ಬೆಂಗಳೂರು: ರಾಜ್ಯದಲ್ಲಿ ಇಂದು ಒಂದೇ ದಿನ 10 ಲಕ್ಷಕ್ಕೂ ಅಧಿಕ ಡೋಸ್ ಕೊರೊನಾ ಲಸಿಕೆ ಹಾಕುವ ಮೂಲಕ ದಾಖಲೆಯ ಲಸಿಕಾಕರಣ ನಡೆದಿದೆ.
Advertisement
ಈ ಬಗ್ಗೆ ಟ್ವಿಟ್ಟರ್ ಮೂಲಕ ಮಾಹಿತಿ ಹಂಚಿಕೊಂಡಿರುವ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್, ರಾಜ್ಯದಲ್ಲಿ ಇಂದು 10 ಲಕ್ಷಕ್ಕೂ ಅಧಿಕ ಡೋಸ್ ಕೊರೊನಾ ಲಸಿಕೆಯಾಗಿದೆ. ಅದಲ್ಲದೆ ಕಳೆದ 5 ದಿನಗಳಲ್ಲಿ 35 ಲಕ್ಷಕ್ಕೂ ಅಧಿಕ ಡೋಸ್ ಲಸಿಕೆ ನೀಡಲಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ ಒಟ್ಟು 1,159 ಕೇಸ್- 4 ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ
Advertisement
Advertisement
ಸೆಪ್ಟೆಂಬರ್ ನಲ್ಲಿ ಕನಿಷ್ಠ 1.50 ಕೋಟಿ ಲಸಿಕೆ ನೀಡುವ ಗುರಿ
ಕೋಲಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಸಾಮಾನ್ಯ ದಿನಗಳಲ್ಲಿ 5 ಲಕ್ಷ ಲಸಿಕೆ ನೀಡುವ ಗುರಿ ಇದೆ. ಒಂದು ತಿಂಗಳಲ್ಲಿ ಕನಿಷ್ಠ 1.50 ಕೋಟಿ ಡೋಸ್ ಲಸಿಕೆ ನೀಡುವ ಗುರಿ ಇದೆ. ಡಿಸೆಂಬರ್ ವೇಳೆಗೆ ಎಲ್ಲಾ ವಯಸ್ಕರಿಗೆ ಲಸಿಕೆ ನೀಡಬೇಕು ಎಂಬ ಉದ್ದೇಶವಿದೆ. ಈ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಿದ್ದೇವೆ. ಗಡಿಭಾಗದ ಜಿಲ್ಲೆಗಳಿಗೆ ಆದ್ಯತೆ ಮೇರೆಗೆ ಲಸಿಕೆ ನೀಡಲಾಗುತ್ತಿದೆ. ಈ ಬಗ್ಗೆ ಕೇಂದ್ರದ ಆರೋಗ್ಯ ಸಚಿವರು ಕೂಡ ಸಲಹೆ ನೀಡಿದ್ದಾರೆ. ಗಡಿಭಾಗಗಳ ಜನರು ಸ್ವಯಂಪ್ರೇರಿತರಾಗಿ ಮುಂದೆ ಬಂದು ಲಸಿಕೆ ಪಡೆಯಬೇಕು ಎಂದು ಕೋರಿದರು. ಇದನ್ನೂ ಓದಿ: ಪ್ರತಿ ಬುಧವಾರ 10 ಲಕ್ಷ ಲಸಿಕೆ ಗುರಿ: ಸುಧಾಕರ್
Advertisement
Karnataka crosses 1️⃣0️⃣ lakh doses today! Pace is picking up and we have given more than 3️⃣5️⃣ lakh doses in the last 5️⃣ days! @CMofKarnataka@mansukhmandviya @narendramodi #Karnataka #COVID19
— Dr Sudhakar K (@mla_sudhakar) September 1, 2021
ಆಗಸ್ಟ್ ನಲ್ಲಿ ರಾಜ್ಯಕ್ಕೆ 1.12 ಕೋಟಿ ಲಸಿಕೆ ಬಂದಿದೆ. ಒಂದೇ ತಿಂಗಳಲ್ಲಿ 1.10 ಕೋಟಿ ಲಸಿಕೆ ನೀಡಲಾಗಿದೆ. ಜನವರಿಯಿಂದ ಈವರೆಗೆ ಆಗಸ್ಟ್ ತಿಂಗಳಲ್ಲೇ ಅತ್ಯಧಿಕ ಲಸಿಕೆ ನೀಡಲಾಗಿದೆ. ಸೆಪ್ಟೆಂಬರ್ ನಲ್ಲಿ ಕನಿಷ್ಠ 1.50 ಕೋಟಿ ಲಸಿಕೆ ನೀಡುವ ಗುರಿ ಇದೆ. ಕೇರಳದಿಂದ ಬರುವವರಿಗೆ ಕಡ್ಡಾಯ ಸಾಂಸ್ಥಿಕ ಕ್ವಾರಂಟೈನ್ ನಿಯಮ ತರಲಾಗಿದೆ. ಆದರೆ ಪ್ರತಿ ದಿನ ಬರುವ ವಿದ್ಯಾರ್ಥಿಗಳು ಸೇರಿದಂತೆ ಕೆಲವರಿಗೆ ಮಾರ್ಗಸೂಚಿಯಲ್ಲಿ ವಿನಾಯಿತಿ ನೀಡಲಾಗಿದೆ ಎಂದರು.