ಮಡಿಕೇರಿ: ಬಜರಂಗದಳ ಭಯೋತ್ಪಾದಕ ಸಂಘಟನೆಯಲ್ಲ. ಅದು ಅಲ್-ಖೈದಾವೂ ಅಲ್ಲ ಎಂದು ಮಡಿಕೇರಿ ಕ್ಷೇತ್ರ ಶಾಸಕ ಹಾಗೂ ಬಿಜೆಪಿ ಅಭ್ಯರ್ಥಿ ಅಪ್ಪಚ್ಚು ರಂಜನ್ (Appachu Ranjan) ಸಿದ್ದರಾಮಯ್ಯ (Siddaramaiah) ವಿರುದ್ಧ ಕಿಡಿಕಾರಿದ್ದಾರೆ.
ಕೊಡಗು (Kodagu) ಜಿಲ್ಲೆಯ ಸೋಮವಾರಪೇಟೆ (Somwarpet) ತಾಲೂಕಿನ ಶಿರಂಗಾಲದಲ್ಲಿ ಆಯೋಜಿಸಿದ್ದ ಬಹಿರಂಗ ಪ್ರಚಾರ ಸಭೆಯಲ್ಲಿ ಪಾಲ್ಗೊಂಡ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಜರಂಗದಳ ಒಂದು ದೇಶಭಕ್ತ ಸಂಘಟನೆ. ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಅಧಿಕಾರಕ್ಕೆ ಬಂದ ಮೇಲೆ ಬಜರಂಗದಳವನ್ನು (Bhajarang Dal) ನಿಷೇಧ ಮಾಡುವುದಾಗಿ ಹೇಳಿದ್ದಾರೆ. ಅವರು ಅವಸಾನ ಹೊಂದುವುದು ಖಚಿತ ಎಂದು ಹರಿಹಾಯ್ದರು. ಇದನ್ನೂ ಓದಿ: ಪತ್ನಿ, ಸಹೋದರನಿಗಾಗಿ ಒಂದು ದಿನ ಆಸ್ಪತ್ರೆಗೆ ಭೇಟಿ – ಮತ್ತೊಂದು ದಿನ ಕ್ಷೇತ್ರದಲ್ಲಿ ಪ್ರಿಯಾಂಕ್ ಪ್ರಚಾರ
Advertisement
Advertisement
ಬಜರಂಗದಳ ದೇಶಾಭಿಮಾನವನ್ನು ಪಸರಿಸುತ್ತಿರುವ ದೇಶಭಕ್ತರ ಸಂಘಟನೆ. ಅದು ಯಾವುದೇ ರೀತಿಯ ಭಯೋತ್ಪಾದಕ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿಲ್ಲ. ಇಂತಹ ಸಂಘಟನೆಯನ್ನು ನಿಷೇಧಿಸುತ್ತೇವೆ ಎಂದಿರುವ ಸಿದ್ದರಾಮಯ್ಯ ಈ ಬಾರಿ ವರುಣಾದಲ್ಲಿ (Varuna) ಸೋಲುವುದು ಖಚಿತ. ಅಲ್ಲದೇ ಕಾಂಗ್ರೆಸ್ (Congress) 40ಕ್ಕಿಂತ ಹೆಚ್ಚು ಸ್ಥಾನ ಗೆಲ್ಲುವುದಿಲ್ಲ ಎಂದರು. ಇದನ್ನೂ ಓದಿ: ಯತ್ನಾಳ್, ಪ್ರಿಯಾಂಕ್ ಖರ್ಗೆಗೆ ಶೋಕಾಸ್ ನೋಟಿಸ್ ಜಾರಿ
Advertisement
Advertisement
ಇಂಗ್ಲೆಂಡ್‌ನಿಂದ ಟಿಪ್ಪುವಿನ ಖಡ್ಗ ತಂದ ವಿಜಯ್ ಮಲ್ಯ ಮಣ್ಣು ಮುಕ್ಕಿದರು. ಟಿಪ್ಪು ಧಾರವಾಹಿ ಮಾಡಿದ ಸಂಜಯ್ ಖಾನ್ ಸಹ ಮಣ್ಣು ಮುಕ್ಕಿದರು. ಇದೀಗ ಟಿಪ್ಪು ಜಯಂತಿ ಮತ್ತೆ ಮಾಡುತ್ತೇವೆ ಎನ್ನುತ್ತಿರುವ ಸಿದ್ದರಾಮಯ್ಯನವರ ಸರದಿ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಕಾಂಗ್ರೆಸ್ ಬಜರಂಗಿ ಸಂಘರ್ಷ – ಬೆಳಗ್ಗೆಯಿಂದಲೇ ದೇವಸ್ಥಾನಗಳಲ್ಲಿ ಮೊಳಗಲಿದೆ ಹನುಮಾನ್ ಚಾಲೀಸಾ