ಬೆಳಗಾವಿ: ಭ್ರಷ್ಟಾಚಾರ ಕಾಂಗ್ರೆಸ್ (Congress) ಪಕ್ಷದ ಅವಿಭಾಜ್ಯ ಅಂಗ, ಕಾಂಗ್ರೆಸ್ ಅಂದ್ರೆ ಭ್ರಷ್ಟಾಚಾರ, ಭ್ರಷ್ಟಾಚಾರ ಅಂದ್ರೆ ಕಾಂಗ್ರೆಸ್ ಹೀಗಿರುವಾಗ ಅವರು ಭ್ರಷ್ಟಾಚಾರದ ಬಗ್ಗೆ ಮಾತನಾಡುವ ಅವಶ್ಯಕತೆಯೇ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಹೇಳಿದ್ದಾರೆ.
Advertisement
ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ವಾಗ್ದಾಳಿ ವಿಚಾರಕ್ಕೆ ಪ್ರತಿಕ್ರಿಯಿಸಿದರು. ಸಿದ್ದರಾಮಯ್ಯ ಅವರು ಟಾರ್ಗೆಟ್ ಮಾಡಿ ಬಿಜೆಪಿ (BJP) ವರ್ಚಸ್ಸನ್ನು ಕೆಡಿಸ ಬೇಕು ಎಂದು ಒಂದುವರೆ ವರ್ಷದಿಂದ ಪ್ರಯತ್ನಿಸುತ್ತಿದ್ದಾರೆ. ಆದರೆ ಅವರಿಂದ ಆಗುತ್ತಿಲ್ಲ, ಯಾಕೆಂದರೆ ಅವರೇ ದೊಡ್ಡ ಭ್ರಷ್ಟಾಚಾರಿಗಳು ಎಂದು ಕುಟುಕಿದ್ದಾರೆ. ಇದನ್ನೂ ಓದಿ: ಬೆನ್ನಿಗೆ ಚೂರಿ ಹಾಕಿದ ಶೆಟ್ಟರ್, ಸವದಿ ಸೋಲಿಸುವ ಹೊಣೆ ನನ್ನದು- ಯಡಿಯೂರಪ್ಪ
Advertisement
Advertisement
ಮಾಜಿ ಹಾಗೂ ಹಾಲಿ ಸಿಎಂ ನಡುವೆ ಲಿಂಗಾಯತ ಲಡಾಯಿ ಜೋರಾಗಿದೆ ಎಂಬ ಮಾಧ್ಯಮಗಳ ಪ್ರಶ್ನೆಗೆ, ಲಡಾಯಿ ಏನಿಲ್ಲ, ಅವರೇ ಶುರು ಮಾಡಿಕೊಂಡಿರುವುದು, ಈಗ ಬೇರೆ ಬೇರೆ ಸ್ಪಷ್ಟೀಕರಣ ಕೊಡುತ್ತಿದ್ದಾರೆ. ಲಿಂಗಾಯತರು ಇದಕ್ಕೆಲ್ಲ ತಲೆಕೆಡಿಸಿಕೊಳ್ಳುವುದಿಲ್ಲ. ಅವರು ಬಹಳ ಪ್ರಬುದ್ಧರಾಗಿದ್ದಾರೆ. ಯಾರಿಗೆ ಬೆಂಬಲ ಮಾಡಬೇಕೆಂದು ಅವರಿಗೆ ಗೊತ್ತು ಎಂದಿದ್ದಾರೆ.
Advertisement
ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ 40% ಕಮಿಷನ್ ತನಿಖೆ ಎಂಬ ಲಕ್ಷ್ಮಣ್ ಸವದಿ (Laxman Savadi) ಹೇಳಿಕೆಗೆ ಪ್ರತಿಕ್ರಿಯಿಸಿ, ಅವರು ಬಿಜೆಪಿಯಲ್ಲಿ ಇದ್ದಾಗಲೇ ಹೇಳಬಹುದಿತ್ತು. ಏಕೆ ಸುಮ್ಮನಿದ್ದರು? ಈ ರೀತಿ ಗಾಳಿಯಲ್ಲಿ ಗುಂಡು ಹೊಡೆಯುವುದರಿಂದ ಏನು ಪ್ರಯೋಜನ ಆಗುವುದಿಲ್ಲ ಎಂದು ತಿರುಗೇಟು ಕೊಟ್ಟಿದ್ದಾರೆ. ಇದನ್ನೂ ಓದಿ: ಯಡಿಯೂರಪ್ಪ ಎಷ್ಟೇ ಬೈದರೂ ಆಶೀರ್ವಚನ ಎಂದು ಭಾವಿಸುತ್ತೇನೆ: ಶೆಟ್ಟರ್