ರಾಯಚೂರು: ಪ್ರಧಾನಿ ಮೋದಿ (Narendra Modi) ಮತ್ತು ಅಮಿತ್ ಶಾ (Amit Shah) ನೇತೃತ್ವದಲ್ಲಿ ಚುನಾವಣೆ ಎದುರಿಸುತ್ತೇವೆ. ಸ್ಪಷ್ಟ ಬಹುಮತದಿಂದ ಬಿಜೆಪಿ ಸರ್ಕಾರ ರಚಿಸುತ್ತೇವೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ (BS Yediyurappa) ವಿಶ್ವಾಸ ವ್ಯಕ್ತಪಡಿಸಿದರು.
ರಾಯಚೂರಿನ (Raichur) ಸಿಂಧನೂರಿನಲ್ಲಿ ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿದ್ದ ಯಡಿಯೂರಪ್ಪ ಮಾತನಾಡಿ, ತಾವೇ ಮುಖ್ಯಮಂತ್ರಿ ಅಂತ ಕಾಂಗ್ರೆಸ್‌ನವರು (Congress) ಓಡಾಡುತ್ತಿದ್ದಾರೆ. ಅದು ತಿರುಕನ ಕನಸು. ಅಧಿವೇಶನ ಮುಗಿದ ಮೇಲೆ ರಾಜ್ಯ ಪ್ರವಾಸ ಆರಂಭವಾಗುತ್ತದೆ. ಬಿಜೆಪಿ (BJP) ಬಗ್ಗೆ ಜನರಿಗೆ ಒಲವು ಹೇಗಿದೆ ಅನ್ನೋದು ಈಗಾಗಲೇ ಗೊತ್ತಾಗಿದೆ ಎಂದರು.
Advertisement
Advertisement
ಎಸ್‌ಸಿ, ಎಸ್‌ಟಿ, ಹಿಂದುಳಿದ ಸಮುದಾಯಗಳಿಗೆ ಸಿಎಂ ಬೊಮ್ಮಾಯಿ ಮಾಡಿದ ಕೆಲಸಗಳು ಪಕ್ಷಕ್ಕೆ ಶಕ್ತಿ ತಂದುಕೊಡುತ್ತದೆ. ನಾವು ಮತ್ತೊಮ್ಮೆ ಅಧಿಕಾರಕ್ಕೆ ಬರುವುದು ನಿಶ್ಚಿತ. ಅಧಿವೇಶನ ಬಳಿಕ 4 ಕಡೆಗಳಿಂದ ರಥಯಾತ್ರೆ ಆರಂಭಿಸುತ್ತೇವೆ. ಇಡೀ ರಾಜ್ಯ ಪ್ರವಾಸ ಮಾಡುತ್ತೇವೆ ಎಂದು ಹೇಳಿದರು.
Advertisement
ಯಡಿಯೂರಪ್ಪರನ್ನು ಪಕ್ಷದಲ್ಲಿ ಸೈಡ್‌ಲೈನ್ ಮಾಡಲಾಗುತ್ತಿದೆ ಎನ್ನುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಸೈಡ್‌ಲೈನ್ ಅಂದ್ರೆ ಏನು, ಪಾರ್ಟಿ ನನಗೆ ಎಲ್ಲವನ್ನೂ ಕೊಟ್ಟಿದೆ. ಯಾವುದೇ ಕೊರತೆಯಿಲ್ಲ ನಾನು ಸಂತೃಪ್ತಿಯಾಗಿದ್ದೇನೆ, ಸಮಾಧಾನದಲ್ಲಿದೇನೆ. ರಾಷ್ಟ್ರ ಮಟ್ಟದಲ್ಲೂ ನನಗೆ ಜವಾಬ್ದಾರಿ ಕೊಟ್ಟಿದ್ದಾರೆ. ಯಡಿಯೂರಪ್ಪರನ್ನು ನಿರ್ಲಕ್ಷ್ಯ ಮಾಡುತ್ತಿದ್ದಾರೆ ಎನ್ನುವ ಮಾತಿಗೆ ಅರ್ಥವಿಲ್ಲ. ಎಲ್ಲಾ ರೀತಿಯ ಸಹಕಾರ ಬೆಂಬಲ ಅಮಿತ್ ಶಾ, ಮೋದಿ ಕೊಡುತ್ತಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ಸರ್ಕಾರಿ ಕಚೇರಿಗಳಲ್ಲಿ ಅಳವಡಿಸಿರುವ ಚೀನಾ ನಿರ್ಮಿತ ಭದ್ರತಾ ಕ್ಯಾಮೆರಾಗಳ ತೆರವು – ಆಸ್ಟ್ರೇಲಿಯಾ ನಿರ್ಧಾರ
Advertisement
ಹೆಚ್.ಡಿ ಕುಮಾರಸ್ವಾಮಿ ಬ್ರಾಹ್ಮಣ ಸಿಎಂ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಅದು ಅವರಿಗೆ ಶೋಭೆ ತರುವಂತದ್ದಲ್ಲ, ಕುಮಾರಸ್ವಾಮಿ ಹಗುರವಾಗಿ ಮಾತನಾಡುವುದು ಸರಿಯಲ್ಲ ಎಂದು ಅಸಮಧಾನ ವ್ಯಕ್ತಪಡಿಸಿದರು. ಇನ್ನೂ ಜನಾರ್ದನರೆಡ್ಡಿ ಹೊಸ ಪಕ್ಷದ ಕುರಿತು ಪ್ರತಿಕ್ರಿಯಿಸಲು ನಿರಾಕರಿಸಿದ ಬಿಎಸ್‌ವೈ ನಾನು ಅದರ ಬಗ್ಗೆ ಮಾತನಾಡುವುದಿಲ್ಲ ಎಂದರು. ಇದನ್ನೂ ಓದಿ: ಮಂಡ್ಯ ಉಸ್ತುವಾರಿ ಸಚಿವರ ಬದಲಾವಣೆಗೆ ಬಿಜೆಪಿ ಚಿಂತನೆ
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k