ಮೈಸೂರು: ಸಿದ್ದರಾಮನಹುಂಡಿಯಲ್ಲಿ ಸೋಮಣ್ಣ ಪ್ರಚಾರದ ನಡೆಸುತ್ತಿದ್ದ ಸಂದರ್ಭದಲ್ಲಿ ಬಿಜೆಪಿ (BJP) ಪ್ರಚಾರ ರಥದ ಮೇಲೆ ಕಾಂಗ್ರೆಸ್ (Congress) ಕಾರ್ಯಕರ್ತರಿಂದ ಕಲ್ಲು ತೂರಾಟ ನಡೆಸಿರುವ ಆರೋಪ ಕೇಳಿ ಬಂದಿದೆ.
ಸಿದ್ದರಾಮಯ್ಯ (Siddaramaiah) ಅವರ ಅಣ್ಣನ ಮನೆ ಮುಂದೆ ಪ್ರಚಾರ ಮಾಡುವಾಗ ಈ ಘಟನೆ ನಡೆದಿದೆ. ಘಟನೆ ವೇಳೆ ಬಿಜೆಪಿ ಕಾರ್ಯಕರ್ತ ನಾಗೇಶ್ ಮೇಲೆ ಹಲ್ಲೆ ನಡೆದಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾನೆ.
Advertisement
Advertisement
ಘಟನೆಯೇನು?: ಪ್ರಚಾರಕ್ಕಾಗಿ ಬಿಜೆಪಿ ನಾಯಕರು ಸಿದ್ದರಾಮಯ್ಯನಹುಂಡಿಗೆ ಎಂಟ್ರಿ ಆಗುತ್ತಿದ್ದಂತೆ ಸ್ಥಳೀಯರಿಂದ ಕಿರಿಕ್ ನಡೆದಿರುವ ಆರೋಪ ಕೇಳಿ ಬಂದಿದೆ. ಗ್ರಾಮಕ್ಕೆ ಬಿಜೆಪಿ ನಾಯಕರು ಎಂಟ್ರಿ ಆಗುತ್ತಿದ್ದ ಕಾರುಗಳನ್ನು ತಡೆದು ಗಲಾಟೆ ನಡೆಸಿದ್ದಾರೆ. ಈ ವೇಳೆ ಕಾರಿನಿಂದ ಇಳಿದು ಯುವಕ ನಾಗೇಶ್ ಪ್ರಶ್ನೆ ಮಾಡಿದ್ದಾನೆ. ನಾಗೇಶ್ ಪ್ರಶ್ನೆ ಮಾಡುತ್ತಿದ್ದಂತೆ 30ಕ್ಕೂ ಹೆಚ್ಚು ಜನರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಇದನ್ನೂ ಓದಿ: ಪ್ರವೀಣ್ ನೆಟ್ಟಾರು ಕನಸು ನನಸು – ನೂತನ ಮನೆಯ ಗೃಹ ಪ್ರವೇಶ, ಸ್ಮಾರಕ ಲೋಕಾರ್ಪಣೆ
Advertisement
Advertisement
ಪ್ರಚಾರ ರಥದಲ್ಲಿ ಬಿಜೆಪಿ ಅಭ್ಯರ್ಥಿ ವಿ. ಸೋಮಣ್ಣ (V Somanna), ಸಂಸದ ಪ್ರತಾಪ್ ಸಿಂಹ (Pratap Simha) ಇದ್ದರು. ಸ್ವಲ್ಪದರ ಅಂತದರಲ್ಲೇ ಅಭ್ಯರ್ಥಿ ವಿ. ಸೋಮಣ್ಣ, ಸಂಸದ ಪ್ರತಾಪ್ ಸಿಂಹ ಘಟನೆಯಿಂದ ಪಾರಾಗಿದ್ದಾರೆ. ಘಟನೆ ಕುರಿತು ವರುಣಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಯಾವ್ಯಾವ ಮತಗಟ್ಟೆಗಳನ್ನು ಸೂಕ್ಷ್ಮ, ಅತಿಸೂಕ್ಷ್ಮ ಘೋಷಿಸಬೇಕು – ಮಾಹಿತಿ ಕೋರಿ ಏಜೆಂಟ್‌ಗಳಿಗೆ ಕರಂದ್ಲಾಜೆ ಪತ್ರ