Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜ್ಯದಲ್ಲಿ ಒಂದೇ ದಿನ ದಾಖಲೆಯ 12 ಲಕ್ಷ ಕೋವಿಡ್ ಲಸಿಕೆ: ಡಾ.ಕೆ ಸುಧಾಕರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Corona | ರಾಜ್ಯದಲ್ಲಿ ಒಂದೇ ದಿನ ದಾಖಲೆಯ 12 ಲಕ್ಷ ಕೋವಿಡ್ ಲಸಿಕೆ: ಡಾ.ಕೆ ಸುಧಾಕರ್

Corona

ರಾಜ್ಯದಲ್ಲಿ ಒಂದೇ ದಿನ ದಾಖಲೆಯ 12 ಲಕ್ಷ ಕೋವಿಡ್ ಲಸಿಕೆ: ಡಾ.ಕೆ ಸುಧಾಕರ್

Public TV
Last updated: September 2, 2021 5:32 pm
Public TV
Share
3 Min Read
VACCINATION 2
SHARE

– ಕ್ಷಯ ನಿರ್ಮೂಲನೆ ಬಗ್ಗೆ ಕೇಂದ್ರ ಸಚಿವರೊಂದಿಗೆ ಸಭೆ

ಬೆಂಗಳೂರು: ರಾಜ್ಯದಲ್ಲಿ ಸೆಪ್ಟೆಂಬರ್ 1ರಂದು ಮೊದಲ ಲಸಿಕಾ ಉತ್ಸವದ ದಿನ ಗುರಿಯನ್ನು ಮೀರಿ 12 ಲಕ್ಷ ಲಸಿಕೆ ಡೋಸ್ ನೀಡಲಾಗಿದೆ. ಈ ಮೂಲಕ ಇಡೀ ದೇಶದಲ್ಲೇ ಕರ್ನಾಟಕ ಮೊದಲ ಸ್ಥಾನದಲ್ಲಿತ್ತು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹರ್ಷ ವ್ಯಕ್ತಪಡಿಸಿದ್ದಾರೆ.

SUDAKAR 2

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಬುಧವಾರದ ಲಸಿಕಾ ಉತ್ಸವದಲ್ಲಿ 10 ಲಕ್ಷ ಲಸಿಕೆ ನೀಡುವ ಗುರಿ ಇತ್ತು. ಆರೋಗ್ಯ ಇಲಾಖೆಯ ಅಧಿಕಾರಿಗಳು, ಜಿಲ್ಲಾಡಳಿತ ಪರಿಣಾಮಕಾರಿಯಾಗಿ ಕೆಲಸ ಮಾಡಿದ್ದಾರೆ. ಹಾಗೆಯೇ ಜನರು ಕೂಡ ಸ್ವಯಂಪ್ರೇರಿತರಾಗಿ ಬಂದು ಲಸಿಕೆ ಪಡೆದಿದ್ದಾರೆ. ಇದರಿಂದಾಗಿ ಗುರಿ ಮೀರಿ ಸಾಧನೆಯಾಗಿದ್ದು, ಒಂದೇ ದಿನ ಒಟ್ಟು 12,04,402 ಲಸಿಕೆ ನೀಡಲಾಗಿದೆ. ದೇಶದಲ್ಲಿ ನಿನ್ನೆ ಕರ್ನಾಟಕ ಮೊದಲ ಸ್ಥಾನದಲ್ಲಿತ್ತು. ಬಿಬಿಎಂಪಿ ವ್ಯಾಪ್ತಿಯಲ್ಲಿ 1,85,488 ಡೋಸ್ ನೀಡಲಾಗಿದೆ. ಬೆಳಗಾವಿ ಜಿಲ್ಲೆ ಮೊದಲ ಸ್ಥಾನದಲ್ಲಿದ್ದು, 99,973 ಡೋಸ್ ನೀಡಲಾಗಿದೆ. ಕೊಡಗು, ಗದಗ, ಚಾಮರಾಜನಗರ, ಯಾದಗಿರಿ ಜಿಲ್ಲೆಯಲ್ಲಿ ಅತೀ ಕಡಿಮೆಯಾಗಿದೆ. ಈ ಜಿಲ್ಲೆಗಳಲ್ಲಿ 20 ಸಾವಿರಕ್ಕಿಂತ ಕಡಿಮೆ ಇದೆ ಎಂದು ತಿಳಿಸಿದರು. ಇದನ್ನೂ ಓದಿ: ರಾಜ್ಯದಲ್ಲಿ ಇಂದು ಒಂದೇ ದಿನ ದಾಖಲೆಯ 10 ಲಕ್ಷ ಡೋಸ್ ಲಸಿಕೆ

SUDAKAR MEETING

ಚಿಕ್ಕಬಳ್ಳಾಪುರದಲ್ಲಿ 50 ಸಾವಿರ, ಚಿಕ್ಕಮಗಳೂರಿನಲ್ಲಿ 44,000, ಮಂಡ್ಯದಲ್ಲಿ 72,000, ಮೈಸೂರಿನಲ್ಲಿ 51,000 ಹೀಗೆ ಲಸಿಕಾ ಉತ್ಸವದಿಂದ ವೇಗ ಬಂದಿದೆ. ದಿನಕ್ಕೆ 5 ಲಕ್ಷ ಲಸಿಕೆ ನೀಡುವ ಗುರಿ ಇದ್ದು, ಆಗಸ್ಟ್ ತಿಂಗಳಲ್ಲಿ 1.12 ಕೋಟಿ ಡೋಸ್ ನೀಡಲಾಗಿದೆ ಎಂದು ಮಾಹಿತಿ ನೀಡಿದರು. ಕೇರಳದಲ್ಲಿ ಇನ್ನೂ ಸೋಂಕು ಇದ್ದು, ಪ್ರಕರಣಗಳ ಸಂಖ್ಯೆ ಕಡಿಮೆಯಾಗಿಲ್ಲ. ಇದಕ್ಕಾಗಿ ಸಾಂಸ್ಥಿಕ ಕ್ವಾರಂಟೈನ್ ನಿಯಮ ತರಲಾಗಿದೆ. ನೀಟ್ ಪರೀಕ್ಷೆ ಸಮಯದಲ್ಲಿ ಇದು ಕಷ್ಟ ಎಂಬ ಅಭಿಪ್ರಾಯ ಬಂದಿದೆ. ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಶಿಕ್ಷಣ ಸಂಸ್ಥೆಗಳೇ ಕ್ವಾರಂಟೈನ್ ವ್ಯವಸ್ಥೆ ಮಾಡಬೇಕೆಂದು ಸೂಚಿಸಲಾಗಿದೆ. ಕೈಗಾರಿಕೆ, ಖಾಸಗಿ ಸಂಸ್ಥೆಗಳಲ್ಲಿ ಉದ್ಯೋಗ ಮಾಡುವವರಿಗೆ ಕ್ವಾರಂಟೈನ್ ಗೆ ಅದೇ ಸಂಸ್ಥೆ ವ್ಯವಸ್ಥೆ ಮಾಡಬೇಕು. ಸದ್ಯಕ್ಕೆ ಜನರು ಮನೆಯಲ್ಲೇ ಕ್ವಾರಂಟೈನ್ ಆಗಲು ಅವಕಾಶವಿದೆ. ಪ್ರತಿ ದಿನ ಕೇರಳದಿಂದ ರಾಜ್ಯಕ್ಕೆ ಬರುವವರು ಪ್ರತಿ ವಾರ ಆರ್ ಟಿಪಿಸಿಆರ್ ನೆಗೆಟಿವ್ ವರದಿ ತೋರಿಸಬೇಕು ಎಂದರು.

VACCINE RATE

ಕ್ಷಯ ನಿರ್ಮೂಲನೆ-ಕೇಂದ್ರ ಸಚಿವರ ಸಭೆ
ಕೇಂದ್ರ ಆರೋಗ್ಯ ಸಚಿವ ಮನ್‍ಸುಖ್ ಮಾಂಡವೀಯ ಅವರು ಎಲ್ಲಾ ರಾಜ್ಯಗಳ ಆರೋಗ್ಯ ಸಚಿವರೊಂದಿಗೆ ಸಭೆ ನಡೆಸಿದರು. ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸುಧಾಕರ್, 2025 ಕ್ಕೆ ಕ್ಷಯ ನಿರ್ಮೂಲನೆ ಮಾಡುವುದು ಪ್ರಧಾನಿಯವರ ಗುರಿ. ಇದಕ್ಕಾಗಿ ಕೋವಿಡ್ ಸಮಯದಲ್ಲಿ ಕ್ಷಯ ಪರೀಕ್ಷೆ ಕೈಗೊಳ್ಳಲಾಗಿದೆ. ಕೋವಿಡ್ ನಿಂದ 29 ಲಕ್ಷ ಮಂದಿ ಗುಣಮುಖರಾಗಿದ್ದು, ಎಲ್ಲರಿಗೂ ಕ್ಷಯ ಪರೀಕ್ಷೆ ಮಾಡಲಾಗುತ್ತಿದೆ. ಈವರೆಗೆ ಸುಮಾರು 7 ಲಕ್ಷ ಜನರಿಗೆ ಪರೀಕ್ಷೆ ಮಾಡಿದ್ದು, 157 ಪ್ರಕರಣಗಳಲ್ಲಿ ಕ್ಷಯ ಕಂಡುಬಂದಿದೆ. ಈ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಹುಬ್ಬಳ್ಳಿಗೆ ಅಮಿತ್ ಶಾರನ್ನು ಆತ್ಮೀಯವಾಗಿ ಬರಮಾಡಿಕೊಂಡ ಸಿಎಂ

VACCINE MEETING

ಸಾರಿ, ಐಎಲ್‍ಐ ಇರುವವರಿಗೆ ಕ್ಷಯ ಹಾಗೂ ಕೋವಿಡ್ ಪರೀಕ್ಷೆ ಮಾಡಬೇಕು. ಕೋವಿಡ್ ಇದ್ದರೆ ಕ್ಷಯ ಪರೀಕ್ಷೆಯನ್ನೂ ಮಾಡಬೇಕು. ಈ ರೀತಿ ಪರೀಕ್ಷೆ ಮಾಡಿದರೆ ಉತ್ತಮ ಎಂದು ಕೇಂದ್ರ ಸಚಿವರು ಹೇಳಿದ್ದಾರೆ. ಜೊತೆಗೆ ಸಾರ್ವಜನಿಕರು ಕೋವಿಡ್ ಸುರಕ್ಷತಾ ಕ್ರಮ ಪಾಲಿಸಬೇಕು ಎಂದು ಸಚಿವರು ತಿಳಿಸಿದ್ದಾರೆ. ಜೊತೆಗೆ ರಾಜ್ಯದಲ್ಲಿ ನಡೆದ ಲಸಿಕಾ ಉತ್ಸವದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದರು. ಇದನ್ನೂ ಓದಿ: ಪಾಲಿಕೆ ಚುನಾವಣೆಯಲ್ಲಿ ಮುಖ್ಯಮಂತ್ರಿಗಿಲ್ಲ ಮತದಾನದ ಹಕ್ಕು

VACCINE RATE 1

ಒಂದು ತಿಂಗಳಿಂದ ಗಡಿಭಾಗಗಳಲ್ಲಿ ಎಚ್ಚರ ವಹಿಸಲಾಗಿದೆ. ಗಡಿಭಾಗದ 20 ಕಿ.ಮೀ. ವ್ಯಾಪ್ತಿಯಲ್ಲಿ ಲಸಿಕೆ ನೀಡಬೇಕು ಎಂದು ಸೂಚಿಸಲಾಗಿದೆ. ಕೆಜಿಎಫ್ ನ ನಸಿರ್ಂಗ್ ಸಂಸ್ಥೆಯಲ್ಲಿ ಕೇರಳದಿಂದ ಬಂದ ವಿದ್ಯಾರ್ಥಿಗಳಲ್ಲಿ ಸೋಂಕು ಬಂದಿದೆ. ಈ ಬಗ್ಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಮಾಹಿತಿ ಹಂಚಿಕೊಂಡರು.

TAGGED:CoronaCoronavirusCovid 19dr. k sudhakarKarnataka vaccinationMansukh MandaviyaPublic TVTuberculosisಕರ್ನಾಟಕಕೊರೊನಾಕೊರೊನಾ ವೈರಸ್ಕೋವಿಡ್ 19ಕ್ಷಯಡಾ ಕೆ ಸುಧಾಕರ್ಪಬ್ಲಿಕ್ ಟಿವಿಮನ್‍ಸುಖ್ ಮಾಂಡವೀಯಲಸಿಕೆ
Share This Article
Facebook Whatsapp Whatsapp Telegram

Cinema news

Bigg Boss kannada
BBK 12 | ಸ್ಪಂದನಾ or ಮಾಳು – ಬಿಗ್‌ಬಾಸ್ ಮನೆಯಿಂದ ಆಚೆ ಹೋಗುವವರ‍್ಯಾರು?
Cinema Latest Top Stories TV Shows
Vasishta Simha
ಸಮಾಜದಲ್ಲಿ ಕೆಲವೊಂದಿಷ್ಟು ಕಾಮೆಂಟ್ ಕಲಿವೀರರು ಹುಟ್ಟಿಕೊಂಡಿದ್ದಾರೆ: ವಸಿಷ್ಠ ಸಿಂಹ ಕಿಡಿ
Cinema Districts Karnataka Latest Sandalwood Top Stories
anupama gowda
ಬಿಗ್‌ಬಾಸ್ ಮನೆಗೆ ಮಾಜಿ ಸ್ಪರ್ಧಿ ಅನುಪಮಾ ಗೌಡ ಎಂಟ್ರಿ
Cinema Districts Karnataka Latest Top Stories TV Shows
suraj bigg boss
Bigg Boss: ಕಿಚ್ಚನ ಅನುಪಸ್ಥಿತಿಯಲ್ಲಿ ಬಿಗ್‌ ಬಾಸ್‌ ಮನೆಯಿಂದ ಸೂರಜ್‌ ಔಟ್‌
Cinema Latest Top Stories TV Shows

You Might Also Like

Newlywed Ganavi Suraj suicide case 1
Bengaluru City

ನವವಿವಾಹಿತೆ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ – ಗಾನವಿ ಬೇರೊಬ್ಬನನ್ನು ಲವ್ ಮಾಡ್ತಿದ್ಲು; ಸೂರಜ್ ಕುಟುಂಬಸ್ಥರಿಂದ ದೂರು

Public TV
By Public TV
18 minutes ago
kogilu layout k.t.jaleel
Bengaluru City

ಬೆಂಗಳೂರು| ಅಕ್ರಮ ಒತ್ತುವರಿ ತೆರವು ಸ್ಥಳಕ್ಕೆ ಕೇರಳ ಎಂಪಿ, ಎಂಎಲ್‌ಎಗಳ ಭೇಟಿ

Public TV
By Public TV
58 minutes ago
Karwar Droupadi Murmu INS Vagsheer Submarine
Districts

ಕಾರವಾರ ತೀರದಲ್ಲಿ ರಾಷ್ಟ್ರಪತಿ ಮುರ್ಮು ಸಬ್‌ಮೆರಿನ್ ಯಾನ

Public TV
By Public TV
2 hours ago
Hampi
Bellary

ದಕ್ಷಿಣಕಾಶಿ ಹಂಪಿಗೆ ಪ್ರವಾಸಿಗರ ದಂಡು – ಮಾತಂಗ ಬೆಟ್ಟದಲ್ಲಿ ಸೂರ್ಯೋದಯ ಕಣ್ತುಂಬಿಕೊಂಡ ಜನಸಾಗರ

Public TV
By Public TV
2 hours ago
Siddaramaiah 5
Bengaluru City

ಡಿ.30ಕ್ಕೆ ಸಿಎಂ ಕೇರಳ ಪ್ರವಾಸ – ಕೆಸಿವಿ ಕಾರ್ಯಕ್ರಮದಲ್ಲಿ ಭಾಗಿ, ಪವರ್ ಫೈಟ್‌ಗೆ ಬ್ರೇಕ್ ಹಾಕೋಕೆ ತಂತ್ರ

Public TV
By Public TV
2 hours ago
pm modi mann ki baat
Latest

ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಮೋದಿ ಮಾತು; ದುಬೈನಲ್ಲಿ ಕನ್ನಡಾಭಿಮಾನಕ್ಕೆ ಪ್ರಧಾನಿ ಶ್ಲಾಘನೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?