ವೀರೇಂದ್ರ ಪಾಟೀಲ್, ನಿಜಲಿಂಗಪ್ಪಗೆ ಕಾಂಗ್ರೆಸ್ ಅಪಮಾನ ಮಾಡಿಲ್ಲ: ಡಿಕೆಶಿ

Public TV
1 Min Read
DK Shivakumar 2

ಬೆಂಗಳೂರು: ವೀರೇಂದ್ರ ಪಾಟೀಲ್ (Virendra Patel) ಹಾಗೂ ನಿಜಲಿಂಗಪ್ಪ (Nijalingappa) ಅವರಿಗೆ ಕಾಂಗ್ರೆಸ್ (Congress) ಅಪಮಾನ ಮಾಡಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ಸ್ಪಷ್ಟಪಡಿಸಿದ್ದಾರೆ.

ವೀರೇಂದ್ರ ಪಾಟೀಲ್ ಹಾಗೂ ನಿಜಲಿಂಗಪ್ಪ ಅವರಿಗೆ ಕಾಂಗ್ರೆಸ್ ಅಪಮಾನ ಮಾಡಿದೆ ಎಂಬ ಪ್ರಧಾನಿ ಮೋದಿ ಅವರ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಅವರು,‌ನಾನು ವೀರೇಂದ್ರ ಪಾಟೀಲ್ ಅವರ ಕಾಲದಲ್ಲಿ ಶಾಸಕನಾಗಿದ್ದೆ.ವೀರೇಂದ್ರ ಪಾಟೀಲ್ ಅವರ ಆರೋಗ್ಯ ಏನಾಗಿತ್ತು ಎಂದು ನನಗೆ ಗೊತ್ತಿದೆ. ನಾನು ರಾಜೀವ್ ಗಾಂಧಿ (Rajniv Gandhi) ಅವರ ಜೊತೆ ಆಸ್ಪತ್ರೆಗೆ ಹೋಗಿದ್ದೆ. ಅವರ ಆರೋಗ್ಯ ಪರಿಸ್ಥಿತಿ ವಿಚಾರಿಸಿದರು. ಅವರು ಚೇತರಿಸಿಕೊಳ್ಳುವ ಪರಿಸ್ಥಿತಿ ಇರಲಿಲ್ಲ. ಹೀಗಾಗಿ ಚರ್ಚೆ ಮಾಡಿ ವಿರೇಂದ್ರ ಪಾಟೀಲ್ ಅವರನ್ನು ಬದಲಿಸುವ ತೀರ್ಮಾನ ಮಾಡಲಾಯಿತು ಎಂದರು.

narendra modi road show 2

ಇಂದಿರಾ ಗಾಂಧಿ (Indira Gandhi) ಅವರ ವಿರುದ್ಧ ಸ್ಪರ್ಧೆ ಮಾಡಿದವರನ್ನು ಪಕ್ಷಕ್ಕೆ ವಾಪಸ್ ಕರೆತಂದು ಲೋಕಸಭೆಗೆ ನಿಲ್ಲಿಸಿ, ಕೇಂದ್ರದಲ್ಲಿ ಸಚಿವರನ್ನಾಗಿ ಮಾಡಿರುವ ಇತಿಹಾಸ, ಹೃದಯ ಶ್ರೀಮಂತಿಕೆ ಗಾಂಧಿ ಕುಟುಂಬ ಹಾಗೂ ಕಾಂಗ್ರೆಸ್ ಪಕ್ಷಕ್ಕಿದೆ ಎಂದರು. ಇದನ್ನೂ ಓದಿ: ಯಡಿಯೂರಪ್ಪರಿಗೆ ಕಣ್ಣೀರು ಹಾಕಿಸಿದ ಬಗ್ಗೆ ಮೋದಿ ಉತ್ತರ ಕೊಡಲಿ- ಡಿಕೆಶಿ

ನಿಜಲಿಂಗಪ್ಪ ಅವರನ್ನು ಭೇಟಿ ಮಾಡಲು ಸೋನಿಯಾ ಗಾಂಧಿ (Sonia Gandhi) ಹಾಗೂ ಎಸ್.ಎಂ ಕೃಷ್ಣ ಅವರು ಹೋಗಿದ್ದರು. ನಿಜಲಿಂಗಪ್ಪ ಅವರಿಗೆ ಗೌರವ ನೀಡಲು ಅವರ ಅಳಿಯನನ್ನು ಎಂಎಲ್‌ಸಿ ಮಾಡಿದ್ದರು. ಕೇಂದ್ರದಲ್ಲಿ ಸಚಿವರನ್ನಾಗಿ ಮಾಡಿದ್ದು ಕಾಂಗ್ರೆಸ್ ಇತಿಹಾಸ. ನಾವು ಬಿಜೆಪಿಯವರಂತೆ ನಾಟಕೀಯ ಅನುಕಂಪ ವ್ಯಕ್ತ ಪಡಿಸುವುದಿಲ್ಲ ಎಂದರು.

ಲಿಂಗಾಯತರ ಮತ ಕೈತಪ್ಪುತ್ತಿದೆ ಎಂದು ಬಿಜೆಪಿಯವರು ಈ ರೀತಿ ಮಾಡುತ್ತಿದ್ದಾರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು,ಈ ವಿಚಾರವಾಗಿ ನಾನು ಮಾತನಾಡುವುದಿಲ್ಲ.ನಾನು ಜಾತಿ ಆಧಾರದ ಮೇಲೆ ಹೇಳಿಕೆ ನೀಡುವುದಿಲ್ಲ. ಯಾವ ಮತದಾರನೂ ದಡ್ಡನಲ್ಲ. ಪ್ರತಿಯೊಬ್ಬರೂ ತಮ್ಮದೇ ಆದ ತೀರ್ಮಾನ ಕೈಗೊಳ್ಳಲಿದ್ದಾರೆ. ಬಿಜೆಪಿ ಎಷ್ಟು ನಾಯಕರನ್ನು ಬಳಸಿ ಬಿಸಾಡಿದೆ ಎಂಬುದು ಜನರಿಗೆ ಗೊತ್ತಿದೆ ಎಂದು ವಾಗ್ದಾಳಿ ನಡೆಸಿದರು.

Share This Article
Leave a Comment

Leave a Reply

Your email address will not be published. Required fields are marked *