ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ದಿನೇ ದಿನೆ ಏರುತ್ತಿದೆ. ಇಂದು ಒಂದೇ ದಿನ ರಾಜ್ಯದಲ್ಲಿ 25 ಸಾವಿರ ಪ್ರಕರಣ ದೃಢಪಟ್ಟಿದ್ದು, ಬೆಂಗಳೂರಿನಲ್ಲೇ 18 ಸಾವಿರ ಮಂದಿಗೆ ಸೋಂಕು ತಗುಲಿದೆ.
ಕೋವಿಡ್ ಪ್ರಕರಣಗಳ ಕುರಿತು ಸಚಿವ ಡಾ. ಕೆ.ಸುಧಾಕರ್ ಟ್ವಿಟ್ಟರ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದು, ರಾಜ್ಯದಲ್ಲಿ ಇಂದು 25,005 ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ. ಬೆಂಗಳೂರಿನಲ್ಲಿ 18,347 ಮಂದಿಗೆ ಸೋಂಕು ತಗುಲಿದೆ. ಪಾಸಿಟಿವಿಟಿ ದರ ಶೇ.12.39 ಆಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ ಕೋವಿಡ್ ನಿರ್ವಹಣೆಗೆ ತೆಗೆದುಕೊಂಡ ಕ್ರಮಗಳ ಬಗ್ಗೆ ಮೋದಿಗೆ ವಿವರಿಸಿದ ಬೊಮ್ಮಾಯಿ
ರಾಜ್ಯಾದ್ಯಂತ ಈವರೆಗೂ 2,363 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. 1,15,733 ಸಕ್ರಿಯ ಪ್ರಕರಣಗಳಿವೆ. ಸೋಂಕಿನಿಂದಾಗಿ ಇಂದು 8 ಮಂದಿ ಸಾವನ್ನಪ್ಪಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಕೋವಿಡ್ ಪ್ರಕರಣ ಹೆಚ್ಚಲು ಕಾಂಗ್ರೆಸ್ ಪಾದಯಾತ್ರೆಯೂ ಕಾರಣ: ಸಚಿವ ಸುಧಾಕರ್
New cases cross 25k in Karnataka and 18k in Bengaluru:
◾New cases in State: 25,005
◾New cases in B'lore: 18,374
◾Positivity rate in State: 12.39%
◾Discharges: 2,363
◾Active cases State: 1,15,733 (B'lore- 91k)
◾Deaths:08 (B'lore- 03)
◾Tests: 2,01,704#COVID19 #Omicron
— Dr Sudhakar K (@mla_sudhakar) January 13, 2022
ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 5, ಬಳ್ಳಾರಿ 185, ಬೆಳಗಾವಿ 276, ಬೆಂಗಳೂರು ಗ್ರಾಮಾಂತರ 390, ಬೆಂಗಳೂರು ನಗರ 18,374, ಬೀದರ್ 97, ಚಾಮರಾಜನಗರ 176, ಚಿಕ್ಕಬಳ್ಳಾಪುರ 119, ಚಿಕ್ಕಮಗಳೂರು 90, ಚಿತ್ರದುರ್ಗ 78, ದಕ್ಷಿಣ ಕನ್ನಡ 625, ದಾವಣಗೆರೆ 92, ಧಾರವಾಡ 399, ಗದಗ 69, ಹಾಸನ 490, ಹಾವೇರಿ 19, ಕಲಬುರಗಿ 346, ಕೊಡಗು 72, ಕೋಲಾರ 293, ಕೊಪ್ಪಳ 32, ಮಂಡ್ಯ 406, ಮೈಸೂರು 695, ರಾಯಚೂರು 122, ರಾಮನಗರ 112, ಶಿವಮೊಗ್ಗ 212, ತುಮಕೂರು 547, ಉಡುಪಿ 349, ಉತ್ತರ ಕನ್ನಡ 250, ವಿಜಯಪುರ 39 ಮತ್ತು ಯಾದಗಿರಿಯಲ್ಲಿ 16 ಪಾಸಿಟಿವ್ ಪ್ರಕರಣ ದಾಖಲಾಗಿದೆ.