ಬೆಂಗಳೂರು: ಬೆಸ್ಕಾಂ ವತಿಯಿಂದ ವಿದ್ಯುತ್ ಚಾಲಿತ ವಾಹನ ಚಾರ್ಜಿಂಗ್ ಕೇಂದ್ರದ ಸ್ಥಾಪನೆ ಮತ್ತು ಬಳಕೆ ಬಗ್ಗೆ ಒಂದು ದಿನದ ಕಾರ್ಯಗಾರ ಆಯೋಜನೆ ಮಾಡಲಾಯಿತು. ನಗರದ ಖಾಸಗಿ ಹೋಟೆಲ್ ನಲ್ಲಿ ನಡೆದ ಕಾರ್ಯಕ್ರಮಕ್ಕೆ ರಾಜ್ಯ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ.ಸುನಿಲ್ ಕುಮಾರ್ ಚಾಲನೆ ನೀಡಿದರು.
Advertisement
ಕಾರ್ಯಕ್ರಮದ ಬಗ್ಗೆ ಬೆಸ್ಕಾಂ ಎಂಡಿ ರಾಜೇಂದ್ರ ಚೋಳನ್ ಮಾತನಾಡಿ, ನಗರದಲ್ಲಿ ಈಗಾಗಲೇ ವಿದ್ಯುತ್ ಚಾಲಿತ ವಾಹನಗಳ ಸಂಖ್ಯೆ ಹೆಚ್ಚಳವಾಗಿದೆ. ಈ ನಿಟ್ಟಿನಲ್ಲಿ ಹಲವು ಕಡೆ ಚಾರ್ಚಿಂಗ್ ಬ್ಯಾಂಕ್ ಗಳನ್ನು ತೆರೆಯಲಾಗಿದೆ. ಅಲ್ಲದೆ ಹೆಚ್ಚುತ್ತಿರುವ ವಿದ್ಯುತ್ ಚಾಲಿತ ವಾಹನಗಳಿಗಾಗಿ ಹೊಸ ಕೇಂದ್ರಗಳನ್ನ ತೆರೆಯುವ ನಿಟ್ಟಿನಲ್ಲಿ ಹಲವು ಮಾಲ್ ಗಳು, ಅಪಾರ್ಟ್ಮೆಂಟ್ ಗಳು, ಪಾರ್ಕಿಂಗ್ ಗಳಲ್ಲಿ ಚಾರ್ಜಿಂಗ್ ಪಾಯಿಂಟ್ ನಿರ್ಮಿಸಲು ಕಾರ್ಯಗಾರದಲ್ಲಿ ಮಾಹಿತಿ ನೀಡಲಾಗಿದೆ ಎಂದರು. ಇದನ್ನೂ ಓದಿ: ವಿದ್ಯುತ್ ಚಾಲಿತ ವಾಹನ ಬಳಕೆ ಮಾಡಿದರೆ ಪೆಟ್ರೋಲ್ ಬೆಲೆ ಕಡಿಮೆಯಾಗುತ್ತೆ: ನಾರಾಯಣ ಗೌಡ
Advertisement
Advertisement
ಬೆಸ್ಕಾಂ ವತಿಯಿಂದ ವಿದ್ಯುತ್ ವಾಲಿತ ವಾಹನ ಚಾರ್ಜಿಂಗ್ ಕೇಂದ್ರದ ಸ್ಥಾಪನೆ ಮತ್ತು ಬಳಕೆ ಬಗ್ಗೆ ಇವತ್ತಿನ ಕಾರ್ಯಗಾರದಲ್ಲಿ ಬೆಸ್ಕಾಂ ಸಿಬ್ಬಂದಿ, ಅಧಿಕಾರಿಗಳು ಸೇರಿದಂತೆ ಮಾಲ್, ಅಪಾರ್ಟ್ಮೆಂಟ್ ಮುಖ್ಯಸ್ಥರ ಜೊತೆ ಮಾತುಕತೆ ನಡೆಸಿ ಮಾಹಿತಿ ನೀಡಲಾಗಿದೆ ಮುಂದಿನ ದಿನಗಳಲ್ಲಿ ವಿದ್ಯುತ್ ಚಾಲಿತ ಗಾಡಿಗಳ ಚಾರ್ಚಿಂಗ್ ವ್ಯವಸ್ಥೆ ಸುಲಭವಾಗಲಿದೆ ಎಂದು ಮಾಹಿತಿ ಹಂಚಿಕೊಂಡರು.
Advertisement
ಕಾರ್ಯಕ್ರಮದಲ್ಲಿ ಹಲವು ಹಿರಿಯ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು. ಇದನ್ನೂ ಓದಿ: ಮೂರು ಗಂಟೆ ರನ್‍ವೇನಲ್ಲೇ ನಿಂತ ವಿಮಾನ- ಪ್ರಯಾಣಿಕರು ಕಂಗಾಲು