ಬೆಂಗಳೂರು: ದೇಶದಲ್ಲಿ ಕೊರೊನಾ ವೈರಸ್ ಹೊಸ ರೂಪಾಂತರಿ ಓಮಿಕ್ರಾನ್ ಭೀತಿ ಹೆಚ್ಚಾಗಿದೆ. ಈವರೆಗೆ ದೇಶದಲ್ಲಿ 23 ಓಮಿಕ್ರಾನ್ ಪ್ರಕರಣಗಳು ದೃಢಪಟ್ಟಿವೆ. ರಾಜ್ಯದಲ್ಲೂ ಕೊರೊನಾ ಆತಂಕ ಮುಂದುವರಿದಿದ್ದು, ಇಂದು ಕರ್ನಾಟಕದಲ್ಲಿ ಒಟ್ಟು 299 ಕೊರೊನಾ ಪಾಸಿಟಿವ್ ಕೇಸ್ ಪತ್ತೆಯಾಗಿದ್ದು, 6 ಮರಣ ಪ್ರಕರಣ ದಾಖಲಾಗಿದೆ.
Advertisement
ರಾಜ್ಯದಲ್ಲಿ 260 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು 7,100 ಸಕ್ರಿಯ ಪ್ರಕರಣಗಳು ಇದ್ದು, ಈವರೆಗೆ ರಾಜ್ಯದಲ್ಲಿ ಒಟ್ಟು 29,98,699 ಮಂದಿಗೆ ಕೊರೊನಾ ಬಂದಿದೆ. 29,53,327 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಕೋವಿಡ್-19 ಮರಣ ಪ್ರಮಾಣ ಶೇ.2.00 ರಷ್ಟಿದ್ದರೇ, ಪಾಸಿಟಿವಿಟಿ ರೇಟ್ ಶೇ.0.36 ರಷ್ಟಿದೆ. ಇದನ್ನೂ ಓದಿ: ಜಿನೋಮ್ ಸೀಕ್ವೆನ್ಸಿಂಗ್ ಲ್ಯಾಬ್ ಸ್ಥಾಪನೆಗೆ ಕ್ರಮ: ಬೊಮ್ಮಾಯಿ
Advertisement
Advertisement
ರಾಜ್ಯದಲ್ಲಿ ಇಂದು ಒಟ್ಟು 3,54,946 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 81,194 ಸ್ಯಾಂಪಲ್ (ಆರ್ಟಿ- ಪಿಸಿಆರ್ 61,041 + 20,153 ರ್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದನ್ನೂ ಓದಿ: ಓಮಿಕ್ರಾನ್ನಿಂದ ಚೇತರಿಸಿಕೊಂಡಿದ್ದ ಬೆಂಗಳೂರಿನ ವೈದ್ಯನಿಗೆ ಮತ್ತೆ ಪಾಸಿಟಿವ್!
Advertisement
ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 0, ಬಳ್ಳಾರಿ 3, ಬೆಳಗಾವಿ 1, ಬೆಂಗಳೂರು ಗ್ರಾಮಾಂತರ 3, ಬೆಂಗಳೂರು ನಗರ 215, ಬೀದರ್ 0, ಚಾಮರಾಜನಗರ 0, ಚಿಕ್ಕಬಳ್ಳಾಪುರ 1, ಚಿಕ್ಕಮಗಳೂರು 4, ಚಿತ್ರದುರ್ಗ 0, ದಕ್ಷಿಣ ಕನ್ನಡ 4, ದಾವಣಗೆರೆ 0, ಧಾರವಾಡ 6, ಗದಗ 0, ಹಾಸನ 6, ಹಾವೇರಿ 0, ಕಲಬುರಗಿ 1, ಕೊಡಗು 12, ಕೋಲಾರ 2, ಕೊಪ್ಪಳ 0, ಮಂಡ್ಯ 2, ಮೈಸೂರು 11, ರಾಯಚೂರು 0, ರಾಮನಗರ 0, ಶಿವಮೊಗ್ಗ 4, ತುಮಕೂರು 4, ಉಡುಪಿ 3, ಉತ್ತರ ಕನ್ನಡ 5, ವಿಜಯಪುರ 2, ಯಾದಗಿರಿಯಲ್ಲಿ ಶೂನ್ಯ ಪಾಸಿಟಿವ್ ಪ್ರಕರಣ ದಾಖಲಾಗಿದೆ.