ಹೈದರಾಬಾದ್: ಇ-ಆಡಳಿತದ 24ನೇ ರಾಷ್ಟ್ರೀಯ ಸಮ್ಮೇಳನದಲ್ಲಿ ಕರ್ನಾಟಕಕ್ಕೆ ರಾಷ್ಟ್ರ ಪ್ರಶಸ್ತಿ ಸಿಕ್ಕಿದೆ.
ಹೈದರಾಬಾದ್‍ನಲ್ಲಿ ಇ-ಆಡಳಿತದ 24ನೇ ರಾಷ್ಟ್ರೀಯ ಸಮ್ಮೇಳನ ನಡೆಯಿತು. ಈ ವೇಳೆ ಕರ್ನಾಟಕ ರಾಜ್ಯ ಕೋವಿಡ್-19 ವಾರ್ ರೂಮ್ ಗೆ ಕೋವಿಡ್ ನಿರ್ವಹಣೆಯಲ್ಲಿ ಮಾಹಿತಿ ಮತ್ತು ಸಂವಹನ ತಂತ್ರಜ್ಞಾನವನ್ನು(ಐಸಿಟಿ) ಬಳಸುವ ವಿಭಾಗಕ್ಕೆ ರಾಷ್ಟ್ರ ಪ್ರಶಸ್ತಿ ಲಭಿಸಿದೆ. ಈ ಪ್ರಶಸ್ತಿಯನ್ನು ಕೋವಿಡ್ ವಾರ್ ರೂಮ್ ಮುಖ್ಯಸ್ಥ ಮುನಿಶ್ ಮೌದ್ಗಿಲ್ ಸ್ವೀಕರಿಸಿದರು. ಇದನ್ನೂ ಓದಿ: ಮೋದಿ, ಯೋಗಿ ಫೋಟೋಗಳೊಂದಿಗೆ ಉಚಿತ ಆಹಾರ ಪ್ಯಾಕೆಟ್‍ಗಳನ್ನು ವಿತರಿಸುವಂತಿಲ್ಲ
ನಂತರ ಈ ಕುರಿತು ಮಾತನಾಡಿದ ಅವರು, ಕೋವಿಡ್ ವಾರಿಯರ್ಸ್ ಗಳಿಗೆ ನಾವು ಸಪೋರ್ಟ್ ನೆಟ್ ವರ್ಕ್ ಆಗಿದ್ದೇವೆ. ಸರಿಯಾದ ಸಮಯಕ್ಕೆ ಸೂಕ್ತ ಮಾಹಿತಿಯನ್ನು ನೀಡಿ ಜೀವ ಉಳಿಸುವ ಪ್ರಯತ್ನ ಮಾಡುತ್ತಿದ್ದೇವೆ. ಕೋವಿಡ್ ನಿರ್ವಹಣೆಗೆ ಬೆಂಬಲ ವ್ಯವಸ್ಥಿತವಾಗಿದೆ. ನಾವು ಗಡಿಯಾರದಲ್ಲಿ ಇರುವ ಮುಳ್ಳುಗಳಂತೆ ಕೆಲಸ ಮಾಡುತ್ತಿದ್ದೇವೆ. ಸಾಂಕ್ರಾಮಿಕ ರೋಗದ ಬಳಿಕ ಹೆಚ್ಚಿನ ಸಿಬ್ಬಂದಿ ಒಂದು ದಿನವೂ ರಜೆ ತೆಗೆದುಕೊಂಡಿಲ್ಲ ಎಂದು ವಿವರಿಸಿದರು.
ರಾಜ್ಯಕ್ಕೆ ಮಾರ್ಚ್ 2020 ರಲ್ಲಿ ಮೊದಲ ಅಲೆ ಅಪ್ಪಳಿಸಿತ್ತು. ಈ ಅಲೆ ಆರಂಭವಾದ 2-3 ದಿನಗಳಲ್ಲಿ ವಾರ್ಡ್ ರೂಮ್ ಅನ್ನು ಸ್ಥಾಪಿಸಲಾಗಿತ್ತು. ಈ ವೇಳೆ ಕೊರೊನಾ ವಾಚ್ ಮೊಬೈಲ್ ಅಪ್ಲಿಕೇಶನ್ ಅನ್ನು ಮೊದಲು ರಚಿಸಲಾಯಿತು. ಇಡೀ ಭಾರತದಲ್ಲಿ ಸೋಂಕಿತರ ಸಂಪರ್ಕ ಪತ್ತೆಹಚ್ಚುವಿಕೆಗಾಗಿ ಅಪ್ಲಿಕೇಶನ್ ಅನ್ನು ಬಳಸುತ್ತಿರುವ ಏಕೈಕ ರಾಜ್ಯ ಕರ್ನಾಟಕವಾಗಿದೆ ಎಂದು ಹೆಮ್ಮೆಯಿಂದ ಹೇಳಿದರು.
ಲೈನ್ ಲಿಸ್ಟ್ ಸಿಸ್ಟಮ್ ಎಂದು ಕರೆಯಲ್ಪಡುವ ರೋಗಿಗಳ ನಿರ್ವಹಣಾ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಲಾಗಿದೆ. ನಮ್ಮ ರಾಜ್ಯವನ್ನೇ ಹರಿಯಾಣವೂ ಅನುಸರಿಸುತ್ತಿದೆ. ಕೊರೊನಾ ಮೊದಲ ಅಲೆ ಸಂದರ್ಭದಲ್ಲಿ ಪಾಂಡಿಚೆರಿ ರಾಜ್ಯಪಾಲ ಕಿರಣ್ ಬೇಡಿ ಅವರು ಕೋವಿಡ್ ವಾರ್ ರೂಮ್ ನ್ನು ಸಂಪರ್ಕಿಸಿ, ಸಲಹೆಗಳನ್ನು ಪಡೆದುಕೊಂಡಿದ್ದರು. ಅಲ್ಲಿಗೇ ತಂಡವೊಂದನ್ನು ರವಾನಿಸಿ ಮಾಹಿತಿಯನ್ನು ನೀಡಲಾಗಿತ್ತು. ಇದಾದ ಬಳಿಕ ಪ್ರತೀ ರಾಜ್ಯವೂ ಇದೇ ಮಾರ್ಗವನ್ನು ಅನುಸರಿಸುತ್ತಿವೆ ಎಂದು ತಿಳಿಸಿದರು.
ಸೋಂಕಿನ ನಿರ್ವಹಣೆಗೆ ಐಟಿಯೊಂದಿಗೆ ವ್ಯವಸ್ಥಿತ ಮತ್ತು ಸಂಘಟಿತ ವಿಧಾನದ ಅಗತ್ಯವಿದೆ. ನವೆಂಬರ್ 2020ರಲ್ಲಿ, ಸ್ಟ್ಯಾನ್‍ಫೋರ್ಡ್ ವಿಶ್ವವಿದ್ಯಾಲಯವು ವಾರ್ ರೂಮ್ ಅನ್ನು ಪರಿಶೀಲನೆ ಮಾಡಿತ್ತು. ಬಳಿಕ ಕೋವಿಡ್-19 ನಿರ್ವಹಣೆಯಲ್ಲಿ ಕೋವಿಡ್ ವಾರ್ ರೂಮ್ ಅತ್ಯಂತ ಪರಿಣಾಮಕಾರಿ ಎಂದು ಹೇಳಿತ್ತು. ನಮ್ಮ ಕಾಂಟ್ಯಾಕ್ಟ್ ಟ್ರೇಸಿಂಗ್ ಮಾದರಿಯನ್ನು ಭಾರತ ಸರ್ಕಾರವು ಜೂನ್-ಜುಲೈ 2020 ರಲ್ಲಿ ಆಯ್ಕೆ ಮಾಡಿತ್ತು. ಅದನ್ನು ಕಾರ್ಯಗತಗೊಳಿಸಲು ಇತರ ರಾಜ್ಯಗಳಿಗೂ ಸೂಚನೆ ನೀಡಿತ್ತು ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: ನನ್ನನ್ನ ಜ್ಯೋತಿಷಿ ಎಂದು ಕರೆದರೂ ಪರವಾಗಿಲ್ಲ, ಪಂಜಾಬ್‍ನಲ್ಲಿ ಕಾಂಗ್ರೆಸ್ ಅಧಿಕಾರ ಕಳೆದುಕೊಳ್ಳುತ್ತೆ: ಸಿ.ಟಿ.ರವಿ
ಪ್ರಸ್ತುತ ವಾರ್ ರೂಮ್‍ನಲ್ಲಿ ಸಂಯೋಜಕರು, ತಾಂತ್ರಿಕ ಮತ್ತು ಇತರ ಸಿಬ್ಬಂದಿಯನ್ನು ಹೊರತುಪಡಿಸಿ ಸುಮಾರು 20-30 ಜನರು ಕೆಲಸ ಮಾಡುತ್ತಿದ್ದಾರೆ. ಈಗ ಮೂರನೇ ಅಲೆಯಲ್ಲಿಯೂ ಬಂದಿದ್ದು, ಪರಿಣಾಮಕಾರಿಯಾಗಿ ಕೆಲಸ ಮಾಡುತ್ತಿದ್ದಾರೆ. ಅದಕ್ಕಾಗಿ ಮಾಹಿತಿ ಸಂಗ್ರಹಣೆ ಮತ್ತು ವ್ಯವಸ್ಥಿತ ನಿರ್ವಹಣೆಯನ್ನು ಖಚಿತಪಡಿಸಿಕೊಳ್ಳಲು ವಾರ್ ರೂಮ್ ಶ್ರಮಿಸುತ್ತಿದೆ ಎಂದು ತಮ್ಮ ಪರಿಶ್ರಮದ ಬಗ್ಗೆ ತಿಳಿಸಿದರು.