ಚಿಕ್ಕಬಳ್ಳಾಪುರ ಬಿಜೆಪಿ ಅಭ್ಯರ್ಥಿ ಸುಧಾಕರ್ ನಾಮಪತ್ರ ಸಲ್ಲಿಕೆ

Public TV
1 Min Read
K SUDHAKAR 2

ಚಿಕ್ಕಬಳ್ಳಾಪುರ: ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಖಾತೆ ಸಚಿವ ಡಾ.ಕೆ.ಸುಧಾಕರ್ (K.Sudhakar) ಗುರುವಾರ ಸಾಂಕೇತಿಕವಾಗಿ ಚಿಕ್ಕಬಳ್ಳಾಪುರ (Chikkaballapura) ವಿಧಾನಸಭಾ ಕ್ಷೇತ್ರದ ಬಿಜೆಪಿ (BJP) ಅಭ್ಯರ್ಥಿಯಾಗಿ ನಾಮಪತ್ರ (Nomination Paper) ಸಲ್ಲಿಸಿದ್ದಾರೆ.

ಗುರುವಾರ ಕುಟಂಬ ಸಮೇತ ತಿರುಪತಿ (Tirupati) ತಿಮ್ಮಪ್ಪನ ದರ್ಶನ ಪಡೆದು ಆಗಮಿಸಿದ ಸಚಿವ ಸುಧಾಕರ್, ಚಿಕ್ಕಪ್ಯಾಯಲಗುರ್ಕಿ ಗ್ರಾಮದ ಮನೆ ದೇವರು ಚನ್ನಕೇಶವಸ್ವಾಮಿ ದೇವಾಯಕ್ಕೂ ಭೇಟಿ ನೀಡಿದರು. ನಂತರ ಚಿಕ್ಕಬಳ್ಳಾಪುರ ನಗರದ ಉಪವಿಭಾಗಾಧಿಕಾರಿಗಳ ಕಚೇರಿಗೆ ಆಗಮಿಸಿ ಚುನಾವಣಾಧಿಕಾರಿ (Election Officer) ಸಂತೋಷ್ ಕುಮಾರ್‌ಗೆ ನಾಮಪತ್ರ ಸಲ್ಲಿಸಿದರು. ಇದನ್ನೂ ಓದಿ: ನಾನೇನಾದ್ರೂ ರೇಪ್ ಮಾಡಿದ್ನಾ: ಏನ್ ತಪ್ಪು ಮಾಡಿದ್ದೆ? – ಟಿಕೆಟ್ ಕೈತಪ್ಪಿದ್ದಕ್ಕೆ ಸವದಿ ಬೇಸರ 

K SUDHAKAR

ಸಚಿವ ಸುಧಾಕರ್‌ಗೆ ಪತ್ನಿ ಪ್ರೀತಿ, ತಂದೆ ಕೇಶವರೆಡ್ಡಿ, ಸಹೋದರಿ ಅಶ್ವಿನಿ, ಹಾಗೂ ಮಾವ ಆನಂದ್ ಸಾಥ್ ನೀಡಿದ್ದಾರೆ. ನಾಮಪತ್ರ ಸಲ್ಲಿಕೆ ನಂತರ ಮಾತನಾಡಿದ ಸುಧಾಕರ್, ಗುರುವಾರ ಗುರುವನ್ನು ನಂಬುವ ನಾನು ತಿರುಪತಿ ತಿಮ್ಮಪ್ಪನ ಪರಮ ಭಕ್ತ. ಹಾಗಾಗಿ ಇಂದು ದೇವರ ದರ್ಶನ ಪಡೆದು ಆಗಮಿಸಿ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದ್ದೇನೆ. ಪಕ್ಷ ಬಿ ಫಾರಂ ನೀಡಿದ್ದು, ಅದನ್ನು ಪಡೆಯಲು ಸಾಧ್ಯವಾಗಲಿಲ್ಲ. ಹಾಗೆ ಬಂದು ಇಂದು ಸಾಂಕೇತಿಕವಾಗಿ ನಾಮಿನೇಷನ್ ಮಾಡಿದ್ದೇನೆ ಎಂದರು. ಇದನ್ನೂ ಓದಿ: ವರುಣಾ ಕ್ಷೇತ್ರದಲ್ಲಿ ಜನ ಅಬ್ಬೆಪಾರಿಗಳಾಗಿದ್ದಾರೆ : ಪ್ರತಾಪ್ ಸಿಂಹ  

ಏಪ್ರಿಲ್ 17ರಂದು ಮತ್ತೆ ಅಪಾರ ಬೆಂಬಲಿಗರೊಂದಿಗೆ ಮೆರವಣಿಗೆ ನಡೆಸಿ ನಾಮಪತ್ರ ಸಲ್ಲಿಸಲಿದ್ದೇನೆ. ಈ ಬಾರಿ ನನಗೆ ಪ್ರಬಲ ಪ್ರತಿಸ್ಪರ್ಧಿಗಳೇ ಇಲ್ಲ. ಕಳೆದ ಮೂರು ಬಾರಿ ಪಡೆದ ಲೀಡ್‌ಗಿಂತ ಹೆಚ್ಚಿನ ಲೀಡ್ ಪಡೆಯುವ ವಿಶ್ವಾಸವಿದೆ ಎಂದು ಹೇಳಿದರು. ಇದನ್ನೂ ಓದಿ: ಪತ್ರಿಕೋದ್ಯಮ ಓದಿದ ಬರಿಗಾಲ ಸಂತನಿಗೆ ಬಿಜೆಪಿ ಟಿಕೆಟ್

Share This Article