ಬಿಜೆಪಿ ಶಾಸಕನ ಗೆಲುವಿಗೆ ವಿಚಿತ್ರ ಹರಕೆ – 16 ಕಿಮೀ ದೀರ್ಘದಂಡ ನಮಸ್ಕಾರ ಹಾಕಿದ ಫ್ಯಾನ್ಸ್

Public TV
1 Min Read
Yadgiri BJP

ಯಾದಗಿರಿ: ಬಿಜೆಪಿ (BJP) ಶಾಸಕ ರಾಜುಗೌಡ (Raju Gowda) ಚುನಾವಣೆಯಲ್ಲಿ (Election) ಗೆಲ್ಲಬೇಕು ಎಂದು ಅಭಿಮಾನಿಗಳಿಬ್ಬರು ವಿಚಿತ್ರ ಹರಕೆ ಒಪ್ಪಿಸಿದ ಘಟನೆ ಯಾದಗಿರಿಯಲ್ಲಿ (Yadgiri) ನಡೆದಿದೆ.

Yadgiri BJP 1

ಸುಡುವ ಬಿಸಿಲನ್ನು ಲೆಕ್ಕಿಸದೆ ಅಭಿಮಾನಿಗಳಿಬ್ಬರು ತಮ್ಮ ನೆಚ್ಚಿನ ನಾಯಕನ ಗೆಲುವಿಗಾಗಿ 16 ಕಿಮೀ ದೀರ್ಘದಂಡ ನಮಸ್ಕಾರ ಹಾಕಿದ್ದಾರೆ. ಸುರಪುರ (Surapur) ಮತಕ್ಷೇತ್ರದ ಶಾಸಕ ರಾಜುಗೌಡ ಮತ್ತೊಮ್ಮೆ ಗೆದ್ದು ಬರಲಿ ಎಂದು ಕರ್ನಾಳ ಗ್ರಾಮದ ಮಲ್ಲನಗೌಡ ಹಾಗೂ ಭೀಮಣ್ಣ ಎಂಬ ಇಬ್ಬರು ಅಭಿಮಾನಿಗಳು ಗ್ರಾಮದಿಂದ ಸುರಪುರ ನಗರದ ವೇಣುಗೋಪಾಲಸ್ವಾಮಿ ದೇವಸ್ಥಾನದವರೆಗೆ ದೀರ್ಘದಂಡ ನಮಸ್ಕಾರ ಹಾಕಿಕೊಂಡು ಬಂದಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಮುಳುಗುತ್ತಿರುವ ಹಡಗು: ಬಿಎಸ್‌ವೈ ಕಿಡಿ

ನಂತರ ಅಭಿಮಾನಿಗಳು ದೇವಾಲಯದಲ್ಲಿ ತಮ್ಮ ನಾಯಕನ ಗೆಲುವಿಗಾಗಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ವೇಳೆ ಅಭಿಮಾನಿಗಳು ಶಾಸಕ ರಾಜುಗೌಡ ಅವರ ಪೋಟೋ ಹಿಡಿದು ಅಭಿಮಾನ ಮೆರೆದಿದ್ದಾರೆ.

ಹರಕೆ ಹೊತ್ತಿದ್ದ ಅಭಿಮಾನಿ ಮಲ್ಲನಗೌಡ ಸುದ್ದಿಗಾರೊಂದಿಗೆ ಮಾತನಾಡಿ, ಸುರಪುರ ಮತಕ್ಷೇತ್ರದ ಅಭಿವೃದ್ಧಿಗಾಗಿ ಶಾಸಕ ರಾಜುಗೌಡ ಮತ್ತೊಮ್ಮೆ ಜನರಿಂದ ಆರಿಸಿ ಬರಬೇಕೆಂದು ಸಂಕಲ್ಪ ಮಾಡಿದ್ದೇವೆ. ಅವರು ಗೆದ್ದು ಬಂದ ನಂತರ ಮತ್ತೊಮ್ಮೆ ದೀರ್ಘದಂಡ ನಮಸ್ಕಾರ ಹಾಕುತ್ತೇವೆ ಎಂದಿದ್ದಾರೆ. ಇದನ್ನೂ ಓದಿ: ಬಿಜೆಪಿಯವರು ಚುನಾವಣಾ ಪ್ರಚಾರಕ್ಕೆ ಅಮೆರಿಕಾ, ರಷ್ಯಾ ಪ್ರೆಸಿಡೆಂಟ್‍ನ್ನು ಕರ್ಕೊಂಡು ಬರಲಿ: ಹೆಚ್‍ಡಿ ರೇವಣ್ಣ ಟಾಂಗ್

Share This Article