Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: RD Parade 2022: ಕರ್ನಾಟಕದ ಸ್ತಬ್ಧಚಿತ್ರಕ್ಕೆ ಎರಡನೇ ಸ್ಥಾನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | RD Parade 2022: ಕರ್ನಾಟಕದ ಸ್ತಬ್ಧಚಿತ್ರಕ್ಕೆ ಎರಡನೇ ಸ್ಥಾನ

Bengaluru City

RD Parade 2022: ಕರ್ನಾಟಕದ ಸ್ತಬ್ಧಚಿತ್ರಕ್ಕೆ ಎರಡನೇ ಸ್ಥಾನ

Public TV
Last updated: February 4, 2022 3:50 pm
Public TV
Share
3 Min Read
Karnataka tableau republic day 2022 1
SHARE

ಬೆಂಗಳೂರು: ದೆಹಲಿಯ ರಾಜಪಥ್‍ನಲ್ಲಿ 73ನೇ ಗಣರಾಜ್ಯೋತ್ಸವ ದಿನಾಚರಣೆಯ ಪರೇಡ್‍ನಲ್ಲಿ ಗಮನಸೆಳೆದ ಕರ್ನಾಟಕ ಪಾರಂಪರಿಕ ಕರಕುಶಲ ವಸ್ತುಗಳಗಳ ತೊಟ್ಟಿಲು ವಿಷಯಧಾರಿತ ರಾಜ್ಯದ ಸ್ತಬ್ಧಚಿತ್ರಕ್ಕೆ ದ್ವಿತೀಯ ಸ್ಥಾನ ದೊರೆತಿದೆ.

Karnataka tableau republic day 2022 2

ಪರೇಡ್‍ನಲ್ಲಿ ಉತ್ತಮವಾಗಿ ಪ್ರದರ್ಶನಗೊಂಡ ರಾಜ್ಯಗಳ ಸ್ತಬ್ಧಚಿತ್ರಗಳ ಪೈಕಿ ಉತ್ತರ ಪ್ರದೇಶಕ್ಕೆ ಮೊದಲ ಸ್ಥಾನ ಸಿಕ್ಕರೆ, ದ್ವಿತೀಯ ಸ್ಥಾನ ಕರ್ನಾಟಕ್ಕೆ ದೊರೆತಿದೆ. ಮೇಘಾಲಯಕ್ಕೆ ತೃತೀಯ ಸ್ಥಾನ ನೀಡಲಾಗಿದೆ. ಇದನ್ನೂ ಓದಿ: ರಾಜಪಥದಲ್ಲಿ ಭಾರತದ ವೈಭವ ಅನಾವರಣ

#RepublicDay ನಲ್ಲಿ ರಾಜ್ಯದಿಂದ ಪ್ರದರ್ಶನಗೊಂಡ 'ಕರ್ನಾಟಕ: ಪಾರಂಪರಿಕ ಕರಕುಶಲ ವಸ್ತುಗಳ ತೊಟ್ಟಿಲು' ವಿಷಯದ ಸ್ತಬ್ಧಚಿತ್ರಕ್ಕೆ ದ್ವಿತೀಯ ಸ್ಥಾನ ದೊರೆತಿದೆ.

ಸ್ತಬ್ಧಚಿತ್ರವನ್ನು ರೂಪಿಸಿದ ಹಾಗೂ ಪ್ರದರ್ಶನದಲ್ಲಿ ಪಾಲ್ಗೊಂಡ ಕಲಾವಿದರು, ಅಧಿಕಾರಿ, ಸಿಬ್ಬಂದಿ ವರ್ಗಕ್ಕೆ ಹಾರ್ದಿಕ ಅಭಿನಂದನೆಗಳು 💐@PMOIndia @CMofKarnataka pic.twitter.com/eFHefuAdOU

— DIPR Karnataka (@KarnatakaVarthe) February 4, 2022

ಉತ್ತಮ ಪರೇಡ್ ನಡೆಸಿದ ಮೂರು ಸೈನ್ಯ ಪಡೆಗಳ ಪೈಕಿ ನೌಕಾಪಡೆಯ ಮಾರ್ಚಿಂಗ್ ಕಾಂಟಿಜೆಂಟ್‍ ಪ್ರಥಮ ಸ್ಥಾನ ಪಡೆದಿದೆ, ಇತರ ಕಾಂಟಿಜೆಂಟ್‍ಗಳ ಪೈಕಿ ಸಿಐಎಸ್‍ಎಫ್ ಕಾಂಟಿಜೆಂಟ್‍ಗೆ ದ್ವಿತೀಯ ಸ್ಥಾನ ನೀಡಲಾಗಿದೆ. ಕೇಂದ್ರ ಸಚಿವಾಲಯದ ಸ್ತಬ್ಧಚಿತ್ರಗಳ ಪೈಕಿ ಶಿಕ್ಷಣ ಸಚಿವಾಲಯ ಮತ್ತು ನಾಗರಿಕ ವಿಮಾನಯಾನ ಸಚಿವಾಲಯ ಜಂಟಿ ಅಗ್ರಸ್ಥಾನ ಪಡೆದುಕೊಂಡಿದೆ.

ದಕ್ಷಿಣ ಭಾರತದಿಂದ ಕರ್ನಾಟಕದ ಏಕೈಕ ಸ್ತಬ್ಧ ಚಿತ್ರ:
ಪ್ರತಿ ವರ್ಷದಂತೆ ಈ ವರ್ಷವೂ ದೆಹಲಿ ರಾಜಪಥ್‍ನಲ್ಲಿ ಸಂಚರಿಸಿದ ಕರ್ನಾಟಕದ ಸ್ತಬ್ಧ ಚಿತ್ರ ಗಮನಸೆಳೆಯಿತು. ಈ ಬಾರಿ ದಕ್ಷಿಣ ಭಾರತದಿಂದ ಕರ್ನಾಟಕದ ಏಕೈಕ ಸ್ತಬ್ಧ ಚಿತ್ರ ಪ್ರದರ್ಶನಗೊಂಡಿತು. ಕರ್ನಾಟಕದ ಟ್ಯಾಬ್ಲೋ ಸತತ 13ನೇ ವರ್ಷವೂ ಪ್ರದರ್ಶನಗೊಂಡಿತು. ಈ ಬಾರಿ ಕರ್ನಾಟಕ ಪಾರಂಪರಿಕ ಕರಕುಶಲ ವಸ್ತುಗಳಗಳ ತೊಟ್ಟಿಲು ವಿಷಯಧಾರಿತ ಸ್ತಬ್ಧ ಚಿತ್ರ ಪ್ರದರ್ಶನಗೊಂಡಿದ್ದು, ಟ್ಯಾಬ್ಲೋ ತಯಾರಿ ಕಾರ್ಯದಲ್ಲಿ ಕಲಾವಿದ ಶಶಿಧರ್ ಅಡಪ ನೇತೃತ್ವ ವಹಿಸಿದ್ದರು. ಈ ಸ್ತಬ್ಧ ಚಿತ್ರವನ್ನು ತಯಾರು ಮಾಡಲು ಒಂದೂವರೆ ತಿಂಗಳು ಕಾಲ ನೂರಾರು ಜನರು ಒಟ್ಟಾಗಿ ಸೇರಿ ಕೆಲಸ ನಿರ್ವಹಿಸಿ ಕರ್ನಾಟಕದ ಕರಕುಶಲ ಕಲೆಯನ್ನು ದೇಶಕ್ಕೆ ಪರಿಚಯಿಸಿದ್ದರು.

Koo App

Proud that Karnataka’s tableau at the #RepublicDayParade2022 as the ’Cradle of Traditional Handicrafts’ has won the 2nd place. May this presentation incite us all to be #VocalForLocal & bring greater attention to our crafts and their craftsmen and help build #AatmaNirbharBharat.

View attached media content

– Basavaraj Bommai (@bsbommai) 4 Feb 2022

dolon

ಸ್ತಬ್ಧ ಚಿತ್ರದಲ್ಲಿ ಏನಿತ್ತು?
ಕರ್ನಾಟಕದ ಸ್ತಬ್ದಚಿತ್ರದ ಮುಂಭಾಗದಲ್ಲಿ ಮೈಸೂರಿನ ಬೀಟೆ ಮರ ಹಾಗೂ ದಂತದ ಕಸೂತಿ ಕೆತ್ತನೆಯ ಬೃಹದಾಕಾರದ ಆನೆಯ ಕಲಾಕೃತಿ ಇತ್ತು. ಈ ಕಲಾಕೃತಿಯ ಕೆಳಗಿನ ಭಾಗದಲ್ಲಿ ಯಕ್ಷಗಾನ ಬೊಂಬೆಯಾಟದ ಚಿತ್ರಣವಿದೆ ಜೊತೆಗೆ ಗಂಜೀಫಾ ಕಲಾಕೃತಿ ಇತ್ತು. ಸ್ತಬ್ದಚಿತ್ರದ ಮಧ್ಯದಲ್ಲಿ ಕಣ್ಮನ ಸೆಳೆಯುವ ಬಿದರಿ ಕಲೆಯಲ್ಲಿ ರೂಪಿಸಿರುವ ದೊಡ್ಡ ಪ್ರಮಾಣದ ಹೂಜಿ. ಹೂಜಿಯ ಇಕ್ಕೆಲೆಗಳಲ್ಲಿ ಕರಾವಳಿಯ ವೈಶಿಷ್ಠ್ಯವನ್ನು ಬಿಂಬಿಸುವ ಭೂತಾರಾಧನೆಯ ಮುಖವಾಡವನ್ನು ಹೊತ್ತ ಲೋಹದ ಕಲಾಕೃತಿಗಳು, ಹೂಜಿಯ ಹಿಂಬದಿಯಲ್ಲಿ ಬಿದರಿ ಕಲೆ ಬಳಸಿ ಸಿದ್ದಪಡಿಸಿರುವ ನವಿಲುಗಳಿದ್ದವು. ಅಲ್ಲದೆ, ಮಧ್ಯ ಭಾಗದ ಹಿಂಬಂದಿಯಲ್ಲಿ ಕಿನ್ನಾಳದ ವೈಶಿಷ್ಠಪೂರ್ಣ ಕಲೆಯಲ್ಲಿ ಮೇಳೈಸಿದ ಬೃಹತ್ ಗಾತ್ರದ ಆಂಜನೇಯ ಸ್ವಾಮಿಯ ಮೂರ್ತಿ ಸ್ತಬ್ದಚಿತ್ರದ ಕೇಂದ್ರ ಬಿಂದುವಿನಂತೆ ಕಂಗೊಳಿಸಿತ್ತು. ಇದನ್ನೂ ಓದಿ: ದೆಹಲಿಯಲ್ಲಿ ಸಂಚರಿಸಲಿದೆ ಕರ್ನಾಟಕದ ಪಾರಂಪರಿಕ ಕರಕುಶಲ ವಸ್ತುಗಳ ತೊಟ್ಟಿಲು

tableau 1

ಆಂಜನೇಯ ಸ್ವಾಮಿಯ ಮೂರ್ತಿಯ ಅಕ್ಕ-ಪಕ್ಕದಲ್ಲಿ ಚೆನ್ನಪಟ್ಟಣದ ಬೊಂಬೆಗಳು, ಮೆರುಗೆಣ್ಣೆಯ ಆಟಿಕೆಗಳು, ನವಲಗುಂದ ಧರಿ (ಜಮಖಾನೆ), ಶ್ರೀಗಂಧ ಮರದ ಕೆತ್ತನೆಯ ಹಾಗೂ ಮಣ್ಣಿನ ಕಲಾಕೃತಿಗಳು ಇತ್ತು. ಸ್ತಬ್ದಚಿತ್ರದ ಕೊನೆಯಲ್ಲಿ ಪಾರಂಪರಿಕ ಕರಕುಶಲ ಉತ್ಪನ್ನಗಳ ತಯಾರಿಕೆಗೆ ಉತ್ತೇಜನ ನೀಡಿ ಪ್ರೋತ್ಸಾಹಿಸಿದ ಕಲಾಲೋಕದ ಮಹಾಮಾತೆ, ಸ್ವಾತಂತ್ರ್ಯ ಹೋರಾಟಗಾರ್ತಿ ಹಾಗೂ ಕನ್ನಡತಿ ಕಮಲಾದೇವಿ ಚಟ್ಟೋಪಾದ್ಯಾಯ ಅವರು ಗಂಧದ ಪೆಟ್ಟಿಗೆ, ನವಿಲಿನಾಕಾರದ ದೀಪದ ಕಲಶಗಳು, ಸಂಡೂರಿನ ಬಾಳೆ ನಾರಿನ ಚೀಲಗಳು ಹೀಗೆ ವಿವಿಧ ಕರಕುಶಲ ವಸ್ತುಗಳನ್ನು ಬಾಗಿನ ರೂಪದಲ್ಲಿ ನೀಡುತ್ತಿರುವ ದೃಶ್ಯಾವಳಿಯ ದೊಡ್ಡ ಪ್ರತಿಮೆ. ಹಿಂಭಾಗದ ಎಡ – ಬಲ ಭಾಗದಲ್ಲಿ ಕೈಮಗ್ಗದ ಹಿರಿಮೆಯ ಇಳಕಲ್ ಕಸೂತಿ ಸೀರೆಗಳು, ಮೊಳಕಾಲ್ಮೋರು ಸೀರೆಗಳು ಹಾಗೂ ಮೈಸೂರು ರೇಷ್ಮೆ ಸೀರೆ. ಹಿಂಭಾಗದಲ್ಲಿ ಕಿನ್ನಾಳ ಕಲೆಯಲ್ಲಿ ತಯಾರಿಸಿದ ಬಾಲೆಯರ ಕಲಾಕೃತಿಗಳು, ಪಶ್ಚಿಮ ಘಟ್ಟಗಳಲ್ಲಿ ಲಭ್ಯವಿರುವ ಬೆತ್ತ, ಬಿದಿರು, ಕಾಡುಬಳ್ಳಿಗಳು ಹಾಗೂ ತಾಟಿನಿಂಗು ಮರದ ಎಲೆಯಿಂದ ತಯಾರಿಸಿದ ಬಗೆ ಬಗೆಯ ಬುಟ್ಟಿಗಳೂ ಕೂಡಾ ಸ್ತಬ್ದಚಿತ್ರಕ್ಕೆ ವಿಶೇಷ ಮೆರುಗನ್ನು ನೀಡಿತ್ತು. ಇದನ್ನೂ ಓದಿ: ಗಲ್ವಾನ್‌ ಬಳಿಕ ಒಲಿಂಪಿಕ್ಸ್‌ ಜ್ಯೋತಿ ವಿಚಾರದಲ್ಲೂ ಕಿರಿಕ್‌ – ಸಣ್ಣತನ ತೋರಿದ ಚೀನಾ

ಜಾನಪದ ತಜ್ಞ ಡಾ.ರಾಧಾಕೃಷ್ಣ ಉರಾಳ ನೇತೃತ್ವದ ಕಲಾ ಕದಂಬ ಕಲಾ ಕೇಂದ್ರದ ತಂಡ ಯಕ್ಷಗಾನ ಪಾತ್ರಗಳಲ್ಲಿ ಹೆಜ್ಜೆ ಹಾಕಿ ರಾಜ್‍ಪಥ್‍ನಲ್ಲಿ ಕರ್ನಾಟಕದ ಸಂಸ್ಕೃತಿಯನ್ನು ಅನಾವರಣಗೊಳಿಸಿದ್ದರು.

TAGGED:Karnataka Cradle Of TraditionalRepublic Day Parade 2022tableauಕರ್ನಾಟಕಗಣರಾಜ್ಯೋತ್ಸವ ಪರೇಡ್ಸ್ತಬ್ಧಚಿತ್ರ
Share This Article
Facebook Whatsapp Whatsapp Telegram

Cinema news

3 Idiots
10 ವರ್ಷಗಳ ಬಳಿಕವೂ ಅದೇ ಪಾತ್ರಗಳೊಂದಿಗೆ ಬರಲಿದೆ 3 Idiots ಸೀಕ್ವೆಲ್
Bollywood Cinema Latest Top Stories
nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories

You Might Also Like

soraba bjp worker
Crime

ಶಿವಮೊಗ್ಗದ ಸೊರಬದಲ್ಲಿ ಬಿಜೆಪಿ ಮುಖಂಡನ ಪತ್ನಿ ನೇಣಿಗೆ ಶರಣು – ಪತಿ ಬಂಧನ

Public TV
By Public TV
3 hours ago
Donovan Ferreira
Cricket

ಪಂಜಾಬ್‌ ಗೆಲುವಿನ ಓಟಕ್ಕೆ ಬ್ರೇಕ್‌ – ರಾಜಸ್ಥಾನ್‌ಗೆ 6 ವಿಕೆಟ್‌ಗಳ ಜಯ

Public TV
By Public TV
3 hours ago
Apekshaben Sonis victory
Latest

100% ಮುಸ್ಲಿಂ ಮತದಾರರ ವಾರ್ಡ್‌ನಲ್ಲಿ ಸ್ವತಂತ್ರ ಹಿಂದೂ ಅಭ್ಯರ್ಥಿಗೆ ಗೆಲುವು

Public TV
By Public TV
4 hours ago
Dharwad Suicide
Dharwad

ಧಾರವಾಡ | ಮರ್ಯಾದೆಗೆ ಅಂಜಿ ವಿದ್ಯಾರ್ಥಿ ನೇಣಿಗೆ ಶರಣು

Public TV
By Public TV
4 hours ago
gundlupet inspector safari
Chamarajanagar

ನಿರ್ಬಂಧಿತ ಅರಣ್ಯಪ್ರದೇಶದಲ್ಲಿ ಪೊಲೀಸ್ ಇನ್‌ಸ್ಪೆಕ್ಟರ್ ಬಿಂದಾಸ್ ಸವಾರಿ

Public TV
By Public TV
6 hours ago
supreme Court 1
Court

ಪ್ರತಿಯೊಂದು ಧಾರ್ಮಿಕ ಸಂಸ್ಥೆಗಳಲ್ಲಿ ನಿಯಮಗಳಿರಬೇಕು, ಅರಾಜಕತೆ ಇರಬಾರದು – ಶಬರಿಮಲೆ ಕೇಸ್‌ನಲ್ಲಿ ಸುಪ್ರೀಂ ಅಭಿಪ್ರಾಯ

Public TV
By Public TV
6 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?