ಬೆಂಗಳೂರು: ಕಳೆದ ಎರಡು ದಿನಗಳಿಂದ ಸತತ ಇನ್ನೂರರ ಗಡಿ ದಾಟಿದ್ದ ಕೊರೊನಾ ಸೋಂಕಿತರ ಸಂಖ್ಯೆ ಇಂದು 300ರ ಗಡಿ ದಾಟಿದೆ.
ಇನ್ನೊಂದೆಡೆ ಬೆಂಗಳೂರು ನಗರದಲ್ಲಿ ಕಳೆದ ಕೆಲ ದಿನಗಳಿಂದ ಇನ್ನೂರಕ್ಕೂ ಅಧಿಕ ಪಾಸಿಟಿವ್ ಕೇಸ್ಗಳು ವರದಿಯಾಗುತ್ತಿದೆ. ಇಂದು ಬೆಂಗಳೂರು ನಗರದಲ್ಲೇ 291 ಕೇಸ್ ದಾಖಲಾಗಿದೆ.
Advertisement
Advertisement
ಬೆಂಗಳೂರಿನಲ್ಲಿ ನಿನ್ನೆಗಿಂತ ಸೋಂಕು ಏರಿಕೆಯಾಗಿದ್ದು ರಾಜ್ಯದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 2,414ಕ್ಕೆ ಏರಿಕೆ ಕಂಡಿದೆ. ಇದನ್ನೂ ಓದಿ: ಕೊರೊನಾ ಭೀತಿ: ಸಾರ್ವಜನಿಕ ಸ್ಥಳಗಳಲ್ಲಿ ಮತ್ತೆ ಮಾಸ್ಕ್ ಕಡ್ಡಾಯ
Advertisement
ಇಂದು 146 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದ ಇಂದಿನ ಪಾಸಿಟಿವಿಟಿ ರೇಟ್ ಶೇ. 1.40 ದಾಖಲಾಗಿದ್ದು, ರಾಜ್ಯದಲ್ಲಿ ಈವರೆಗೆ ಒಟ್ಟು 40,066 ಮರಣ ಪ್ರಕರಣ ಪತ್ತೆಯಾಗಿದೆ.
Advertisement
ಈವರೆಗೆ ರಾಜ್ಯದಲ್ಲಿ ಒಟ್ಟು 39,53,359 ಮಂದಿಗೆ ಕೊರೊನಾ ಬಂದಿದೆ. ಒಟ್ಟು 39,10,837 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಒಟ್ಟು 6,426 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 21,413 ಸ್ಯಾಂಪಲ್ (ಆರ್ಟಿಪಿಸಿಆರ್ 16,533 + 4,880 ರ್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದನ್ನೂ ಓದಿ: ಕೋವಿಡ್ ಬೂಸ್ಟರ್ ಶಾಟ್ ಆಗಿ ಕಾರ್ಬೆವ್ಯಾಕ್ಸ್ ತೆಗೆದುಕೊಳ್ಳಬಹುದು: DCGI
ಬೆಂಗಳೂರು ನಗರದಲ್ಲಿ 291, ದಕ್ಷಿಣ ಕನ್ನಡದಲ್ಲಿ 2, ಮೈಸೂರಿನಲ್ಲಿ 3, ಬಳ್ಳಾರಿ, ಬೆಳಗಾವಿ, ಚಿತ್ರದುರ್ಗ, ಶಿವಮೊಗ್ಗ, ಉಡುಪಿ ಜಿಲ್ಲೆಗಳಲ್ಲಿ ತಲಾ ಒಂದು ಪ್ರಕರಣ ಪತ್ತೆಯಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.