ಬೆಂಗಳೂರು: ಸುಪ್ರೀಂಕೋರ್ಟ್ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರ ಅನುಕೂಲಕ್ಕೆ ತಕ್ಕಂತೆ ತೀರ್ಪು ಕೊಡಬೇಕಿತ್ತಾ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಪ್ರಶ್ನಿಸಿ ಕಿಡಿಕಾರಿದ್ದಾರೆ.
ಎಚ್.ಡಿ.ದೇವೇಗೌಡ ಅವರ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಸಿಎಂ, ದೇವೇಗೌಡರ ಪ್ರತಿಯೊಂದ ಶಬ್ದಕ್ಕೂ ಗೌರವ ಇದೆ. ಸುಪ್ರೀಂಕೋರ್ಟ್ ಬಗ್ಗೆ ಹಗುರವಾಗಿ ಮಾತನಾಡುವುದು ಎಷ್ಟು ಸರಿ? ಅವರಿಂದ ಇಂತಹ ಹೇಳಿಕೆಯನ್ನು ನಾನು ನಿರೀಕ್ಷೆ ಮಾಡಿರಲಿಲ್ಲ. ದೇವೇಗೌಡರ ಹೇಳಿಕೆಯಿಂದ ನನಗೆ ತುಂಬ ನೋವಾಗಿದೆ. ಅವರು ತಮ್ಮ ಹೇಳಿಕೆ ವಾಪಸ್ ತೆಗೆದುಕೊಳ್ಳಲಿ ಎಂದು ಹೇಳಿದರು.
Advertisement
Advertisement
ವಿಪಕ್ಷಗಳು ಅನಗತ್ಯವಾಗಿ ಸುಪ್ರೀಂಕೋರ್ಟ್ ತೀರ್ಮಾನದ ಬಗ್ಗೆ ಹಗುರವಾಗಿ ಮಾತನಾಡುತ್ತಿರುವುದು ಸರಿಯಲ್ಲ. ತೀರ್ಪು ಬರುವವರೆಗೂ ಕಾದು ನೋಡಿ ಮಾತನಾಡಬೇಕು. ಸುಪ್ರೀಂಕೋರ್ಟ್ ತೀರ್ಪು ಐತಿಹಾಸಿಕ ಎಂದು ಹೇಳಿದರು.
Advertisement
ಉಪಚುನಾವಣೆಗೆ ತಡೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಸಿಎಂ, ಸುಪ್ರೀಂಕೋರ್ಟ್ ಕೂಲಂಕುಶವಾಗಿ ಪರಿಶೀಲನೆ ಮಾಡಿ ಅನರ್ಹ ಶಾಸಕರ ಬಗ್ಗೆ ತೀರ್ಮಾನ ಕೈಗೊಂಡಿದೆ. ಚುನಾವಣೆಯನ್ನು ಮುಂದಿನ ತಿಂಗಳು 22 ರವರೆಗೆ ವಿಚಾರಣೆ ಮುಂದೂಡಿದೆ. ವಿರೋಧ ಪಕ್ಷಗಳು ಸುಪ್ರೀಂಕೋರ್ಟ್ ಮೇಲೆಯೇ ಅನುಮಾನ ವ್ಯಕ್ತಪಡಿಸುತ್ತಿರುವುದು ನನಗೆ ಆಶ್ಚರ್ಯ ತಂದಿದೆ. ಉಪ ಚುನಾವಣೆ ತಡೆಯಿಂದ ಅನರ್ಹ ಶಾಸಕರಿಗೆ ರಿಲೀಫ್ ಸಿಕ್ಕಿದೆ ಎಂದು ಹೇಳಿದರು.
Advertisement
ಎಚ್‍ಡಿಡಿ ಹೇಳಿದ್ದೇನು?:
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ್ದ ಎಚ್.ಡಿ.ದೇವೇಗೌಡ ಅವರು, ಸುಪ್ರೀಂಕೋರ್ಟಿನಲ್ಲಿ ಚುನಾವಣೆ ಆಯೋಗ ಈ ಚುನಾವಣೆಯನ್ನು ಮುಂದೂಡಬಹುದು ಎಂದು ಹೇಳಿದೆ. ಹೀಗಾಗಿ ಉಪಚುನಾವಣೆ ಮುಂದೂಡಿಕೆಯಾಗಿದೆ. ಆಯೋಗಕ್ಕೆ ಕೇಂದ್ರ ಸರ್ಕಾರ ಸೂಚಿಸಿರಬಹುದು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದರು.
ಈ ಬೆಳವಣಿಗೆಯಿಂದಾಗಿ ಸ್ವಾಯತ್ತ ಸಂಸ್ಥೆಗಳು ಸರಿಯಾಗಿ ಕಾರ್ಯ ನಿರ್ವಹಿಸುತ್ತಿವೆಯೇ ಎಂಬ ಪ್ರಶ್ನೆ ಮೂಡುತ್ತದೆ. ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಪ್ರಭಾವ ಕೇಂದ್ರ ಸರ್ಕಾರದ ಮೇಲೆ ಇರಬಹುದು. ಕೇಂದ್ರ ಸರ್ಕಾರವೇ ಚುನಾವಣಾ ಆಯೋಗದ ಮೂಲಕ ಹೀಗೆ ಮಾಡಿಸಿರಬಹುದು. ಹೀಗಾಗಿ ಚುನಾವಣಾ ಆಯೋಗ ಅನರ್ಹ ಶಾಸಕರ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್‍ನಲ್ಲಿ ಮಧ್ಯಸ್ಥಿಕೆವಹಿಸಿದೆ ಅನ್ನಿಸುತ್ತಿದೆ ಎಂದು ಎಚ್‍ಡಿಡಿ ಕೇಂದ್ರದ ವಿರುದ್ಧ ಹರಿಹಾಯ್ದಿದ್ದರು.