನ್ನಡ 23, ಹಾಸನ 18, ಕೊಡಗು 4, ಮಂಡ್ಯ 4, ಮೈಸೂರು 14, ಶಿವಮೊಗ್ಗ 03, ತುಮಕೂರು 6, ಉಡುಪಿ 9, ಉತ್ತರ ಕನ್ನಡ 6, ಬಾಗಲಕೋಟೆ, ಬೀದರ್, ಚಾಮರಾಜನಗರ, ಧಾರವಾಡ, ದಾವಣಗೆರೆ, ಗದಗ, ಕಲಬುರಗಿ, ಹಾವೇರಿ, ಕೋಲಾರ, ಕೊಪ್ಪಳ, ವಿಜಯಪುರ, ರಾಯಚೂರು, ರಾಮನಗರ ಮತ್ತು ಯಾದಗಿರಿಯಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ರಾಗಿಣಿ ಕೇಸ್ ಉಲ್ಲೇಖ, ಆರ್ಯನ್ಗೆ ಜಾಮೀನು ನೀಡಿ – ಮುಕುಲ್ ರೊಹ್ಟಗಿ ವಾದ