ಕೋಲಾರ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಸ್ಪರ್ಧಿಸಲು ಇಚ್ಛಿಸಿರುವ ಕೋಲಾರ (Kolar) ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ (JDS) ಭಿನ್ನಮತ ಸ್ಫೋಟಗೊಂಡಿದ್ದು, ತಾಲೂಕು ಜೆಡಿಎಸ್ ಅಧ್ಯಕ್ಷೆ ಕುರ್ಕಿ ರಾಜೇಶ್ವರಿ (Kurki Rajeshwari) ಕಾಂಗ್ರೆಸ್ (Congress) ಸೇರುವ ನಿರೀಕ್ಷೆಯಿದೆ.
ಕೋಲಾರ ಕ್ಷೇತ್ರದ ಜೆಡಿಎಸ್ ಕಾರ್ಯಕರ್ತರಲ್ಲಿ ಭಿನ್ನಮತ ಭುಗಿಲೆದ್ದಿದ್ದು, ಜೆಡಿಎಸ್ ಅಭ್ಯರ್ಥಿ ಸಿಎಂಆರ್ ಶ್ರೀನಾಥ್ (C.M.R.Srinath) ವಿರುದ್ಧ ಜೆಡಿಎಸ್ ತಾಲೂಕು ಅಧ್ಯಕ್ಷೆ ಕುರ್ಕಿ ರಾಜೇಶ್ವರಿ ಸಭೆ ನಡೆಸುವ ಮೂಲಕ ಆಕ್ರೋಶ ಹೊರಹಾಕಿದ್ದಾರೆ. ಕೋಲಾರ ತಾಲೂಕಿನ ವೇಮಗಲ್‌ನಲ್ಲಿ ನಡೆದ ಬಹಿರಂಗ ಸಭೆಯಲ್ಲಿ ಮೂಲ ಜೆಡಿಎಸ್‌ನವರನ್ನು ಶ್ರೀನಾಥ್ ಕಡೆಗಣಿಸುತ್ತಿದ್ದಾರೆ ಎಂದು ಆರೋಪ ಮಾಡಲಾಗಿದೆ. ಇದನ್ನೂ ಓದಿ: ರಾಹುಲ್ ಗಾಂಧಿ ಸಂಸದ ಸ್ಥಾನ ಅನರ್ಹಕ್ಕೆ ಅಮೆರಿಕ, ಜರ್ಮನಿ ಸ್ಪಂದನೆ ಅನಗತ್ಯ: ಕೇಂದ್ರ ಸಚಿವ ಜೈಶಂಕರ್
Advertisement
Advertisement
ಕುರ್ಕಿ ರಾಜೇಶ್ವರಿ ನೇತೃತ್ವದಲ್ಲಿ ನೂರಾರು ಜನ ಸೇರಿ ಸಭೆ ನಡೆಸಿ ಶ್ರೀನಾಥ್ ವಿರುದ್ಧ ಬೇಸರ ವ್ಯಕ್ತಪಡಿಸಿದ್ದಾರೆ. ಇದರ ಪರಿಣಾಮ ಚುನಾವಣೆ (Election) ಮೇಲೆ ಬೀರುತ್ತೆ ಎಂದು ಪರೋಕ್ಷವಾಗಿ ಎಚ್ಚರಿಕೆ ನೀಡಿದರು. ಪಕ್ಷದ ಸಿದ್ಧಾಂತಗಳ ವಿರುದ್ಧ ಹಾಗೂ ಕಾರ್ಯಕರ್ತರನ್ನು ಕಡೆಗಣಿಸುತ್ತಿದ್ದಾರೆ ಎಂದು ಆರೋಪಿಸಿ ಈ ಸಭೆ ನಡೆಸಲಾಗಿದೆ. ಶ್ರೀನಾಥ್‌ಗೆ ಪರೋಕ್ಷವಾಗಿ ಸೋಲಿಸುವ ಎಚ್ಚರಿಕೆ ನೀಡಿದ ರಾಜೇಶ್ವರಿಯ ನಡೆ ಭಾರೀ ಕುತೂಹಲ ಮೂಡಿಸಿದೆ. ಇದನ್ನೂ ಓದಿ: ದೇವೇಗೌಡರ ಆರೋಗ್ಯ, ಆಯಸ್ಸು ನನಗೆ ಮುಖ್ಯ : ಹೆಚ್‍ಡಿಕೆ
Advertisement
Advertisement
ಪಕ್ಷದಲ್ಲೇ ಇದ್ದುಕೊಂಡು ಶ್ರೀನಾಥ್ ಸೋಲಿಗೆ ತಂತ್ರಗಾರಿಕೆ ಮಾಡಲಾಗುತ್ತಿದೆ ಎಂದು ಗಂಭೀರ ಆರೋಪ ಮಾಡಲಾಗಿದೆ. ಇನ್ನೂ ಜೆಡಿಎಸ್ ಪಕ್ಷದ ರಾಜಕೀಯ ಕಿತ್ತಾಟ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ವರದಾನವಾಗಿದ್ದು, ನರಸಾಪುರ, ಕ್ಯಾಲನೂರು ಭಾಗದಲ್ಲಿ ಪ್ರಭಾವ ಹೊಂದಿರುವ ರಾಜೇಶ್ವರಿ ಬಂಡಾಯದ ಬಿಸಿಯ ಎಫೆಕ್ಟ್ ಜೆಡಿಎಸ್‌ಗೆ ತಟ್ಟಲಿದೆ. ರಾಜೇಶ್ವರಿ ಕೋಲಾರ ಟಿಕೆಟ್ ಆಕಾಂಕ್ಷಿಯೂ ಸಹ ಆಗಿದ್ದರು. ಇದನ್ನೂ ಓದಿ: ಪರಿಶಿಷ್ಟ ಜಾತಿ, ಪಂಗಡ ಬಿಜೆಪಿ ಕೈ ಹಿಡಿಯಲಿವೆ – ಕೋಟ ಶ್ರೀನಿವಾಸ ಪೂಜಾರಿ
ದಳಪತಿಗಳ ವಿರುದ್ಧ ಅಸಮಾಧಾನ ಹೊರ ಹಾಕಿರುವ ರಾಜೇಶ್ವರಿ ಸದ್ಯ ಕಾಂಗ್ರೆಸ್ ನಾಯಕರೊಂದಿಗೆ ಒಂದು ಸುತ್ತಿನ ಮಾತುಕತೆ ನಡೆಸಿ ಕಾಂಗ್ರೆಸ್ ಸೇರುವ ಸೂಚನೆಯನ್ನು ನೀಡಿದ್ದಾರೆ. ಚುನಾವಣೆ ದಿನಾಂಕ ಘೋಷಣೆ ಬೆನ್ನಲ್ಲೆ ಕೋಲಾರ ಜೆಡಿಎಸ್‌ಗೆ ಇದು ಮೊದಲ ಆಘಾತ ಎಂದರೆ ತಪ್ಪಾಗಲಾರದು. ಇದನ್ನೂ ಓದಿ: ಶಾಸಕ ಸ್ಥಾನಕ್ಕೆ ಜೆಡಿಎಸ್‌ನ ಶಿವಲಿಂಗೇಗೌಡ ರಾಜೀನಾಮೆ