ಬೆಂಗಳೂರು: ದೆಹಲಿಯ ರಾಜಪಥ್‍ನಲ್ಲಿ 73ನೇ ಗಣರಾಜ್ಯೋತ್ಸವ ದಿನಾಚರಣೆಯ ಪರೇಡ್‍ನಲ್ಲಿ ಗಮನಸೆಳೆದ ಕರ್ನಾಟಕ ಪಾರಂಪರಿಕ ಕರಕುಶಲ ವಸ್ತುಗಳಗಳ ತೊಟ್ಟಿಲು ವಿಷಯಧಾರಿತ ರಾಜ್ಯದ ಸ್ತಬ್ಧಚಿತ್ರಕ್ಕೆ ದ್ವಿತೀಯ ಸ್ಥಾನ ದೊರೆತಿದೆ.
Advertisement
ಪರೇಡ್‍ನಲ್ಲಿ ಉತ್ತಮವಾಗಿ ಪ್ರದರ್ಶನಗೊಂಡ ರಾಜ್ಯಗಳ ಸ್ತಬ್ಧಚಿತ್ರಗಳ ಪೈಕಿ ಉತ್ತರ ಪ್ರದೇಶಕ್ಕೆ ಮೊದಲ ಸ್ಥಾನ ಸಿಕ್ಕರೆ, ದ್ವಿತೀಯ ಸ್ಥಾನ ಕರ್ನಾಟಕ್ಕೆ ದೊರೆತಿದೆ. ಮೇಘಾಲಯಕ್ಕೆ ತೃತೀಯ ಸ್ಥಾನ ನೀಡಲಾಗಿದೆ. ಇದನ್ನೂ ಓದಿ: ರಾಜಪಥದಲ್ಲಿ ಭಾರತದ ವೈಭವ ಅನಾವರಣ
Advertisement
#RepublicDay ನಲ್ಲಿ ರಾಜ್ಯದಿಂದ ಪ್ರದರ್ಶನಗೊಂಡ 'ಕರ್ನಾಟಕ: ಪಾರಂಪರಿಕ ಕರಕುಶಲ ವಸ್ತುಗಳ ತೊಟ್ಟಿಲು' ವಿಷಯದ ಸ್ತಬ್ಧಚಿತ್ರಕ್ಕೆ ದ್ವಿತೀಯ ಸ್ಥಾನ ದೊರೆತಿದೆ.
ಸ್ತಬ್ಧಚಿತ್ರವನ್ನು ರೂಪಿಸಿದ ಹಾಗೂ ಪ್ರದರ್ಶನದಲ್ಲಿ ಪಾಲ್ಗೊಂಡ ಕಲಾವಿದರು, ಅಧಿಕಾರಿ, ಸಿಬ್ಬಂದಿ ವರ್ಗಕ್ಕೆ ಹಾರ್ದಿಕ ಅಭಿನಂದನೆಗಳು ????@PMOIndia @CMofKarnataka pic.twitter.com/eFHefuAdOU
— DIPR Karnataka (@KarnatakaVarthe) February 4, 2022
Advertisement
ಉತ್ತಮ ಪರೇಡ್ ನಡೆಸಿದ ಮೂರು ಸೈನ್ಯ ಪಡೆಗಳ ಪೈಕಿ ನೌಕಾಪಡೆಯ ಮಾರ್ಚಿಂಗ್ ಕಾಂಟಿಜೆಂಟ್ ಪ್ರಥಮ ಸ್ಥಾನ ಪಡೆದಿದೆ, ಇತರ ಕಾಂಟಿಜೆಂಟ್‍ಗಳ ಪೈಕಿ ಸಿಐಎಸ್‍ಎಫ್ ಕಾಂಟಿಜೆಂಟ್‍ಗೆ ದ್ವಿತೀಯ ಸ್ಥಾನ ನೀಡಲಾಗಿದೆ. ಕೇಂದ್ರ ಸಚಿವಾಲಯದ ಸ್ತಬ್ಧಚಿತ್ರಗಳ ಪೈಕಿ ಶಿಕ್ಷಣ ಸಚಿವಾಲಯ ಮತ್ತು ನಾಗರಿಕ ವಿಮಾನಯಾನ ಸಚಿವಾಲಯ ಜಂಟಿ ಅಗ್ರಸ್ಥಾನ ಪಡೆದುಕೊಂಡಿದೆ.
Advertisement
ದಕ್ಷಿಣ ಭಾರತದಿಂದ ಕರ್ನಾಟಕದ ಏಕೈಕ ಸ್ತಬ್ಧ ಚಿತ್ರ:
ಪ್ರತಿ ವರ್ಷದಂತೆ ಈ ವರ್ಷವೂ ದೆಹಲಿ ರಾಜಪಥ್‍ನಲ್ಲಿ ಸಂಚರಿಸಿದ ಕರ್ನಾಟಕದ ಸ್ತಬ್ಧ ಚಿತ್ರ ಗಮನಸೆಳೆಯಿತು. ಈ ಬಾರಿ ದಕ್ಷಿಣ ಭಾರತದಿಂದ ಕರ್ನಾಟಕದ ಏಕೈಕ ಸ್ತಬ್ಧ ಚಿತ್ರ ಪ್ರದರ್ಶನಗೊಂಡಿತು. ಕರ್ನಾಟಕದ ಟ್ಯಾಬ್ಲೋ ಸತತ 13ನೇ ವರ್ಷವೂ ಪ್ರದರ್ಶನಗೊಂಡಿತು. ಈ ಬಾರಿ ಕರ್ನಾಟಕ ಪಾರಂಪರಿಕ ಕರಕುಶಲ ವಸ್ತುಗಳಗಳ ತೊಟ್ಟಿಲು ವಿಷಯಧಾರಿತ ಸ್ತಬ್ಧ ಚಿತ್ರ ಪ್ರದರ್ಶನಗೊಂಡಿದ್ದು, ಟ್ಯಾಬ್ಲೋ ತಯಾರಿ ಕಾರ್ಯದಲ್ಲಿ ಕಲಾವಿದ ಶಶಿಧರ್ ಅಡಪ ನೇತೃತ್ವ ವಹಿಸಿದ್ದರು. ಈ ಸ್ತಬ್ಧ ಚಿತ್ರವನ್ನು ತಯಾರು ಮಾಡಲು ಒಂದೂವರೆ ತಿಂಗಳು ಕಾಲ ನೂರಾರು ಜನರು ಒಟ್ಟಾಗಿ ಸೇರಿ ಕೆಲಸ ನಿರ್ವಹಿಸಿ ಕರ್ನಾಟಕದ ಕರಕುಶಲ ಕಲೆಯನ್ನು ದೇಶಕ್ಕೆ ಪರಿಚಯಿಸಿದ್ದರು.
ಸ್ತಬ್ಧ ಚಿತ್ರದಲ್ಲಿ ಏನಿತ್ತು?
ಕರ್ನಾಟಕದ ಸ್ತಬ್ದಚಿತ್ರದ ಮುಂಭಾಗದಲ್ಲಿ ಮೈಸೂರಿನ ಬೀಟೆ ಮರ ಹಾಗೂ ದಂತದ ಕಸೂತಿ ಕೆತ್ತನೆಯ ಬೃಹದಾಕಾರದ ಆನೆಯ ಕಲಾಕೃತಿ ಇತ್ತು. ಈ ಕಲಾಕೃತಿಯ ಕೆಳಗಿನ ಭಾಗದಲ್ಲಿ ಯಕ್ಷಗಾನ ಬೊಂಬೆಯಾಟದ ಚಿತ್ರಣವಿದೆ ಜೊತೆಗೆ ಗಂಜೀಫಾ ಕಲಾಕೃತಿ ಇತ್ತು. ಸ್ತಬ್ದಚಿತ್ರದ ಮಧ್ಯದಲ್ಲಿ ಕಣ್ಮನ ಸೆಳೆಯುವ ಬಿದರಿ ಕಲೆಯಲ್ಲಿ ರೂಪಿಸಿರುವ ದೊಡ್ಡ ಪ್ರಮಾಣದ ಹೂಜಿ. ಹೂಜಿಯ ಇಕ್ಕೆಲೆಗಳಲ್ಲಿ ಕರಾವಳಿಯ ವೈಶಿಷ್ಠ್ಯವನ್ನು ಬಿಂಬಿಸುವ ಭೂತಾರಾಧನೆಯ ಮುಖವಾಡವನ್ನು ಹೊತ್ತ ಲೋಹದ ಕಲಾಕೃತಿಗಳು, ಹೂಜಿಯ ಹಿಂಬದಿಯಲ್ಲಿ ಬಿದರಿ ಕಲೆ ಬಳಸಿ ಸಿದ್ದಪಡಿಸಿರುವ ನವಿಲುಗಳಿದ್ದವು. ಅಲ್ಲದೆ, ಮಧ್ಯ ಭಾಗದ ಹಿಂಬಂದಿಯಲ್ಲಿ ಕಿನ್ನಾಳದ ವೈಶಿಷ್ಠಪೂರ್ಣ ಕಲೆಯಲ್ಲಿ ಮೇಳೈಸಿದ ಬೃಹತ್ ಗಾತ್ರದ ಆಂಜನೇಯ ಸ್ವಾಮಿಯ ಮೂರ್ತಿ ಸ್ತಬ್ದಚಿತ್ರದ ಕೇಂದ್ರ ಬಿಂದುವಿನಂತೆ ಕಂಗೊಳಿಸಿತ್ತು. ಇದನ್ನೂ ಓದಿ: ದೆಹಲಿಯಲ್ಲಿ ಸಂಚರಿಸಲಿದೆ ಕರ್ನಾಟಕದ ಪಾರಂಪರಿಕ ಕರಕುಶಲ ವಸ್ತುಗಳ ತೊಟ್ಟಿಲು
ಆಂಜನೇಯ ಸ್ವಾಮಿಯ ಮೂರ್ತಿಯ ಅಕ್ಕ-ಪಕ್ಕದಲ್ಲಿ ಚೆನ್ನಪಟ್ಟಣದ ಬೊಂಬೆಗಳು, ಮೆರುಗೆಣ್ಣೆಯ ಆಟಿಕೆಗಳು, ನವಲಗುಂದ ಧರಿ (ಜಮಖಾನೆ), ಶ್ರೀಗಂಧ ಮರದ ಕೆತ್ತನೆಯ ಹಾಗೂ ಮಣ್ಣಿನ ಕಲಾಕೃತಿಗಳು ಇತ್ತು. ಸ್ತಬ್ದಚಿತ್ರದ ಕೊನೆಯಲ್ಲಿ ಪಾರಂಪರಿಕ ಕರಕುಶಲ ಉತ್ಪನ್ನಗಳ ತಯಾರಿಕೆಗೆ ಉತ್ತೇಜನ ನೀಡಿ ಪ್ರೋತ್ಸಾಹಿಸಿದ ಕಲಾಲೋಕದ ಮಹಾಮಾತೆ, ಸ್ವಾತಂತ್ರ್ಯ ಹೋರಾಟಗಾರ್ತಿ ಹಾಗೂ ಕನ್ನಡತಿ ಕಮಲಾದೇವಿ ಚಟ್ಟೋಪಾದ್ಯಾಯ ಅವರು ಗಂಧದ ಪೆಟ್ಟಿಗೆ, ನವಿಲಿನಾಕಾರದ ದೀಪದ ಕಲಶಗಳು, ಸಂಡೂರಿನ ಬಾಳೆ ನಾರಿನ ಚೀಲಗಳು ಹೀಗೆ ವಿವಿಧ ಕರಕುಶಲ ವಸ್ತುಗಳನ್ನು ಬಾಗಿನ ರೂಪದಲ್ಲಿ ನೀಡುತ್ತಿರುವ ದೃಶ್ಯಾವಳಿಯ ದೊಡ್ಡ ಪ್ರತಿಮೆ. ಹಿಂಭಾಗದ ಎಡ – ಬಲ ಭಾಗದಲ್ಲಿ ಕೈಮಗ್ಗದ ಹಿರಿಮೆಯ ಇಳಕಲ್ ಕಸೂತಿ ಸೀರೆಗಳು, ಮೊಳಕಾಲ್ಮೋರು ಸೀರೆಗಳು ಹಾಗೂ ಮೈಸೂರು ರೇಷ್ಮೆ ಸೀರೆ. ಹಿಂಭಾಗದಲ್ಲಿ ಕಿನ್ನಾಳ ಕಲೆಯಲ್ಲಿ ತಯಾರಿಸಿದ ಬಾಲೆಯರ ಕಲಾಕೃತಿಗಳು, ಪಶ್ಚಿಮ ಘಟ್ಟಗಳಲ್ಲಿ ಲಭ್ಯವಿರುವ ಬೆತ್ತ, ಬಿದಿರು, ಕಾಡುಬಳ್ಳಿಗಳು ಹಾಗೂ ತಾಟಿನಿಂಗು ಮರದ ಎಲೆಯಿಂದ ತಯಾರಿಸಿದ ಬಗೆ ಬಗೆಯ ಬುಟ್ಟಿಗಳೂ ಕೂಡಾ ಸ್ತಬ್ದಚಿತ್ರಕ್ಕೆ ವಿಶೇಷ ಮೆರುಗನ್ನು ನೀಡಿತ್ತು. ಇದನ್ನೂ ಓದಿ: ಗಲ್ವಾನ್ ಬಳಿಕ ಒಲಿಂಪಿಕ್ಸ್ ಜ್ಯೋತಿ ವಿಚಾರದಲ್ಲೂ ಕಿರಿಕ್ – ಸಣ್ಣತನ ತೋರಿದ ಚೀನಾ
ಜಾನಪದ ತಜ್ಞ ಡಾ.ರಾಧಾಕೃಷ್ಣ ಉರಾಳ ನೇತೃತ್ವದ ಕಲಾ ಕದಂಬ ಕಲಾ ಕೇಂದ್ರದ ತಂಡ ಯಕ್ಷಗಾನ ಪಾತ್ರಗಳಲ್ಲಿ ಹೆಜ್ಜೆ ಹಾಕಿ ರಾಜ್‍ಪಥ್‍ನಲ್ಲಿ ಕರ್ನಾಟಕದ ಸಂಸ್ಕೃತಿಯನ್ನು ಅನಾವರಣಗೊಳಿಸಿದ್ದರು.
Hey Thanks putting this together! I wonder what AI will do in this area over the next five years.