ಬೆಂಗಳೂರು: ಬಿಜೆಪಿ ಬಿಟ್ಟು ಕಾಂಗ್ರೆಸ್ (Congress) ಸೇರಿದ ಜಗದೀಶ್ ಶೆಟ್ಟರ್ (Jagadish Shettar) ಹಾಗೂ ಲಕ್ಷ್ಮಣ ಸವದಿ (Lakshman Savadi) ಅವರನ್ನು ಸೋಲಿಸಲು ಟಾರ್ಗೆಟ್ ಫಿಕ್ಸ್ ಆಗಿದೆ. ಇಬ್ಬರನ್ನು ಸೋಲಿಸಲು, ಲಿಂಗಾಯತ ವೋಟ್ ಬ್ಯಾಂಕ್ (Lingayat Vote Bank) ಉಳಿಸಿಕೊಳ್ಳಲು ಬಿಜೆಪಿ ನಾಯಕರು ಸಭೆ ಮೇಲೆ ಸಭೆ ಮಾಡುತ್ತಿದ್ದಾರೆ.
Advertisement
ಅವಿಭಜಿತ ಧಾರವಾಡ ಜಿಲ್ಲೆಯ 175 ನಾಯಕರ ಜೊತೆ ಅಮಿತ್ ಶಾ (Amit Shah) ಮಂಥನ ನಡೆಸಿದ್ದಾರೆ. ಇವತ್ತು ಬಿಎಸ್ ಯಡಿಯೂರಪ್ಪ (BS Yediyurappa) ನಿವಾಸಕ್ಕೆ ಪಕ್ಷದ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ (BL Santosh) ಧಾವಿಸಿ, ಮಹತ್ವದ ಸಮಾಲೋಚನೆ ನಡೆಸಿದ್ದಾರೆ.
Advertisement
ಮೂಲಗಳ ಪ್ರಕಾರ, ಶೆಟ್ಟರ್, ಸವದಿ ಸೋಲಿಸಲು ಬಿಎಸ್‌ವೈ ಮತ್ತು ಬೊಮ್ಮಾಯಿಗೆ ಹೈಕಮಾಂಡ್ ಟಾಸ್ಕ್ ನೀಡಿದೆ. ಬುಧವಾರ ಅಥಣಿ, ಹುಬ್ಬಳ್ಳಿ ಧಾರವಾಡದಲ್ಲಿ ಲಿಂಗಾಯತ ಸಮುದಾಯದ ಪ್ರಭಾವಿ ನಾಯಕ ಯಡಿಯೂರಪ್ಪ ಪ್ರಚಾರ ನಡೆಸಲಿದ್ದಾರೆ.
Advertisement
Advertisement
ಈ ಮಧ್ಯೆ ಶೆಟ್ಟರ್ ವಿರುದ್ಧವೂ ವಾಗ್ದಾಳಿ ನಡೆಸಿದ ಅಮಿತ್ ಶಾ, ಹುಬ್ಬಳ್ಳಿಯಲ್ಲಿ ಶೆಟ್ಟರ್ ಕನಿಷ್ಠ 25 ಸಾವಿರ ಮತಗಳ ಅಂತರದಿಂದ ಸೋಲಬೇಕು ಎಂದು ಕರೆ ನೀಡಿದ್ದಾರೆ.