Bengaluru CityKarnatakaLatestMain Post

ಮಾಧ್ಯಮಲೋಕದಲ್ಲಿ ಹೊಸ ಬದಲಾವಣೆ – ರಾಜ್ಯದಲ್ಲಿ ಅಸ್ತಿತ್ವಕ್ಕೆ ಬಂದ ಡಿಜಿಟಲ್ ಮೀಡಿಯಾ ಫೋರಂ

ಬೆಂಗಳೂರು: ಕರ್ನಾಟಕ ಸ್ಟೇಟ್ ಡಿಜಿಟಲ್ ಮೀಡಿಯಾ ಫೋರಂ ನೂತನವಾಗಿ ಅಸ್ತಿತ್ವಕ್ಕೆ ಬರುವ ಮೂಲಕ ಮಾಧ್ಯಮಲೋಕದಲ್ಲಿ ಮತ್ತೊಂದು ಹೊಸ ಬದಲಾವಣೆಯ ಕ್ರಾಂತಿ ಶುರುವಾಗಿದೆ.

ಬೆಂಗಳೂರಿನ ಪ್ರೆಸ್ ಕ್ಲಬ್ ಆವರಣದಲ್ಲಿ ಇಂದು ನಡೆದ ಡಿಜಿಟಲ್ ಮಾಧ್ಯಮ ಮಿತ್ರರ ಸಭೆಯಲ್ಲಿ ಕರ್ನಾಟಕ ಸ್ಟೇಟ್ ಡಿಜಿಟಲ್ ಮೀಡಿಯಾ ಫೋರಂ ಅಸ್ತಿತ್ವಕ್ಕೆ ಬಂದಿದೆ. ಪತ್ರಿಕೋದ್ಯಮ ಹಾಗೂ ವಿದ್ಯುನ್ಮಾನ ಮಾಧ್ಯಮಗಳಲ್ಲಿ ಎರಡು ದಶಕಗಳ ಅನುಭವ ಇರುವಂತಹಾ ಹಿರಿಯ ಪತ್ರಕರ್ತರ ನೇತೃತ್ವದಲ್ಲಿ ಅಸ್ಥಿತ್ವಕ್ಕೆ ಬಂದಿರುವ ಕರ್ನಾಟಕ ಸ್ಟೇಟ್ ಡಿಜಿಟಲ್ ಮಿಡಿಯಾ ಫೋರಂ ಮುಂದಿನ ದಿನಗಳಲ್ಲಿ ರಾಜ್ಯದ ಬಹುತೇಕ ಡಿಜಿಟಲ್ ಮಾಧ್ಯಮ ಮಿತ್ರರನ್ನೂ ಒಳಗೊಂಡಂತೆ ದೊಡ್ಡ ಮಟ್ಟದಲ್ಲಿ ಸಕ್ರಿಯವಾಗಿ ಕಾರ್ಯ ನಿರ್ವಹಿಸಲಿದೆ. ಈ ಮೀಡಿಯಾ ಫೋರಂನ ನೂತನ ಅಧ್ಯಕ್ಷರಾಗಿ ಹಿರಿಯ ಪತ್ರಕರ್ತರಾದ ಸಮೀವುಲ್ಲಾ ಬೆಲಗೂರು ಅವರು ಒಮ್ಮತದಿಂದ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರುಗಳಾಗಿ ಸುನೀಲ್ ಮತ್ತು ವಸಂತ.ಬಿ ಈಶ್ವರಗೆರೆ ಆಯ್ಕೆಯಾಗಿದ್ದಾರೆ. ಪ್ರಧಾನ ಕಾರ್ಯದರ್ಶಿಯಾಗಿ ಶಿವು ಬೆಸಗರಹಳ್ಳಿ ಮತ್ತು ಜಂಟಿ ಕಾರ್ಯದರ್ಶಿಗಳಾಗಿ ರಜನಿ ಹಾಗೂ ಮಲತೇಶ್ ಅರಸ್ ಹರ್ತಿಕೋಟೆ ಮತ್ತು ಖಜಾಂಚಿಯಾಗಿ ಸನತ್ ರೈ ಅವರನ್ನು ಆಯ್ಕೆ ಮಾಡಲಾಗಿದೆ. ಕಾರ್ಯಕಾರಿ ಸಮಿತಿ ಸದಸ್ಯರಾಗಿ ಎಂ.ಎಸ್ ರಾಘವೇಂದ್ರ, ಗೌರೀಶ್ ಅಕ್ಕಿ, ವಿಜಯ್ ಭರಮಸಾಗರ, ದರ್ಶನ್ ಆರಾಧ್ಯ, ಪ್ರವೀಣ್ ಏಕಾಂತ, ಅಮರ್ ಪ್ರಸಾದ್, ಅಂಕಿತಾ, ಹರೀಶ್ ಅರಸು ಇವರುಗಳನ್ನು ಆಯ್ಕೆ ಮಾಡಲಾಗಿದೆ. ಇದನ್ನೂ ಓದಿ: ಬೆಳಗಾವಿಯಲ್ಲಿ ನಾಳೆಯಿಂದ ಚಳಿಗಾಲದ ಅಧಿವೇಶನ – ಮತಾಂತರ ನಿಷೇಧ ಕಾನೂನು ಮಂಡನೆ ಸಾಧ್ಯತೆ

ಈ ಸಂದರ್ಭದಲ್ಲಿ ನೂತನ ಅಧ್ಯಕ್ಷರಾದ ಸಮೀವುಲ್ಲಾ ಅವರು ಮಾತನಾಡಿ, ಡಿಜಿಟಲ್ ಮೀಡಿಯಾ ಎಂಬುದು ಪ್ರತಿಯೊಬ್ಬರಿಗೂ ನವಯುಗಕ್ಕೆ ಅವಶ್ಯಕವಾಗಿದ್ದು, ಪ್ರಿಂಟ್ ಹಾಗೂ ಟಿವಿ ಮಾಧ್ಯಮಗಳಿಗಿಂತಲೂ ಪರಿಣಾಮಕಾರಿಯಾಗಿದೆ. ವೀಕ್ಷಕರು ಮತ್ತು ಓದುಗರನ್ನು ಹೆಚ್ಚು ತಲುಪಲು ತನ್ನದೇ ಆದ ಸಾಮರ್ಥ್ಯ ಹೊಂದಿದೆ. ಹೀಗಿರುವುದರಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳೇ ಡಿಜಿಟಲ್ ಮಾಧ್ಯಮಗಳಿಗೆ ಒತ್ತು ನೀಡಿವೆ. ಪಕ್ಕದ ರಾಜ್ಯಗಳಾದ ಆಂಧ್ರಪ್ರದೇಶ ಮತ್ತು ತಮಿಳುನಾಡು ಸೇರಿದಂತೆ ಅನೇಕ ರಾಜ್ಯಗಳಲ್ಲಿ ಡಿಜಿಟಲ್ ಮಾಧ್ಯಮ ಒಕ್ಕೂಟ ಅಸ್ತಿತ್ವದಲ್ಲಿವೆ. ಕರ್ನಾಟಕದಲ್ಲಿ ಡಿಜಿಟಲ್ ಮಾಧ್ಯಮ ಹೆಚ್ಚು ಪರಿಣಾಮಕಾರಿಯಾಗಿರುವುದರಿಂದ ನಮ್ಮ ಸಂಘಟನೆ ಮಾಧ್ಯಮ ಲೋಕದಲ್ಲಿ ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸುವವರ ಹಿತಾಸಕ್ತಿ ಕಾಪಾಡಲು ಬದ್ಧವಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಡಿಜಿಟಲೀಕರಣಕ್ಕೆ ಒತ್ತು ನೀಡುತ್ತಿರುವುದರಿಂದ ಇದರ ಅಗತ್ಯತೆ ಎಂದಿಗಿಂತ ಈಗ ಹೆಚ್ಚಿದೆ. ಹೀಗಾಗಿ ಡಿಜಿಟಲ್ ಮಿಡಿಯಾ ಫೋರಂ ನೂತನವಾಗಿ ಅಸ್ತಿತ್ವಕ್ಕೆ ಬಂದಿದ್ದು, ಪತ್ರಿಕೆ ಮತ್ತು ಮಾಧ್ಯಮಗಳಿಗೆ ನೀಡಿರುವಂತೆಯೇ ನಮಗೂ ಮಾನ್ಯತೆ ನೀಡಬೇಕೆಂದು ಮನವಿ ಮಾಡಿದರು.  ಇದನ್ನೂ ಓದಿ: ಹಿಂದುತ್ವವಾದಿಗಳು ಅಧಿಕಾರಕ್ಕಾಗಿ ಯಾರನ್ನು ಬೇಕಾದ್ರೂ ಕೊಲ್ತಾರೆ: ರಾಹುಲ್ ಗಾಂಧಿ

ಪದಾಧಿಕಾರಿಗಳ ಆಯ್ಕೆ ಸಮಾರಂಭದಲ್ಲಿ ನೂರಾರು ಡಿಜಿಟಲ್ ಮಾಧ್ಯಮ ಪತ್ರಕರ್ತರು, ತಂತ್ರಜ್ಞರು ಉಪಸ್ಥಿತರಿದ್ದರು.

Leave a Reply

Your email address will not be published.

Back to top button