ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಹಾವು-ಏಣಿ ಆಟ ಮುಂದುವರಿದಿದೆ. ಇಂದು 676 ಮಂದಿಗೆ ಕೋವಿಡ್ ದೃಢಪಟ್ಟಿದೆ. ನಿನ್ನೆಗಿಂತ (738) ಇಂದು ಸೋಂಕಿನ ಸಂಖ್ಯೆ ಇಳಿಕೆಯಾಗಿದೆ. ಇಂದು ಸೋಂಕಿತರಿಗಿಂತ ಗುಣಮುಖರಾದವರ (804) ಸಂಖ್ಯೆಯೇ ಹೆಚ್ಚಿದೆ.
Advertisement
ಬೆಂಗಳೂರಿನಲ್ಲಿ ಸೋಂಕಿತರ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ. ಇಂದು ಸಹ ನಗರದಲ್ಲಿ 626 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಆ ಮೂಲಕ ನಗರದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 4,665ಕ್ಕೆ ಏರಿಕೆ ಕಂಡಿದೆ. ಇಂದು ಕೂಡ ರಾಜ್ಯದಲ್ಲಿ ಯಾವುದೇ ಮರಣ ಪ್ರಕರಣ ದಾಖಲಾಗಿಲ್ಲ. ರಾಜ್ಯದಲ್ಲಿ ಈವರೆಗೆ ಒಟ್ಟು 40,071 ಮರಣ ಪ್ರಕರಣ ದಾಖಲಾಗಿದೆ. ಕೋವಿಡ್ ಪಾಸಿಟಿವಿಟಿ ದರ ಶೇ.7.19 ಇದ್ದು, ಮೃತರ ಪ್ರಮಾಣ ಶೇ.0.00 ಇದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 4,892ಕ್ಕೆ ಏರಿದೆ. ಇದನ್ನೂ ಓದಿ: ಸಾಲುಮರದ ತಿಮ್ಮಕ್ಕಗೆ BDAಯಿಂದ ನಿವೇಶನ ಹಂಚಿಕೆ
Advertisement
Advertisement
ಈವರೆಗೆ ರಾಜ್ಯದಲ್ಲಿ ಒಟ್ಟು 39,62,775 ಮಂದಿಗೆ ಕೊರೊನಾ ಬಂದಿದೆ. ಒಟ್ಟು 39,17,770 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಒಟ್ಟು 2,30,149 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ.
Advertisement
ಒಟ್ಟು 9,400 ಸ್ಯಾಂಪಲ್ (ಆರ್‌ಟಿಪಿಸಿಆರ್ 3,624 + 5,776 ರ್‍ಯಾಪಿಡ್ ಆ್ಯಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದನ್ನೂ ಓದಿ: ಆರೋಗ್ಯದಲ್ಲಿ ಚೇತರಿಕೆ, ನಟ ದಿಗಂತ್ ಆಸ್ಪತ್ರೆಯಿಂದ ಡಿಸ್ಚಾರ್ಜ್
ಬೆಂಗಳೂರು ನಗರ ಒಂದರಲ್ಲೇ 626 ಪ್ರಕರಣಗಳು ಪತ್ತೆಯಾಗಿದ್ದು, ಮೈಸೂರು ಜಿಲ್ಲೆಯಲ್ಲಿ 12, ಉತ್ತರ ಕನ್ನಡದಲ್ಲಿ 8, ಬಳ್ಳಾರಿ ಮತ್ತು ಉಡುಪಿ ಜಿಲ್ಲೆಯಲ್ಲಿ ತಲಾ 5, ದಕ್ಷಿಣ ಕನ್ನಡದಲ್ಲಿ 4, ಬೆಳಗಾವಿಯಲ್ಲಿ 3, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಧಾರವಾಡ, ಕಲಬುರಗಿ, ಮಂಡ್ಯ, ಶಿವಮೊಗ್ಗ ಜಿಲ್ಲೆಗಳಲ್ಲಿ ತಲಾ 2, ತುಮಕೂರು ಜಿಲ್ಲೆಯಲ್ಲಿ 1 ಕೋವಿಡ್ ಪ್ರಕರಣ ದಾಖಲಾಗಿದೆ. ಉಳಿದ ಜಿಲ್ಲೆಯಲ್ಲಿ ಶೂನ್ಯ ಪ್ರಕರಣ ವರದಿಯಾಗಿದೆ.