ಬೆಂಗಳೂರು: ಬಿಜೆಪಿ 150 ಸ್ಥಾನ ಪಡೆದು ಮತ್ತೊಮ್ಮೆ ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಅಂತಾ ಬಿಜೆಪಿ (BJP) ಕರ್ನಾಟಕ ಉಸ್ತುವಾರಿ ಅರುಣ್ ಸಿಂಗ್ (Arun Singh) ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನಲ್ಲಿ (Bengaluru) ಮಾತನಾಡಿದ ಅವರು, ವಿಜಯ ಸಂಕಲ್ಪ ಯಾತ್ರೆ ಅತ್ಯುತ್ತಮವಾಗಿ ನಡೆಯುತ್ತಿದೆ. ಪ್ರತಿ ಬೂತ್‌ನಲ್ಲಿ ಬಿಜೆಪಿ ಬಾವುಟ (BJP Flag) ಕಟ್ಟುವ ಕೆಲಸ ಆಗುತ್ತಿದೆ. ಕೇಂದ್ರ ರಾಜ್ಯ ಸರ್ಕಾರದ ಯೋಜನೆಗಳನ್ನ ಜನರಿಗೆ ತಲುಪಿಸುವ ಕೆಲಸ ಮಾಡಲಾಗ್ತಿದೆ. ವಿಜಯ ಸಂಕಲ್ಪ ಯಾತ್ರೆಗೆ (Vijay Sankalp Yatra) ಉತ್ತಮ ಪ್ರತಿಕ್ರಿಯೆ ಬರುತ್ತಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕುಮಾರಸ್ವಾಮಿಯನ್ನು ಬಿಟ್ಟು ನಾನು ಏನೂ ಮಾಡಲ್ಲ – ಟಿಕೆಟ್ ದಂಗಲ್ ಬಗ್ಗೆ ಮೌನ ಮುರಿದ ರೇವಣ್ಣ
Advertisement
Advertisement
ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಬೇಕು ಅಂತಾ ಜನ ಹೇಳ್ತಿದ್ದಾರೆ. ನಾನು ಗದಗ ಜಿಲ್ಲೆಯಲ್ಲಿ ಅಭಿಯಾನ ಮಾಡಿದ್ದೇನೆ. 61 ಸಾವಿರ ಬೂತ್‌ಗೆ ನಾವು ತಲುಪಿದ್ದೇವೆ. ಅಮಿತ್ ಶಾ (Amit Shah), ಜೆ.ಪಿ ನಡ್ಡಾ (JP Nadda), ಸಿಎಂ ಎಲ್ಲರೂ ಅಭಿಯಾನ ಮಾಡ್ತಿದ್ದೇವೆ. ಈ ವಿಜಯ ಸಂಕಲ್ಪ ಯಾತ್ರೆಯಿಂದ ನಾವು ಮತ್ತೆ ಅಧಿಕಾರಕ್ಕೆ ಬರುತ್ತೇವೆ. ಬಿಜೆಪಿ 150 ಸ್ಥಾನ ಪಡೆದು ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ ಅಂತಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ‘ದಸರಾ’ ಸಿನಿಮಾ ಟೀಸರ್ ಬಿಡುಗಡೆ ಮಾಡಲಿದ್ದಾರೆ ಸೂಪರ್ ಸ್ಟಾರ್ಸ್
Advertisement
Advertisement
ವಿಜಯ ಸಂಕಲ್ಪ ಯಾತ್ರೆ ಬಳಿಕ ರಥಯಾತ್ರೆ ಆಯೋಜನೆ ಮಾಡುವ ಪ್ಲಾನ್ ಇದೆ. ಈ ಬಗ್ಗೆ ರೂಪುರೇಷೆಗಳನ್ನು ಸಿದ್ಧಪಡಿಸಿ ರಥಯಾತ್ರೆ ಬಗ್ಗೆ ನಿರ್ಧಾರ ಮಾಡಲಾಗುತ್ತದೆ. ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲು ಏನು ಬೇಕೋ ಆ ಎಲ್ಲ ಸಿದ್ಧತೆಗಳನ್ನ ಮಾಡಲಾಗುತ್ತಿದೆ ಅಂತಾ ತಿಳಿಸಿದ್ದಾರೆ.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k