ಬೆಂಗಳೂರು: ಕಾಂಗ್ರೆಸ್‌ನವರಿಗೆ (Congress) ಬಹುಮತ ಬರಲ್ಲ. ಹೀಗಾಗಿ ಬೇರೆ ಪಕ್ಷದವರ ಜೊತೆ ಮಾತನಾಡುವ ಪ್ರಯತ್ನ ಪಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ನವರಿಗೆ ಅವರ ಶಾಸಕರ ಮೇಲೆಯೇ ನಂಬಿಕೆ ಇಲ್ಲ. ಅವರಿಗೆ ಬಹುಮತವೂ ಬರುವುದಿಲ್ಲ ಎಂದು ಟಾಂಗ್ ಕೊಟ್ಟರು. ಇದನ್ನೂ ಓದಿ: ಯಾವುದೇ ಪಕ್ಷದೊಂದಿಗೆ ಮೈತ್ರಿಗೆ ಸಿದ್ಧ.. ಆದ್ರೆ ಈ ಷರತ್ತು ಅನ್ವಯ – ಹೆಚ್‌ಡಿಕೆ
Advertisement
Advertisement
ನಾವು ಗೆಲ್ಲುವ ವಿಶ್ವಾಸ ಇದೆ. ನಾವು ಬಹುಮತದ ಗಡಿ ದಾಟುತ್ತೇವೆ. ನಾನೇ ವರಿಷ್ಠರಿಗೆ ಕರೆ ಮಾಡಿ ಇಲ್ಲಿನ ವಸ್ತುಸ್ಥಿತಿ ತಿಳಿಸಿದ್ದೇನೆ. ಹೈಕಮಾಂಡ್ ನಾಯಕರು ವಿಶ್ವಾಸದಲ್ಲಿದ್ದಾರೆ. ಬಿಜೆಪಿ ಸರ್ಕಾರ ರಚಿಸುವ ವಿಶ್ವಾಸದಲ್ಲಿದಾರೆ ವರಿಷ್ಠರು ಎಂದು ತಿಳಿಸಿದರು.
Advertisement
Advertisement
ನಾನು ಮೊದಲಿಂದಲೂ ಒಂದೇ ಮಾತು ಹೇಳ್ತಾ ಬಂದಿದ್ದೇನೆ. ನಮಗೆ ಸ್ಪಷ್ಟ ಬಹುಮತ ಬರುತ್ತೆ. ಎಲ್ಲ ಕ್ಷೇತ್ರ, ಬೂತ್‌ಗಳಿಂದ ಗ್ರೌಂಡ್ ಮಾಹಿತಿ ತರಿಸಿದ್ದೇವೆ. ನಮಗೆ ವಿಶ್ವಾಸ ಇದೆ. ಮ್ಯಾಜಿಕ್ ನಂಬರ್ ಮುಟ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದನ್ನೂ ಓದಿ: ರಾಜ್ಯದ 6 ಜಿಲ್ಲೆಗಳಲ್ಲಿ ಹೆಣ್ಮಕ್ಕಳೇ ಸ್ಟ್ರಾಂಗ್ ಗುರೂ!
ಮೈತ್ರಿ ಸಂದರ್ಭ ಬರಲ್ಲ. ಈಗ ನಮ್ಮ ಮುಂದೆ ಆ ಪ್ರಶ್ನೆ ಇಲ್ಲ. ನಾವು ಬಹುಮತ ದಾಟ್ತೀವಿ. ಕಾಂಗ್ರೆಸ್‌ನವರು ಏನೇ ಸಭೆ ಮಾಡಲಿ. ಅವರಿಗೆ ಸಭೆ ಮಾಡುವ ಹಕ್ಕಿದೆ, ಮಾಡಲಿ. ಎಲ್ಲ ಪಕ್ಷಗಳೂ ಸಭೆ ಮಾಡ್ತಾರೆ ಎಂದರು.