ಬೆಂಗಳೂರು: ರಾಜ್ಯದ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಫಲಿತಾಂಶ ನಾಳೆ ಹೊರಬೀಳಲಿದ್ದು, ಸೋಲು-ಗೆಲುವಿನ ಲೆಕ್ಕಾಚಾರ ಜೋರಾಗಿದೆ. ತಮ್ಮ ಅಭ್ಯರ್ಥಿ ಗೆಲುವು ಸಾಧಿಸುತ್ತಾರೆ ಎಂದು ಅನೇಕರು ಲಕ್ಷ ಲಕ್ಷ ಬೆಟ್ಟಿಂಗ್ ಕಟ್ಟುತ್ತಿದ್ದಾರೆ. ಇದರ ನಡುವೆಯೇ ಆನೇಕಲ್ ಕ್ಷೇತ್ರದಲ್ಲಿ ಪ್ರಮುಖ ಪಕ್ಷಗಳ ಕಾರ್ಯಕರ್ತರು ಚೊಂಬು ಶಾಸ್ತ್ರದ ಮೊರೆ ಹೋಗಿದ್ದಾರೆ.
ಆನೇಕಲ್ (Anekal) ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ-ಕಾಂಗ್ರೆಸ್ (Congress – BJP) ನಡುವೆ ಜಿದ್ದಾಜಿದ್ದಿ ನಡೆದಿದೆ. ಕಾಂಗ್ರೆಸ್ ಅಭ್ಯರ್ಥಿ ಬಿ.ಶಿವಣ್ಣ ಹಾಗೂ ಬಿಜೆಪಿ ಅಭ್ಯರ್ಥಿ ಹುಲ್ಲಹಳ್ಳಿ ಶ್ರೀನಿವಾಸ್ ನಡುವೆ ಬಿಗ್ ಫೈಟ್ ನಡೆದಿದೆ. ನಾಳೆ ಹೊರ ಬೀಳುವ ಫಲಿತಾಂಶದಲ್ಲಿ ಯಾರು ಜಯ ಸಾಧಿಸಲಿದ್ದಾರೆ ಎಂಬುದು ಕುತೂಹಲ ಮೂಡಿಸಿದೆ. ಫಲಿತಾಂಶಕ್ಕೂ ಮುನ್ನ ಕಾರ್ಯಕರ್ತರು ಚೊಂಬು ಶಾಸ್ತ್ರ ಕೇಳಿದ್ದಾರೆ. ಇದನ್ನೂ ಓದಿ: ವಿಧಾನಸಭೆ ಚುನಾವಣೆ 2023: ಕಣದಲ್ಲಿದ್ದ ಸಿನಿಮಾ ಸೆಲೆಬ್ರಿಟಿಗಳ ಕನಸು ನನಸಾಗತ್ತಾ?
ಕಾಂಗ್ರೆಸ್ ಮೇಲುಗೈ ಸಾಧಿಸುತ್ತದೆ ಎಂದು ಶಾಸ್ತ್ರದಲ್ಲಿ ಹೇಳಲಾಗಿದೆ. ಚೊಂಬು ಶಾಸ್ತ್ರ ಕೇಳುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ರಾಜ್ಯದಲ್ಲಿ ಚುನಾವಣೆ ಗೆಲುವಿನ ಬೆಟ್ಟಿಂಗ್ ಜೋರಾಗಿ ನಡೆಯುತ್ತಿದೆ. ಕೆ.ಆರ್.ನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ವ್ಯಕ್ತಿಯೊಬ್ಬ ಕಂತೆ ಕಂತೆ ನೋಟು ಹಿಡಿದು ಬೆಟ್ಟಿಂಗ್ ಕಟ್ಟುತ್ತಿದ್ದ ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡಿತ್ತು. ಮತ್ತೊಂದು ಕಡೆ ವ್ಯಕ್ತಿ ತನ್ನ ಜಮೀನನ್ನೇ ಮಾರಿ ಬೆಟ್ಟಿಂಗ್ ಕಟ್ಟಲು ಮುಂದಾಗಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್, ಜೆಡಿಎಸ್ ಮುಖಂಡರ ಮಧ್ಯೆ ಗಲಾಟೆ – ಕೈ ಮುಖಂಡನಿಗೆ ಚಾಕು