ರಾಯಚೂರು/ಕೊಪ್ಪಳ: ಮಣಿಪುರದಲ್ಲಿ (Manipur) ಹಿಂಸಾಚಾರ (Violence) ಹಿನ್ನೆಲೆಯಲ್ಲಿ ರಾಯಚೂರು (Raichur) ಹಾಗೂ ಕೊಪ್ಪಳದಲ್ಲಿ (Koppal) ಶುಕ್ರವಾರ ನಡೆಯಬೇಕಿದ್ದ ಅಮಿತ್ ಶಾ (Amit Shah) ಮತ ಪ್ರಚಾರ ಕಾರ್ಯಕ್ರಮಗಳು ರದ್ದುಗೊಂಡಿದೆ.
ರಾಯಚೂರು ಜಿಲ್ಲೆಯ ಎರಡು ಕಡೆ ಮತಬೇಟೆಗೆ ಸಿದ್ಧತೆಗಳು ನಡೆದಿದ್ದು, ಗುರುವಾರ ರಾತ್ರಿ ಏಕಾಏಕಿ ಕಾರ್ಯಕ್ರಮಗಳು ರದ್ದುಗೊಂಡಿದೆ. ರಾಯಚೂರು ಗ್ರಾಮೀಣ ಕ್ಷೇತ್ರ ಹಾಗೂ ಮಸ್ಕಿ ಕ್ಷೇತ್ರದ ಬಿಜೆಪಿ (BJP) ಅಭ್ಯರ್ಥಿಗಳ ಪರ ಪ್ರಚಾರ ನಿಗದಿಯಾಗಿತ್ತು. ಇದೀಗ ಅಮಿತ್ ಶಾ ಬದಲಾಗಿ ರಾಜ್ಯ ನಾಯಕರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಇದನ್ನೂ ಓದಿ: ನೀಟ್ ಅಭ್ಯರ್ಥಿಗಳಿಗೆ ಸಂಚಾರದ ಆತಂಕ – ಬೆಂಗಳೂರಲ್ಲಿ ಮೋದಿ ರೋಡ್ ಶೋನಲ್ಲಿ ಮತ್ತೆ ಬದಲಾವಣೆ
Advertisement
Advertisement
ಜಿಲ್ಲೆಯ ಯಾಪಲದಿನ್ನಿ ಹಾಗೂ ಮಸ್ಕಿಯಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸಿದ್ದು, ಮಾಜಿ ಸಿಎಂ ಯಡಿಯೂರಪ್ಪ, ಮಾಜಿ ಸಚಿವ ಬಸನಗೌಡ ಪಾಟೀಲ ಯತ್ನಾಳ್ ಹಾಗೂ ಸಂಸದ ತೇಜಸ್ವಿ ಸೂರ್ಯ ಭಾಗಿಯಾಗಲಿದ್ದಾರೆ. ರಾಜ್ಯ ಸಹ ಉಸ್ತುವಾರಿ ಡಿಕೆ ಅರುಣಾ ಹಾಗೂ ತೆಲುಗು ನಟ ಪವನ್ ಕಲ್ಯಾಣ್ ಭಾಗಿಯಾಗುವ ಸಾಧ್ಯತೆಗಳಿವೆ. ಇದನ್ನೂ ಓದಿ: ಬಜರಂಗದಳ ನಿಷೇಧ ವಿಚಾರಕ್ಕೆ ಕೈ ಹಾಕಿದ್ರೆ ಹುಷಾರ್: ಸಿದ್ದಲಿಂಗ ಶ್ರೀಗಳಿಂದ ಡಿಕೆಶಿಗೆ ಎಚ್ಚರಿಕೆ
Advertisement
Advertisement
ಕೊಪ್ಪಳದಲ್ಲಿ ಇಂದು ಮಧ್ಯಾಹ್ನದಿಂದ ರಾತ್ರಿಯವರೆಗೂ ಅಮಿತ್ ಶಾ ಬಿಜೆಪಿ ಪ್ರಚಾರದಲ್ಲಿ ಭಾಗಿಯಾಗುವುದಾಗಿ ನಿಗದಿಯಾಗಿತ್ತು. ಈ ಹಿನ್ನೆಲೆ ಕೊಪ್ಪಳ ಜಿಲ್ಲೆಯ ಕಾರಟಗಿ, ಕುಷ್ಟಗಿಯಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಇದೀಗ ಕಾರ್ಯಕ್ರಮಗಳು ರದ್ದಾಗಿದ್ದು, ಬಿಜೆಪಿ ಕಾರ್ಯಕರ್ತರಿಗೆ ನಿರಾಸೆ ಉಂಟಾಗಿದೆ. ಅಮಿತ್ ಶಾ ಪರ್ಯಾಯವಾಗಿ ಕೇಂದ್ರ ಸಚಿವರಿಂದ ಕೊಪ್ಪಳದಲ್ಲಿ ರೋಡ್ ಶೋ ನಡೆಯಲಿದೆ. ಕೇಂದ್ರ ಸಚಿವ ಮುನ್ಸೂಖ್ ಮಾಂಡವೀಯ, ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರಿಂದ ರೋಡ್ ಶೋ ನಡೆಯಲಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಹನುಮಾನ್ ಚಾಲೀಸಾ ಪಠಿಸಿ ಕಾಂಗ್ರೆಸ್‍ಗೆ ಕೇಸರಿ ಪಡೆ ಸೆಡ್ಡು
ಮಣಿಪುರದಲ್ಲಿ ಗಲಭೆಯಾಗುತ್ತಿದ್ದರೂ ಚುನಾವಣಾ ಪ್ರಚಾರದಲ್ಲಿ ತೊಡಗಿಸಿಕೊಳ್ಳುತ್ತಿರುವ ಬಗ್ಗೆ ಪ್ರತಿಪಕ್ಷ ತೀವ್ರ ಟೀಕೆ ಮಾಡಿತ್ತು. ಅಲ್ಲದೇ ಈ ಕುರಿತು ಕಾಂಗ್ರೆಸ್ ಸರಣಿ ಟ್ವೀಟ್ (Tweet) ಮೂಲಕ ಆಕ್ರೋಶ ವ್ಯಕ್ತಪಡಿಸಿತ್ತು. ಇದನ್ನೂ ಓದಿ: ಕಾಂಗ್ರೆಸ್ ಪ್ರಚಾರದ ವೇಳೆ ಕಲ್ಲು ತೂರಾಟ – ಕಾರ್ಯಕರ್ತೆ ತಲೆಗೆ ಗಂಭೀರ ಪೆಟ್ಟು