ಕಲಬುರಗಿ: ಬಿಜೆಪಿಯಿಂದ ಎಲ್ಲಾ ಅಧಿಕಾರ ಅನುಭವಿಸಿ ಪಕ್ಷ ತೊರೆದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ (Jagadish Shettar) ಹಾಗೂ ಲಕ್ಷ್ಮಣ ಸವದಿ (Laxman Savadi) ಇಬ್ಬರೂ ಮುಂದೆ ಅನುಭವಿಸುತ್ತಾರೆ ಎಂದು ಬಿಜೆಪಿ (BJP) ನಾಯಕ ಅರುಣ್ ಸಿಂಗ್ (Arun Singh) ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸವದಿ ಹಾಗೂ ಶೆಟ್ಟರ್ ಇಬ್ಬರೂ ಬಿಜೆಪಿಯಿಂದ ಅಧಿಕಾರ ಅನುಭವಿಸಿದ್ದಾರೆ. ಶೆಟ್ಟರ್ ಮುಖ್ಯಮಂತ್ರಿಯಾಗಿದ್ದರು, ಸವದಿ ಸೋತರೂ ಡಿಸಿಎಂ ಸ್ಥಾನ ನೀಡಲಾಗಿತ್ತು. ಆದರೂ ಈಗ ಶಾಸಕ ಸ್ಥಾನಕ್ಕಾಗಿ ಪಕ್ಷ ತೊರೆದಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: 3 ಪಕ್ಷದ ಘಟಾನುಘಟಿ ನಾಯಕರಿಂದ ನಾಮಪತ್ರ ಸಲ್ಲಿಕೆ
ಪ್ರಧಾನಿ ನರೇಂದ್ರ ಮೋದಿಯವರ (Narendra Modi) ನಾಯಕತ್ವದಲ್ಲಿ ಕೆಲಸ ಮಾಡುವುದು ಗೌರವದ ವಿಚಾರವಾಗಿದೆ. ಆಂತಹ ಅವಕಾಶ ಇದ್ದರೂ ಅದರಿಂದ ದೂರ ಹೋದವರು ಭವಿಷ್ಯದಲ್ಲಿ ಅನುಭವಿಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.
ಬಿಜೆಪಿ ದೇಶದ ಅತಿ ದೊಡ್ಡ ಪಕ್ಷವಾಗಿದೆ. ಕಾಂಗ್ರೆಸ್ (Congress) ಮುಳುಗುತ್ತಿರುವ ಪಕ್ಷವಾಗಿದೆ. ಇಂತಹ ಪಕ್ಷಕ್ಕೆ ಅವರ ಸ್ವಾರ್ಥಕ್ಕಾಗಿ ಹೋಗಿದ್ದಾರೆ. ಅವರು ಮುಳುಗುವ ಹಡಗಿನಲ್ಲಿ ಅಪಾಯದ ಪ್ರಯಾಣ ಮಾಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ. ಇದನ್ನೂ ಓದಿ: ಪತಿಯನ್ನು ತಬ್ಬಿ ಕಣ್ಣೀರಿಟ್ಟ ಶಿಲ್ಪಾ ಜಗದೀಶ್