ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ (Karnataka Election) ಅಸಾದುದ್ದೀನ್ ಓವೈಸಿ (Asaduddin Owaisi) ನೇತೃತ್ವದ ಎಐಎಂಐಎಂ (AIMIM) 25 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲಿದ್ದು, ಜೆಡಿಎಸ್ (JDS) ಜೊತೆ ಮೈತ್ರಿ ಮಾಡಿಕೊಳ್ಳಲು ಮುಂದಾಗಿದೆ.
ಮಾಧ್ಯಮದ ಜೊತೆ ಮಾತನಾಡಿದ ಓವೈಸಿ, ಈಗಾಗಲೇ ನಾವು ಮೂವರು ಅಭ್ಯರ್ಥಿಗಳನ್ನು ಪ್ರಕಟ ಮಾಡಿದ್ದೇವೆ. ನಾವು ಮೈತ್ರಿಗೆ ಸಿದ್ಧವಾಗಿದ್ದೇವೆ. ಮೈತ್ರಿಯಾಗದೇ ಇದ್ದರೆ ನಮ್ಮ ಅಭ್ಯರ್ಥಿಗಳನ್ನು ಇಳಿಸುತ್ತೇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಭಾರೀ ಮಳೆ – ಬೆಂಗಳೂರಿಗೆ ಬರಬೇಕಿದ್ದ ವಿಮಾನಗಳು ಬೇರೆಡೆಗೆ ಡೈವರ್ಟ್
Advertisement
Advertisement
ಕಾಂಗ್ರೆಸ್ (Congress) ಜೊತೆ ಮೈತ್ರಿ ಮಾಡಿಕೊಳ್ಳುತ್ತೀರಾ ಎಂಬ ಪ್ರಶ್ನೆಗೆ, ಕಾಂಗ್ರೆಸ್ ನನ್ನ ವಿರುದ್ಧ ಆಧಾರ ರಹಿತ ಆರೋಪ ಮಾಡಿದೆ. ಹೀಗಾಗಿ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಓವೈಸಿ ಉತ್ತರಿಸಿದರು.
Advertisement
ಮುಸ್ಲಿಮರಿಗೆ ನೀಡಲಾಗಿದ್ದ ಶೇ.4 ರಷ್ಟು ಮೀಸಲಾತಿಯನ್ನು (Reservation) ರದ್ದುಗೊಳಿಸಿದ ಬಸವರಾಜ ಬೊಮ್ಮಾಯಿ ಸರ್ಕಾರದ ನಿರ್ಧಾರವನ್ನು ಸಂಪೂರ್ಣ ಕಾನೂನುಬಾಹಿರ ಎಂದ ಓವೈಸಿ ಬಿಜೆಪಿ ಸರ್ಕಾರದ ನಿರ್ಧಾರವನ್ನು ಖಂಡಿಸಿ ಪ್ರತಿಭಟನೆ ಯಾಕೆ ನಡೆಸಲಿಲ್ಲ? ಜಾತ್ಯಾತೀತ ನಾಯಕರು ಮತ್ತು ಪಕ್ಷಗಳಿಂದ ಏಕೆ ಬಲವಾದ ಹೇಳಿಕೆಗಳು ಹೊರಹೊಮ್ಮಲಿಲ್ಲ ಎಂದು ಪ್ರಶ್ನಿಸಿದರು.
Advertisement
ಮೈತ್ರಿ ಸಂಬಂಧ ಪಕ್ಷದ ಜೆಡಿಎಸ್ ವರಿಷ್ಠ ಎಚ್‌ಡಿ ದೇವೇಗೌಡ (HD Devegowda) ಅವರ ಜೊತೆ ಮಾತುಕತೆ ನಡೆಯುತ್ತಿದೆ. ಇಲ್ಲಿಯವರೆಗೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. 2018ರ ಚುನಾವಣೆಯಲ್ಲಿ ಎಐಎಂಐಎಂ ಅಭ್ಯರ್ಥಿಗಳನ್ನು ಹಾಕದೇ ಜೆಡಿಎಸ್ ಪಕ್ಷಕ್ಕೆ ಬೆಂಬಲ ವ್ಯಕ್ತಪಡಿಸಿತ್ತು.