ಬೆಂಗಳೂರು: ಬಿಜೆಪಿಗೆ ಗುಡ್‌ಬೈ ಹೇಳಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್ (Jagadish Shettar ) ಪಕ್ಷೇತರವಾಗಿ ಸ್ಪರ್ಧೆ ಮಾಡುತ್ತಾರಾ ಅಥವಾ ಕಾಂಗ್ರೆಸ್‌ನಿಂದ (Congress) ಸ್ಪರ್ಧೆ ಮಾಡುತ್ತಾರಾ ಎಂಬ ಪ್ರಶ್ನೆ ಎದ್ದಿದೆ.
ಹೌದು, ಬಿಜೆಪಿ ವಿರುದ್ಧ ಬಂಡಾಯ ಸಾರಿದ ಶೆಟ್ಟರ್ ಅವರಿಗೆ ಕಾಂಗ್ರೆಸ್ ಗಾಳ ಹಾಕಿದೆ. ಸಂಬಂಧದಲ್ಲಿ ಬೀಗರಾಗಬೇಕಾದ ಶಾಮನೂರು ಶಿವಶಂಕರಪ್ಪ (Shamanur Shivashankarappa) ಮೂಲಕ ಕಾಂಗ್ರೆಸ್ ಪಕ್ಷಕ್ಕೆ ಬರಲು ಮಾತುಕತೆ ನಡೆದಿದೆ ಎನ್ನಲಾಗುತ್ತಿದೆ.
Advertisement
Advertisement
ಈಗಾಗಲೇ ಶೆಟ್ಟರ್ ಜೊತೆಗೆ ಕಾಂಗ್ರೆಸ್ ನಾಯಕರು ಒಂದು ಸುತ್ತಿನ ಮಾತುಕತೆ ನಡೆಸಿದ್ದಾರೆ. ಯಾವುದೇ ಷರತ್ತುಗಳಿಲ್ಲದೆ ಕಾಂಗ್ರೆಸ್ ಪಕ್ಷ ಸೇರಲು ಶೆಟ್ಟರ್ ಮುಂದಾಗಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಇದನ್ನೂ ಓದಿ: ಜಗದೀಶ್ ಶೆಟ್ಟರ್‌ಗೆ ಬಿಜೆಪಿ ನೀಡಿತ್ತು 2 ಬಿಗ್ ಆಫರ್
Advertisement
ಕಾಂಗ್ರೆಸ್ ಮೂರು ಪಟ್ಟಿಯನ್ನು ರಿಲೀಸ್ ಮಾಡಿದರೂ ಶೆಟ್ಟರ್ ಪ್ರತಿನಿಧಿಸುವ ಕ್ಷೇತ್ರಕ್ಕೆ ಇಲ್ಲಿಯವರೆಗೂ ಅಭ್ಯರ್ಥಿಯನ್ನು ಘೋಷಣೆ ಮಾಡಿಲ್ಲ. ಹೀಗಾಗಿ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಿಂದ ಸ್ಪರ್ಧಿಸಲು ಕಾಂಗ್ರೆಸ್ ಆಫರ್ ನೀಡಿದೆ. ಇದರ ಜೊತೆಗೂ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಧಾರವಾಡದದಿಂದ ಟಿಕೆಟ್ ನೀಡುವ ಬಗ್ಗೆ ಮಾತುಕತೆ ನಡೆದಿದೆ ಎನ್ನಲಾಗುತ್ತಿದೆ.
Advertisement
ಉತ್ತರ ಕನ್ನಡದ ಹಳಿಯಾಳದಲ್ಲಿ ಮಾತನಾಡಿದ್ದ ಸಿದ್ದರಾಮಯ್ಯ, ಶೆಟ್ಟರ್ ಪಕ್ಷಕ್ಕೆ ಬಂದರೆ ನಾವು ಸ್ವಾಗತ ಮಾಡುತ್ತೇವೆ. ಆದರೆ ಶೆಟ್ಟರ್ ಕಾಂಗ್ರೆಸ್ ಸೇರುವ ಬಗ್ಗೆ ಇನ್ನೂ ಮಾತನಾಡಿಲ್ಲ. ಜಗದೀಶ್ ಶೆಟ್ಟರ್‌ಗೆ ಟಿಕೆಟ್ ಕೊಡದೇ ಇರುವುದು ಸರಿಯಲ್ಲ. ಪಕ್ಷ ಕಟ್ಟಿದವರಿಗೆ ಬಿಜೆಪಿ ಅನ್ಯಾಯ ಮಾಡಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಸಿದ್ದುಗೆ `ಅಹಿಂದ’ ಪದದ ಅರ್ಥವೇ ಗೊತ್ತಿಲ್ಲ – ಕಣ್ಣೀರಿಟ್ಟ ಗೋಪಿಕೃಷ್ಣ ದಂಪತಿ
ಶಾಮನೂರು ಸಂಬಂಧಿ ಹೇಗೆ?
ಶೆಟ್ಟರ್ ಅವರ ಪುತ್ರ ಪ್ರಶಾಂತ್ ಶೆಟ್ಟರ್ ಅವರು ಶಾಮನೂರು ಅವರ ಎರಡನೇ ಪುತ್ರ ಗಣೇಶ ಅವರ ಪುತ್ರಿಯನ್ನು ವಿವಾಹವಾಗಿದ್ದಾರೆ. ಹೀಗಾಗಿ ಸಂಬಂಧದಲ್ಲಿ ಶೆಟ್ಟರ್ ಮತ್ತು ಶಾಮನೂರು ಬೀಗರಾಗಿದ್ದಾರೆ. 92 ವರ್ಷದ ಶಾಮನೂರು ಶಿವಶಂಕರಪ್ಪ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ.