ಶಿವಮೊಗ್ಗ: ಕಾಂಗ್ರೆಸ್ (Congress) ನಾಯಕರ ಎದೆ ನಡುಗಿಸುವಂತಹ ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ (BJP) ಬಿಡುಗಡೆ ಮಾಡಿದೆ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ (K.S.Eshwarappa) ಶಿವಮೊಗ್ಗದಲ್ಲಿ ಹೇಳಿದ್ದಾರೆ.
ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ನಾಯಕರು ಅಳೆದು ತೂಗಿ ಅಭ್ಯರ್ಥಿಗಳ ಪಟ್ಟಿ (BJP candidates list) ಬಿಡುಗಡೆ ಮಾಡಿದ್ದಾರೆ. ಹಾಗಾಗಿ ಚುನಾವಣೆಯಲ್ಲಿ (Election) ರಾಜ್ಯದ ಜನರ ಮನಸ್ಸನ್ನು ಗೆದ್ದು ಪೂರ್ಣ ಬಹುಮತದಿಂದ ಬಿಜೆಪಿ ಆಯ್ಕೆಯಾಗಲಿದೆ. ಬಿಡುಗಡೆಯಾದ ಪಟ್ಟಿಯಿಂದ ಬಹಳ ಖುಷಿಯಾಗಿದೆ ಎಂದಿದ್ದಾರೆ. ಇದನ್ನೂ ಓದಿ: ನಿವೃತ್ತಿ ಘೋಷಣೆ ಮಾಡಲು ಸಿದ್ಧ, ಆದ್ರೆ ಅದು ಗೌರವಯುತವಾಗಿ ಆಗಬೇಕು: ಶೆಟ್ಟರ್
Advertisement
Advertisement
ಕರ್ನಾಟಕದಲ್ಲಿ ಈವರೆಗೂ ಬಿಜೆಪಿಗೆ ಪೂರ್ಣ ಬಹುಮತ ಬಂದಿಲ್ಲ. ಬಿಜೆಪಿ ಆಡಳಿತ ಮಾಡಲಿ ಎಂದು ಜನ ಆದೇಶ ಕೊಟ್ಟಿದ್ದರು. ಈ ಬಾರಿ ಆದೇಶದೊಂದಿಗೆ ಪೂರ್ಣ ಬಹುಮತವನ್ನು ಕೊಡಿ ಎಂದು ಮನವಿ ಮಾಡುತ್ತೇನೆ ಎಂದಿದ್ದಾರೆ.
Advertisement
ಬಿಜೆಪಿ ನಿಂತ ನೀರಲ್ಲ. ಇಲ್ಲಿ ಹೊಸ ಅಭ್ಯರ್ಥಿಗಳು ಬರುತ್ತಾರೆ. ಜೊತೆಗೆ ಹಳಬರು ಇರುತ್ತಾರೆ. ಎಲ್ಲರಿಗೂ ಅನುಕೂಲವಾಗುವಂತಹ ಪಟ್ಟಿ ಬಿಡುಗಡೆ ಆಗಿದೆ. ಹಿಂದುಳಿದ ವರ್ಗದವರಿಗೆ ಹೆಚ್ಚಿನ ಆದ್ಯತೆ ಕೊಟ್ಟಿದ್ದಾರೆ. ಪಟ್ಟಿಯಲ್ಲಿ ವೈದ್ಯರು, ನಿವೃತ್ತ ಐಎಎಸ್ ಅಧಿಕಾರಿ ಹಾಗೂ ನಿವೃತ್ತ ಸರ್ಕಾರಿ ನೌಕರರು ಇದ್ದಾರೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.
Advertisement
ಜಗದೀಶ್ ಶೆಟ್ಟರ್ (Jagadish Shettar) ಹಾಗೂ ಲಕ್ಷ್ಮಣ್ ಸವದಿ (Laxman Savadi) ಅವರಿಗೆ ಟಿಕೆಟ್ ತಪ್ಪಿದ್ದು, ಸಹಜವಾಗಿ ಬೇಸರ ತರುತ್ತದೆ. ಅವರು ಪಕ್ಷದ ಹಿರಿಯರು, ಪಕ್ಷದ ಮುಖಂಡರು ಅವರನ್ನು ಕರೆದು ಮಾತಾಡಲಿದ್ದಾರೆ. ಬಾಕಿ ಇರುವ ಶಿವಮೊಗ್ಗ ನಗರ ಕ್ಷೇತ್ರಕ್ಕೆ ವರಿಷ್ಠರು ನಿರ್ಧಾರ ತೆಗೆದುಕೊಳ್ಳುತ್ತಾರೆ. ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲಬೇಕು. ಅದಕ್ಕೆ ಕೆಲಸ ಮಾಡುತ್ತೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಬಿಜೆಪಿ ಟಿಕೆಟ್ – ಜಾತಿವಾರು ಲೆಕ್ಕಾಚಾರ ಏನು?