ಬೆಂಗಳೂರು: ಕಳೆದ ಹನ್ನೆರಡು ದಿನಗಳಲ್ಲಿ ಚುನಾವಣೆ ಅಧಿಕಾರಿಗಳು (Election Officer) ಹಾಗೂ ಪೊಲೀಸರು ಚುನಾವಣಾ (Election) ಅಕ್ರಮಗಳ ಮೇಲೆ ದಾಳಿ ನಡೆಸಿ ಬರೋಬ್ಬರಿ ನೂರು ಕೋಟಿಯಷ್ಟು ಹಣ, ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ಅಚ್ಚರಿಯ ವಿಚಾರ ಎಂದರೆ ಇದರಲ್ಲಿ ಹಣಕ್ಕಿಂತ ಕುಕ್ಕರ್, ತವಾ ಮತ್ತು ಸೀರೆಗಳೇ ಮೇಲುಗೈ ಸಾಧಿಸಿದೆ.
ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ (Congress), ಬಿಜೆಪಿ (BJP), ಜೆಡಿಎಸ್ (JDS) ಪಕ್ಷಗಳು ಇನ್ನಿಲ್ಲದಂತೆ ಕಸರತ್ತು ನಡೆಸಿದ್ದಾರೆ. ಒಂದು ಕಡೆ ಟಿಕೆಟ್ ಗೊಂದಲ, ಮತ್ತೊಂದು ಕಡೆ ಮತದಾರರನ್ನು ಓಲೈಸಿಕೊಳ್ಳಲು ಆಮಿಷಗಳು. ಇದನ್ನು ಮನಗಂಡ ಚುನಾವಣಾ ಆಯೋಗ ಮಾರ್ಚ್ 29 ರಂದು ನೀತಿ ಸಂಹಿತೆ (Code Of Conduct) ಜಾರಿ ಮಾಡಿ ಆದೇಶ ಹೊರಡಿಸಿತ್ತು. ಅಂದಿನಿಂದಲೇ ಅಲರ್ಟ್ ಆದ ಚುನಾವಣಾಧಿಕಾರಿಗಳು ಹಾಗೂ ಸ್ಥಳೀಯ ಪೊಲೀಸರು ಆಯಾ ವಿಭಾಗದಲ್ಲಿ ಚೆಕ್ ಪೋಸ್ಟ್‌ಗಳನ್ನು (Check Post) ಹಾಕಿ ವಾಹನಗಳ ಪರಿಶೀಲನೆ ಶುರುಮಾಡಿದರು. ಇದನ್ನೂ ಓದಿ: ನಂದಿನಿ ಬೇಕು; ಅಮುಲ್ ಬೇಡ- ಕನ್ನಡ ಪರ ಸಂಘಟನೆಗಳಿಂದ ಭುಗಿಲೆದ್ದ ಆಕ್ರೋಶ
ಮತ್ತೊಂದು ಕಡೆ ರಾಜಕೀಯ ನಾಯಕರು ಮತ್ತು ಬೆಂಬಲಿಗರ ಮನೆಗಳಲ್ಲಿ ಅಕ್ರಮವಾಗಿ ಮತದಾರರಿಗೆ ಹಂಚಲು ಹಣ, ದಿನಸಿ ವಸ್ತುಗಳು, ಗಿಫ್ಟ್‌ಗಳ ಶೇಖರಣೆ ಬಗ್ಗೆ ಕಣ್ಣಿಟ್ಟು ದಾಳಿ ನಡೆಸಿ ವಶಕ್ಕೆ ಪಡೆದು ಕೇಸ್ ದಾಖಲಿಸುತ್ತಿದ್ದಾರೆ. ಬಹುತೇಕ ಪತ್ತೆಯಾದ ಕಡೆಗಳಲ್ಲೆಲ್ಲಾ ಸಾವಿರಾರು ಸಂಖ್ಯೆಯಲ್ಲಿ ಕುಕ್ಕರ್‌ಗಳು ಮತ್ತು ತವಾಗಳು ಪತ್ತೆಯಾಗುತ್ತಿವೆ. ಇದನ್ನೂ ಓದಿ: ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೂ ಮೊದಲೇ ಬಿಜೆಪಿ ಕಚೇರಿಗೆ ಬಿಗಿ ಭದ್ರತೆ
ನಾಮಿನೇಷನ್ ಹಾಕಿದ ನಂತರವಷ್ಟೇ ಹಣ, ಮದ್ಯ, ಗೃಹಬಳಕೆ ವಸ್ತುಗಳು ಹೆಚ್ಚಾಗಿ ಸಿಗುತ್ತವೆ. ಆ ನಿಟ್ಟಿನಲ್ಲಿ ಅಧಿಕಾರಿಗಳು ಕೂಡ ಸೂಕ್ತ ತಯಾರಿ ನಡೆಸಿದ್ದಾರೆ. ಆದರೆ ನಾಮೀನೇಷನ್ ಹಾಕುವ ಮುನ್ನವೇ ರಾಜ್ಯಾದ್ಯಂತ ಮೂರು ಪಕ್ಷಗಳಿಗೆ ಸೇರಿದ ಅಭ್ಯರ್ಥಿಗಳಿಗೆ ಸೇರಿದ ಬರೋಬ್ಬರಿ ನೂರು ಕೋಟಿ ಅಕ್ರಮ ಹಣ, ವಸ್ತುಗಳು ಪತ್ತೆಯಾಗಿದ್ದು, ಸ್ವತಃ ಅಧಿಕಾರಿಗಳೇ ಶಾಕ್ ಆಗಿದ್ದಾರೆ. ಇದನ್ನೂ ಓದಿ: 20ಕ್ಕೂ ಹೆಚ್ಚು ಬಿಜೆಪಿ ಶಾಸಕರಿಗೆ ಕೊಕ್ – ಲಿಸ್ಟ್‌ನಲ್ಲಿ ಯಾರಿದ್ದಾರೆ?