Davanagere
ಬಿಜೆಪಿಗೆ ಶಾಕ್ ನೀಡಿದ ಹಿಂದೂ ಸಂಘಟನೆಗಳು

ದಾವಣಗೆರೆ: ಹಿಂದೂ ಮಹಾಸಭಾ ಸೇರಿದಂತೆ ವಿವಿಧ ಸಂಘಟನೆಗಳು ಬಿಜೆಪಿಗೆ ಸೆಡ್ಡು ಹೊಡೆದಿವೆ. ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಒಟ್ಟು 90ರಿಂದ 100 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ ಅಂತಾ ಹಿಂದೂ ಮಹಾಸಭಾ ರಾಜ್ಯಾಧ್ಯಕ್ಷ ಸುಬ್ರಹ್ಮಣ್ಯ ರಾಜು ಹೇಳಿದ್ದಾರೆ.
ಈಗಾಗಲೇ ಎಲ್ಲ ಹಿಂದೂ ಸಂಘಟನೆಗಳಿಂದ 90 ರಿಂದ 100 ಜನ ಅಭ್ಯರ್ಥಿಗಳು ಚುನಾವಣಾ ಕಣಕ್ಕೆ ಇಳಿಯಲಿದ್ದಾರೆ. ಈ ಹಿಂದಿನ ಚುನಾವಣೆಯಲ್ಲಿ ಎಲ್ಲ ಹಿಂದೂ ಸಂಘಟನೆಗಳು ಬಿಜೆಪಿಗೆ ಬೆಂಬಲ ನೀಡಿದ್ದವು. ಇಂದು ಕೇಂದ್ರದಲ್ಲಿ ಬಿಜೆಪಿ ಬರೋದಕ್ಕೆ ನಮ್ಮೆಲ್ಲರ ಶ್ರಮವಿದೆ. ಆ ಶ್ರಮಕ್ಕೆ ತಕ್ಕ ಪ್ರತಿಫಲ ಮಾತ್ರ ದೊರೆತಿಲ್ಲ. ನಾಡಿನ ಜನತೆಗೆ ಒಂದು ಒಳ್ಳೆಯ ಆಡಳಿತ ನೀಡುವಲ್ಲಿ ಬಿಜೆಪಿ ಇಂದು ವಿಫಲವಾಗಿದೆ. ಕರ್ನಾಟಕ ಚುನಾವಣೆಯಲ್ಲಿ ಭ್ರಷ್ಟ ಮುಖ್ಯಮಂತ್ರಿ ಸೇರಿದಂತೆ ಹಲವು ಮಾಜಿ ಸಚಿವರಿಗೆ ಬಿಜೆಪಿ ಟಕೆಟ್ ನೀಡಿದೆ. ಈ ಹಿನ್ನೆಲೆಯಲ್ಲಿ ಎಲ್ಲ ಹಿಂದೂ ಸಂಘಟನೆಗಳು ಜೊತೆಯಾಗಿ ಚುನಾವಣೆಗೆ ಸ್ಪರ್ಧಿಸುತ್ತಿದ್ದೇವೆ ಅಂತಾ ಸುಬ್ರಹ್ಮಣ್ಯ ರಾಜು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ರು.

ಹಿಂದೂ ಮಹಾಸಭಾ ರಾಜ್ಯಾಧ್ಯಕ್ಷ ಸುಬ್ರಹ್ಮಣ್ಯ ರಾಜು
ಈ ಬಾರಿ ಚುನಾವಣೆಯಲ್ಲಿ ನಮಗೆ ಬಹುಮತ ಸಿಗುತ್ತೆ ಎಂಬ ನಂಬಿಕೆಯನ್ನು ಹೊಂದಿದ್ದೇವೆ. ನಮ್ಮ ಸ್ಪರ್ಧೆಯಿಂದ ಬಿಜೆಪಿಗೆ ನಷ್ಟವಾದ್ರೆ, ಅವರು ಮಾಡಿದ ಪಾಪಕ್ಕೆ ಫಲ ಅನುಭವಿಸಿದಂತಾಗುತ್ತದೆ. ನಮ್ಮ ಹೋರಾಟ ಇರೋದು ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳ ವಿರುದ್ಧ. ರಾಷ್ಟ್ರೀಯ ಪಕ್ಷಗಳ ನಾಯಕರ ನಡವಳಿಕೆಗಳು ಮತ್ತು ಅಪರಾಧಗಳ ವಿರುದ್ಧ ನಮ್ಮ ಹೋರಾಟ ನಡೆಯಲಿದೆ ಅಂತಾ ಅಂದ್ರು.
