– ಜಾರಕಿಹೊಳಿ ಆಪ್ತ ಸೇರಿ ಇಬ್ಬರ ವಿರುದ್ಧ ಎಫ್‍ಐಆರ್
ಬೆಳಗಾವಿ: ಚುನಾವಣೆ (Election) ಸಮೀಪಿಸುತ್ತಿದಂತೆ ವಿವಿಧ ರಾಜಕೀಯ ಪಕ್ಷಗಳಿಂದ ಯಾವುದಾದರೂ ನೆಪದಲ್ಲಿ ಅಮಿಷಗಳ ಮಹಾಪೂರವೇ ಹರಿದು ಬರುತ್ತಿದೆ. ಅದರಲ್ಲೂ ಈ ಬಾರಿಯ ಚುನಾವಣೆಯಲ್ಲಿ ಬಾಡೂಟಗಳು ಭರ್ಜರಿಯಾಗಿ ಆಯೋಜಿಸಲಾಗುತ್ತಿದೆ. ಇದನ್ನು ಸೂಕ್ಷ್ಮವಾಗಿ ಗಮನಿಸಿದ ಚುನಾವಣಾ ಆಯೋಗ (Election Commission) ಬ್ರೇಕ್ ಹಾಕಲು ಮುಂದಾಗಿದೆ. ಮೊದಲ ಆರಂಭವೆಂಬಂತೆ ಕುಂದಾನಗರಿನಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಗೆ ಮುನ್ನವೇ ಒಂದು ಪ್ರಕರಣ ದಾಖಲಿಸಲಾಗಿದೆ.
Advertisement
ರಾಜ್ಯದಲ್ಲಿ ಚುನಾವಣಾ ಕಾವು ರಂಗೇರಿದೆ. ಮೂರು ಪಕ್ಷದ ಟಿಕೆಟ್ ಆಕಾಂಕ್ಷಿಗಳು ಮತದಾರರನ್ನು ಸಳೆಯಲು ಹಬ್ಬ-ಆಚರಣೆ-ಮದುವೆ ನೆಪಗಳಲ್ಲಿ ವಿವಿಧ ವಸ್ತುಗಳ ಅಮಿಷಗಳೂಂದಿಗೆ ಭರ್ಜರಿ ಬಾಡೂಟಗಳ ಆಯೋಜಿಸಲಾಗುತ್ತಿದೆ. ದಕ್ಷಿಣ ಕರ್ನಾಟಕ ಭಾಗದಲ್ಲೇ ಹೇಚ್ಚಾಗಿ ಕಂಡು ಬರುತ್ತಿದ್ದ ಬಾಡೂಟ ಅಮಿಷ ಇದೀಗ ಗಡಿ ಜಿಲ್ಲೆ ಬೆಳಗಾವಿಯಲ್ಲಿ ಹೆಚ್ಚಾಗಿ ಆಯೋಜಿಸಲಾಗುತ್ತಿದೆ.
Advertisement
Advertisement
ಮೊನ್ನೆ ಬೆಂಗಳೂರಿನಲ್ಲಿ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಹಾಗೂ ಅಧಿಕಾರಿಗಳೂಂದಿಗೆ ಸಭೆ ನಡೆಸಿದ ಕೇಂದ್ರ ಚುನಾವಣಾ ಆಯೋಗ ಆಮಿಷ ನೀಡಿದ್ರೆ ಕಾನೂನು ಕ್ರಮದ ಎಚ್ಚರಿಕೆ ನೀಡಿದ್ರು. ಹಬ್ಬ-ಹರಿದಿನಗಳ ನೆಪಗಳಲ್ಲಿ ಮತದಾರರರಿಗೆ ಅಮಿಷಗಳ ನೀಡಿದರೆ ಕಾನೂನು ಕ್ರಮ ಕೈಗೊಳ್ಳಲಾಗುದೆಂದು ಎಚ್ಚರಿಕೆ ನೀಡಿದ್ದರು. ಇದರ ಬೆನ್ನಲ್ಲೆ ಚುನಾವಣಾ ನೀತಿ ಸಂಹಿತೆ ಜಾರಿ (Code Of Conduct) ಮುನ್ನವೇ ಬೆಳಗಾವಿಯಲ್ಲಿ ಮೊದಲ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಬಿಜೆಪಿಗಿಂತ ಮೊದಲೇ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ – ಡಿಕೆಶಿ
Advertisement
ಮಾ.15 ರಂದು ರಮೇಶ್ ಜಾರಕಿಹೊಳಿ (Ramesh Jarakiholi) ಅಭಿಮಾನಿ ಬಳಗದಿಂದ ಬೆಳಗಾವಿ ಗ್ರಾಮೀಣ ಕ್ಷೇತ್ರದ ಸಂತಿ ಬಸ್ತವಾಡ ಗ್ರಾಮದಲ್ಲಿ ಎಸ್‍ಸಿ, ಎಸ್‍ಟಿ ಸಮಾವೇಶ ಆಯೋಜನೆ ಮಾಡಲಾಗಿತ್ತು. ಟಿಕೆಟ್ ಆಕಾಂಕ್ಷಿ ನಾಗೇಶ್ ಮನ್ನೋಳಕರ್ ನೇತೃತ್ವದಲ್ಲಿ ಸುಮಾರು 3 ಸಾವಿರ ಜನರಿಗೆ ಬಾಡೂಟ ವ್ಯವಸ್ಥೆ ಮಾಡಲಾಗಿತ್ತು. ಬಾಡೂಟ ಆಯೋಜಿಸಿದವರ ವಿರುದ್ಧ ಇದೀಗ ಚಾಟಿ ಬೀಸಿರುವ ಜಿಲ್ಲಾಡಳಿತ ರಮೇಶ್ ಜಾರಕಿಹೊಳಿ ಆಪ್ತ ಸೇರಿ ಇಬ್ಬರ ವಿರುದ್ಧ ಎಫ್‍ಐಆರ್ ದಾಖಲು ಮಾಡಿದೆ. ಆಯೋಜಕ ನಾಗೇಂದ್ರ ನಾಯಕ್, ನಾಗೇಶ್ ಮನ್ನೋಳ್ಕರ್ ವಿರುದ್ಧ ಎಫ್‍ಐಆರ್ ದಾಖಲಿಸಲಾಗಿದೆ.
ಬೆಳಗಾವಿ ಡಿಸಿ ನಿತೇಶ್ ಪಾಟೀಲ್ ಚುನಾವಣಾ ಘೋಷಣೆಗೂ ಮುನ್ನ ಮತದಾರರಿಗೆ ಆಮಿಷ ಒಡ್ಡದಂತೆ ಅದೇಶ ಹೊರಡಿಸಿದ್ದರು. ಆದರೂ ಸಮಾವೇಶದಲ್ಲಿ ಬಾಡೂಟದ ಅಮಿಷ ಆಯೋಜಿಸಿದ ಹಿನ್ನೆಲೆ ನೀತಿ ಸಂಹಿತೆ ಉಲ್ಲಂಘನೆಯಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಈ ಮೂಲಕ ಇದು ರಾಜ್ಯದಲ್ಲಿ ಮೊದಲ ಪ್ರಕರಣವಾಗಿದೆ.