ಹುಬ್ಬಳ್ಳಿ: ಲಂಕಾದಲ್ಲಿ ರಾಮನ ಭಕ್ತ ಹನುಮಂತ ಹೋಗಿ ಬಾಲಕ್ಕೆ ಬೆಂಕಿ ಹಚ್ಚಿ ಲಂಕೆಯನ್ನು ಸುಟ್ಟು ಭಸ್ಮ ಮಾಡಿದ. ಅದೇ ರೀತಿ ಬಜರಂಗಬಲಿಯ ಆಕ್ರೋಶದಿಂದ ಕಾಂಗ್ರೆಸ್ (Congress) ಭವಿಷ್ಯ ಸುಟ್ಟು ಬೂದಿಯಾಗಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಕಿಡಿಕಾರಿದ್ದಾರೆ.
ಹುಬ್ಬಳ್ಳಿಯಲ್ಲಿ (Hubballi) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಜರಂಗದಳ (Bajarang Dal) ವಿಚಾರದಲ್ಲಿ ಕಾಂಗ್ರೆಸ್ ಗೊಂದಲದಲ್ಲಿ ಸಿಲುಕಿಕೊಂಡಿದೆ. ನಾವು ಬಜರಂಗದಳವನ್ನು ಬ್ಯಾನ್ ಮಾಡುವುದಿಲ್ಲ ಎಂದು ವೀರಪ್ಪ ಮೊಯ್ಲಿಯವರೇ ಸ್ಪಷ್ಟಪಡಿಸಿದ್ದಾರೆ. ಆದರೆ ಸುರ್ಜೇವಾಲ, ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರು ನಾವು ಬಜರಂಗದಳವನ್ನು ಬ್ಯಾನ್ ಮಾಡಿಯೇ ತೀರುತ್ತೇವೆ ಎನ್ನುತ್ತಿದ್ದಾರೆ. ಬಜರಂಗದಳದ ಭಯ ಎಷ್ಟಿದೆ ಎನ್ನುವುದನ್ನು ಕಾಂಗ್ರೆಸ್‌ನವರು ಒಮ್ಮೆ ನೋಡಿಕೊಳ್ಳಿ. ಬಜರಂಗದಳ ನಿಷೇಧ ಮಾಡುವುದರ ಬಗ್ಗೆ ಜಗದೀಶ್ ಶೆಟ್ಟರ್ ತಮ್ಮ ನಿಲುವನ್ನು ವ್ಯಕ್ತಪಡಿಸಬೇಕು ಎಂದು ನಾನು ವಿನಂತಿ ಮಾಡುತ್ತೇನೆ ಎಂದರು. ಇದನ್ನೂ ಓದಿ: ಸಿಎಂ ಪೋಸ್ಟ್‌ಗೆ 2,500 ಕೋಟಿ.. ಮಿನಿಸ್ಟರ್‌ಗಾಗಿ 500 ಕೋಟಿ ರೂ. – ಬಿಜೆಪಿ ವಿರುದ್ಧ ಕಾಂಗ್ರೆಸ್ ಭ್ರಷ್ಟಾಚಾರ ಅಸ್ತ್ರ
Advertisement
Advertisement
ಗೋವಾದಲ್ಲಿ ಬಿಜೆಪಿ (BJP) ಸರ್ಕಾರ ಶ್ರೀರಾಮ ಸೇನೆ ಬ್ಯಾನ್ ಮಾಡಿದ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಆಯಾ ರಾಜ್ಯ ಸರ್ಕಾರ ಅಲ್ಲಿನ ವ್ಯವಸ್ಥೆ ನೋಡಿ ಬ್ಯಾನ್ ಮಾಡಿರಬಹುದು. ಅದು ಬೇರೆ ವಿಷಯ. ಬಜರಂಗದಳ ಯಾವುದೇ ಹಿಂಸಾತ್ಮಕ ಕೃತ್ಯಗಳಲ್ಲಿ ಭಾಗಿಯಾಗದ ಸಂಘಟನೆ. ಬಜರಂಗದಳ ಯಾವುದೇ ಕಾರಣಕ್ಕೂ ಭಯೋತ್ಪಾದನೆಯ (Terrorism) ಲಿಂಕ್ ಹೊಂದಿಲ್ಲ. ಪಿಎಫ್‌ಐಗೆ (PFI) ಭಯೋತ್ಪಾದಕರ ಜೊತೆ ಲಿಂಕ್ ಇದೆ. ಇದನ್ನು ನಾನು ಖಂಡಿಸುತ್ತೇನೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ನಾನೂ ಕೂಡ ಶಿವಣ್ಣನ ಅಭಿಮಾನಿ : ಉಲ್ಟಾ ಹೊಡೆದ ಸಂಸದ ಸಿಂಹ
Advertisement
Advertisement
ಬಿ.ಎಲ್.ಸಂತೋಷ್ (B.L.Santhosh) ಲಿಂಗಾಯತರ ಮತ ಬೇಡ ಎಂಬ ಹೇಳಿಕೆಯ ವಿಚಾರವಾಗಿ ಮಾತನಾಡಿದ ಅವರು, ಬಿ.ಎಲ್.ಸಂತೋಷ್ ಆ ರೀತಿ ಹೇಳಿಲ್ಲ. ಇದು ಮಾಧ್ಯಮಗಳ ಸೃಷ್ಟಿ ಎಂದರು. ಇದನ್ನೂ ಓದಿ: ರೋಡ್ ಶೋನಿಂದ ಒಬ್ಬ ವಿದ್ಯಾರ್ಥಿಗೂ ತೊಂದರೆಯಾಗಬಾರದು ಅಂದ್ರು ಪ್ರಧಾನಿ: ಶೋಭಾ ಕರಂದ್ಲಾಜೆ