ಸಿದ್ದರಾಮಯ್ಯ ಈಗಾಗಲೇ ರಾಜ್ಯದ ಅಭಿವೃದ್ಧಿಗೆ ಶ್ರಮಿಸಿದ್ದಾರೆ: ರಮ್ಯಾ

Public TV
1 Min Read
ramya 1 5

ಮೈಸೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಈಗಾಗಲೇ ರಾಜ್ಯದ ಅಭಿವೃದ್ಧಿಗೆ ಶ್ರಮಿಸಿದ್ದಾರೆ ಎಂದು ಸ್ಯಾಂಡಲ್‍ವುಡ್ ಕ್ವೀನ್ ರಮ್ಯಾ (Ramya) ಹೇಳಿದ್ದಾರೆ.

Siddaramaiah

ಮೈಸೂರಿನ ಕೆಂಪಿಸಿದ್ದಯ್ಯನಹುಂಡಿ ಸಿದ್ದರಾಮಯ್ಯ ಜೊತೆ ರಮ್ಯಾ ಪ್ರಚಾರ ಆರಂಭ ಮಾಡಿದ ನಟಿ ಇದೇ ವೇಳೆ ಪಬ್ಲಿಕ್ ಟಿವಿ ಜೊತೆ ಮಾತನಾಡಿದರು. ಇಂದು (ಗುರುವಾರ) ಒಂದು ದಿನ ಸಿದ್ದರಾಮಯ್ಯ ಪರ ಪ್ರಚಾರ ಮಾಡುತ್ತೇನೆ. ಇನ್ನೆರಡು ದಿನಗಳು ಬೆಂಗಳೂರು ನಗರ, ಬಿಜಾಪುರ ಹಾಗೂ ಬಾಗಲಕೋಟೆಯಲ್ಲಿ ಪ್ರಚಾರ ಮಾಡುವುದಾಗಿ ಹೇಳಿದರು. ಇದನ್ನೂ ಓದಿ: ಕಳೆದ ಬಾರಿ ರಾಹುಲ್ ಗಾಂಧಿ ಮಾಡಿದ್ದನ್ನು, ಈ ಬಾರಿ ಮೋದಿ ಮಾಡಿದ್ದಾರೆ: ಬೇಸರ ವ್ಯಕ್ತಪಡಿಸಿದ ಹೆಚ್‌ಡಿಡಿ

RAMYA 4

ಸಿದ್ದರಾಮಯ್ಯ ಈಗಾಗಲೇ ರಾಜ್ಯದ ಅಭಿವೃದ್ದಿಗೆ ಶ್ರಮಿಸಿದ್ದಾರೆ. ಅವರನ್ನು ಗೆಲ್ಲಿಸುವಂತೆ ಮತದಾರರಲ್ಲಿ ಮನವಿ ಮಾಡಲು ಬಂದಿದ್ದೇನೆ. ಸಿದ್ದರಾಮಯ್ಯ ಪರ ಪ್ರಚಾರಕ್ಕೆ ಬಂದಿರೋದು ಸಂತಸವಾಗ್ತಿದೆ. ಜನರನ್ನ ನೋಡಿದ್ರೆ ಖುಷಿಯಾಗುತ್ತೆ. ಪಕ್ಷ ಇನ್ನೂ ಅನೇಕ ಕಡೆ ಪ್ರಚಾರ ಮಾಡಬೇಕಾದ ಜವಬ್ದಾರಿಯನ್ನು ನನಗೆ ನೀಡಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ಶಿವಮೊಗ್ಗ, ಬಿಜಾಪುರ ಸೇರಿದಂತೆ ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ಪ್ರಚಾರ ಮಾಡುತ್ತೇನೆ ಎಂದು ತಿಳಿಸಿದರು.

 

Share This Article