ಕೋಲಾರ: ಕ್ಷುಲ್ಲಕ ಕಾರಣಕ್ಕೆ ಕಾಂಗ್ರೆಸ್ (Congress) ಹಾಗೂ ಜೆಡಿಎಸ್ (JDS) ಮುಖಂಡರ ನಡುವೆ ಗಲಾಟೆ ನಡೆದಿದ್ದು, ಜೆಡಿಎಸ್ ಮುಖಂಡ ಕಾಂಗ್ರೆಸ್ ಮುಖಂಡನಿಗೆ ಚಾಕು ಹಾಕಿದ ಘಟನೆ ಕೋಲಾರದ (Kolar) ಶ್ರೀನಿವಾಸಪುರದಲ್ಲಿ (Shrinivasapura) ನಡೆದಿದೆ.
ಪಟ್ಟಣದ ಚಿಂತಾಮಣಿ ಸರ್ಕಲ್‌ನಲ್ಲಿ ಈ ಘಟನೆ ನಡೆದಿದ್ದು, ಕಾಂಗ್ರೆಸ್ ಮುಖಂಡ, ಶಾಸಕ ರಮೇಶ್ ಕುಮಾರ್ ಬೆಂಬಲಿಗ ತಜಮುಲ್ ಹಲ್ಲೆಗೊಳಗಾದ ವ್ಯಕ್ತಿ. ಹಳೇ ದ್ವೇಷ ಹಿನ್ನೆಲೆ ಈ ಕೃತ್ಯ ನಡೆಸಿದ್ದು, ಜೆಡಿಎಸ್ ಮುಖಂಡ, ಮಾಜಿ ಶಾಸಕ ವೆಂಕಟಾಶಿವಾರೆಡ್ಡಿ ಬೆಂಬಲಿಗ ಸಾಧಿಕ್ ತಮ್ಮ ಆರಿಫ್ ಸೇರಿದಂತೆ ಮತ್ತಿಬ್ಬರು ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ಮತ್ತೆ ಕರ್ನಾಟಕದಲ್ಲಿ ರೆಸಾರ್ಟ್ ರಾಜಕೀಯ? – ಶಾಸಕರು, ಪಕ್ಷೇತರರನ್ನು ಹಿಡಿದಿಟ್ಟುಕೊಳ್ಳಲು ಕಾಂಗ್ರೆಸ್ ತಂತ್ರ
Advertisement
ಹಿಂದಿನಿಂದ ಬಂದು ಬೆನ್ನಿಗೆ ಚೂರಿ ಹಾಕಿದ್ದು, ಹಲ್ಲೆಗೊಳಗಾದ ಮುಖಂಡನನ್ನು ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದ್ದಾರೆ. ಅಲ್ಲದೇ ಹೆಚ್ಚಿನ ಚಿಕಿತ್ಸೆಗಾಗಿ ಕೋಲಾರದ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಆಸ್ಪತ್ರೆಯ ಬಳಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ನೆರೆದಿದ್ದ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮವಾಗಿ ಆಸ್ಪತ್ರೆಯ ಸುತ್ತಲೂ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಇದನ್ನೂ ಓದಿ: ಕಾಂಗ್ರೆಸ್‌ಗೆ ಜೆಡಿಎಸ್ ಬೆಂಬಲ ಕೊಟ್ರೆ ಒಳ್ಳೆಯದಾಗುತ್ತೆ: ಸತೀಶ್ ಜಾರಕಿಹೊಳಿ
Advertisement
Advertisement
ಮೇ 10ರಂದು ನಡೆದ ಸಾರ್ವತ್ರಿಕ ವಿಧಾನಸಭೆ ಚುನಾವಣೆಯಲ್ಲಿ ಪಟ್ಟಣದ ಚಿಂತಾಮಣಿ ಸರ್ಕಲ್‌ನ ಬೂತ್ ನಂಬರ್ 148ರಲ್ಲಿ ವಾಹನ ನಿಲ್ಲಿಸುವ ವಿಚಾರವಾಗಿ ಇಬ್ಬರ ಮಧ್ಯೆ ಮಾತಿನ ಚಕಮಕಿ ನಡೆದು ಗಲಾಟೆಯಾಗಿತ್ತು. ಈ ಹಿನ್ನೆಲೆ ಚಾಕು ಹಾಕಿರಬಹುದು ಎಂಬ ಅನುಮಾನ ವ್ಯಕ್ತವಾಗಿದೆ. ಇದನ್ನೂ ಓದಿ: ಕಪ್ ಈಗ್ಲೂ ಅವರದ್ದೇ, ಮುಂದಕ್ಕೆ ನಮ್ಮದು: ಡಿ.ಕೆ ಸುರೇಶ್ ವ್ಯಂಗ್ಯ
Advertisement
ಮಾಜಿ ಸ್ಪೀಕರ್ ರಮೇಶ್ ಕುಮಾರ್ ಆಸ್ಪತ್ರೆಗೆ ಭೇಟಿ ನೀಡಿ ಚಿಕಿತ್ಸೆ ಪಡೆಯುತ್ತಿದ್ದ ಕಾಂಗ್ರೆಸ್ ಮುಖಂಡನ ಆರೋಗ್ಯ ವಿಚಾರಿಸಿದ್ದಾರೆ. ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಭಾಸ್ಕರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್‌ನವರಿಗೆ ಬಹುಮತ ಬರಲ್ಲ, ಅದ್ಕೆ ಬೇರೆ ಪಕ್ಷದ ಜೊತೆ ಮಾತಾಡುವ ಪ್ರಯತ್ನ ಮಾಡ್ತಿದ್ದಾರೆ – ಸಿಎಂ