ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕುಮಟಾ (Kumta) ಕ್ಷೇತ್ರದ ಕಾಂಗ್ರೆಸ್ (Congress) ಅಭ್ಯರ್ಥಿ ನಿವೇದಿತ್ ಆಳ್ವ ನಾಮಪತ್ರ ಸಲ್ಲಿಕೆ ವೇಳೆ ಭಿನ್ನಮತ ಸ್ಫೋಟಗೊಂಡಿದೆ.
ಕಾಂಗ್ರೆಸ್ ಅಭ್ಯರ್ಥಿ ನಿವೇದಿತ್ ಆಳ್ವ ನಾಮಪತ್ರ ಸಲ್ಲಿಕೆ ವೇಳೆ ಬಂದಿದ್ದ ಕಾಂಗ್ರೆಸ್ ಕಾರ್ಯಕರ್ತರು ಆಳ್ವ ಅವರನ್ನು ಬೆಂಬಲಿಸದೆ, ನೇರವಾಗಿ ಕಾಂಗ್ರೆಸ್ ಮಾಜಿ ಶಾಸಕಿ ಶಾರದಾ ಶೆಟ್ಟಿ (Sharada Shetty) ಅವರ ಮನೆಗೆ ತೆರಳಿದ್ದಾರೆ. ಹಾಗೂ ಕಾಂಗ್ರೆಸ್ ಪಕ್ಷದಿಂದಲೇ ಸ್ಪರ್ಧಿಸಬೇಕು ಎಂದು ಅವರನ್ನು ಒತ್ತಾಯಿಸಿದ್ದಾರೆ. ಈ ವೇಳೆ ಕಾಂಗ್ರೆಸ್ ಟಿಕೆಟ್ ವಂಚಿತರಾಗಿ ಪಕ್ಷೇತರವಾಗಿ ಸ್ಪರ್ಧಿಸಿರುವ ಮಾಜಿ ಶಾಸಕಿ ಶಾರದಾ ಶೆಟ್ಟಿಯವರು ನೂರಾರು ಕಾರ್ಯಕರ್ತರ ಎದುರು ಕಣ್ಣೀರು ಹಾಕಿದ್ದಾರೆ. ಇದನ್ನು ಓದಿ: ಪುತ್ರನ ನಾಮಪತ್ರ ಸಲ್ಲಿಸಲು ತನ್ನ ಹಳೆಯ ಅಂಬಾಸಿಡಾರ್ ಕಾರಿನಲ್ಲಿ ಪ್ರಯಾಣಿಸಿದ ಯಡಿಯೂರಪ್ಪ
ಕಾಂಗ್ರೆಸ್ ಅಭ್ಯರ್ಥಿ ನಿವೇದಿತ್ ಆಳ್ವ ವಿರುದ್ಧ ಕಾರ್ಯಕರ್ತರೇ ಅಸಮಾಧಾನಗೊಂಡಿದ್ದಾರೆ. ಅಲ್ಲದೆ ಟಿಕೆಟ್ ನಿರೀಕ್ಷೆಯಲ್ಲಿದ್ದ ಮಾಜಿ ಶಾಸಕಿ ಪಕ್ಷೇತರವಾಗಿ ಸ್ಪರ್ಧೆ ಮಾಡಿದ್ದಾರೆ. ಕಾಂಗ್ರೆಸ್‍ನ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಶಿವಾನಂದ ಹೆಗಡೆ ಕಡತೋಕ ಅವರು ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆಗೆ ತಯಾರಿ ನಡೆಸಿದ್ದಾರೆ. ಇದನ್ನು ಓದಿ: ಟಿಕೆಟ್ ಸಿಗದಿದ್ದಕೆ 5 ವರ್ಷಗಳ ಬಳಿಕ ಮತ್ತೆ ಹುದ್ದೆಯನ್ನೇರಿದ ಪೊಲೀಸ್ ಅಧಿಕಾರಿ: ಸಾರ್ವಜನಿಕ ವಲಯದಲ್ಲಿ ಚರ್ಚೆ