– ಕಾಂಗ್ರೆಸ್ಗೆ 115-127 ಸ್ಥಾನ ಕೊಟ್ಟ ಎಬಿಪಿ ಸಿ- ವೋಟರ್
– ಝೀ ನ್ಯೂಸ್ ಸಮೀಕ್ಷೆಯಲ್ಲಿ ಅತಂತ್ರ ತೀರ್ಪು
ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯ ದಿನಾಂಕ ಈಗಾಗಲೇ ಪ್ರಕಟವಾಗಿದ್ದು, ವಿಧಾನಸಭೆ ಗದ್ದುಗೆ ಏರಲು ಮೂರೂ ಪಕ್ಷಗಳು ನಾನಾ ರಣತಂತ್ರಗಳನ್ನು ರೂಪಿಸುತ್ತಿದೆ. ಇದರ ಬೆನ್ನಲ್ಲೇ ಎಬಿಪಿ ಸಿ- ವೋಟರ್ ಸಮೀಕ್ಷೆ ಪಟ್ಟಿ ಬಿಡುಗಡೆ ಮಾಡಿದ್ದು, ಕಾಂಗ್ರೆಸ್ ಸಂಪೂರ್ಣ ಬಹುಮತದಿಂದ ಅಧಿಕಾರಕ್ಕೆ ಬರಲಿದೆ ಎಂದು ತಿಳಿಸಿದೆ.
ಎಬಿಪಿ ಸಿ- ವೋಟರ್ ಸಮೀಕ್ಷೆ ಈ ಕೆಳಗಿನಂತಿದೆ: ಕಾಂಗ್ರೆಸ್ ಪಕ್ಷಕ್ಕೆ ಈ ಬಾರಿ 115-127 ಸೀಟ್ ಬರುವ ನಿರೀಕ್ಷೆಯಿದೆ. ಅದೇ ರೀತಿ ಬಿಜೆಪಿಗೆ 68-80, ಜೆಡಿಎಸ್‍ಗೆ 23-35 ಹಾಗೂ ಇತರೆ 0-02 ಸೀಟ್ ಪಡೆಯಲಿದೆ ಎಂದು ಸಮೀಕ್ಷೆ ತಿಳಿಸಿದೆ.
Advertisement
Advertisement
ಇನ್ನೂ ಝೀ ನ್ಯೂಸ್ ಕೂಡ ಸಮೀಕ್ಷೆ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಈ ಬಾರಿ ರಾಜ್ಯದಲ್ಲಿ ಯಾರಿಗೂ ಬಹುಮತವಿಲ್ಲ ಎಂದು ತಿಳಿಸಿದೆ. ಝೀ ನ್ಯೂಸ್‍ನ ಸಮೀಕ್ಷೆ ಈ ರೀತಿಯಿದೆ. ಬಿಜೆಪಿ 96 -106 ಸೀಟ್ ಪಡೆದರೆ, ಕಾಂಗ್ರೆಸ್ 88-98 ಸೀಟ್, ಜೆಡಿಎಸ್ – 23-33 ಹಾಗೂ ಇತರೆ 02-07 ಸೀಟ್ ಪಡೆಯುವ ಸಾಧ್ಯತೆಯಿದೆ ಎಂದು ತಿಳಿಸಿದೆ. Karnataka Election 2023- ಮೇ 10 ರಂದು ಮತದಾನ, ಮೇ 13ಕ್ಕೆ ಫಲಿತಾಂಶ
Advertisement
ಬಿಎಸ್‌ವೈ ಪ್ರಭಾವ ಬೀರುತ್ತಾರಾ?: ಈ ಬಾರಿ ಕರ್ನಾಟಕ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಬಿಜೆಪಿಗೆ ಬಹುಮತ ತಂದುಕೊಡಲು ಪ್ರಭಾವ ಬೀರುತ್ತಾರಾ ಎಂಬ ಪ್ರಶ್ನೆ ಮೂಡಿದೆ. ಈ ಹಿನ್ನೆಲೆಯಲ್ಲಿ ಜೀ ನ್ಯೂಸ್ ನಡೆಸಿದ್ದ ಸಮೀಕ್ಷೆಯಲ್ಲಿ ರಾಜ್ಯದ ಜನತೆಗೆ ಬಿ.ಎಸ್. ಯಡಿಯೂರಪ್ಪ ಅವರ ಬದಲಿಗೆ ಬಸವರಾಜ ಬೊಮ್ಮಾಯಿ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡುವುದು ಪಕ್ಷಕ್ಕೆ ಅಧಿಕಾರವನ್ನು ಉಳಿಸಿಕೊಳ್ಳಲು ಸಹಾಯ ಮಾಡುತ್ತದೆ ಎಂದು ಕೇಳಿತ್ತು. ಇದಕ್ಕೆ ಶೇ.31ರಷ್ಟು ಮಂದಿ ಕೇಸರಿ ಪಾಳಯಕ್ಕೆ ಇದರಿಂದ ಲಾಭವಾಗಲಿದೆ ಎಂದು ಹೇಳಿದರೆ, ಶೇ.21ರಷ್ಟು ಮಂದಿ ಬಿಜೆಪಿಗೆ ನಷ್ಟ ಎಂದು ಹೇಳಿದ್ದಾರೆ.
Advertisement
ಚುನಾವಣಾ ಆಯೋಗದ (Election Commission) ಮುಖ್ಯಸ್ಥ ರಾಜೀವ್ ಕುಮಾರ್ ಕರ್ನಾಟಕ ವಿಧಾನಸಭಾ ಚುನಾವಣಾ (Karnataka Vidhanasabha Election 2023) ದಿನಾಂಕವನ್ನು ಪ್ರಕಟಿಸಿದ್ದಾರೆ. ಏಪ್ರಿಲ್ 13ರಂದು ಅಧಿಸೂಚನೆ ಪ್ರಕಟವಾಗಲಿದ್ದು, ಆಯಾ ಜಿಲ್ಲಾ ಚುನಾವಣಾಧಿಕಾರಿಗಳು ಚುನಾವಣಾ ಅಧಿಸೂಚನೆ ಪ್ರಕಟಿಸಲಿದ್ದಾರೆ. ಅಂದಿನಿಂದಲೇ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ. ಏಪ್ರಿಲ್ 20 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಏಪ್ರಿಲ್ 21 ನಾಮಪತ್ರ ಪರಿಶೀಲನೆ ನಡೆಲಿದ್ದು, ಏಪ್ರಿಲ್ 24 ನಾಮಪತ್ರ ವಾಪಸ್ಸಿಗೆ ಕೊನೆಯ ದಿನವಾಗಿದೆ. ಮೇ 10ರಂದು ಕರ್ನಾಟಕದಲ್ಲಿ ಚುನಾವಣೆ ನಡೆಯಲಿದ್ದು, ಮೇ 13 ಕ್ಕೆ ಫಲಿತಾಂಶ ಪ್ರಕಟವಾಗಲಿದೆ. ಒಂದೇ ಹಂತದಲ್ಲಿ ಮತದಾನ ನಡೆಯುತ್ತದೆ. ಅಲ್ಲದೇ ಇಂದಿನಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಯಾಗಲಿದೆ.