ರಾಮನಗರ: ದಿಢೀರ್ ಬೆಳವಣಿಗೆಯೊಂದರಲ್ಲಿ ಕನಕಪುರದಿಂದ (Kanakapura) ಡಿಕೆ ಶಿವಕುಮಾರ್ (DK Shivakumar) ಸಹೋದರ ಡಿಕೆ ಸುರೇಶ್ (DK Suresh) ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ (Congress) ಸಂಸದ ಡಿಕೆ ಸುರೇಶ್ ಅವರು ಇಂದು ಬೆಂಗಳೂರು ಪದ್ಮನಾಭನಗರದಲ್ಲಿ ನಾಮಪತ್ರ ಸಲ್ಲಿಸಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ ಇಂದು ದಿಢೀರ್ ಬೆಳವಣಿಗೆಯೊಂದರಲ್ಲಿ ಡಿಕೆ ಸುರೇಶ್ ನಾಮಪತ್ರ ಸಲ್ಲಿಸಿದ್ದಾರೆ. ಇದನ್ನೂ ಓದಿ: ಡಿಕೆಶಿ ಟಿಕೆಟ್ ಮಾರಾಟ ಮಾಡಿದ್ದಾರೆ : ಮೊಯಿದ್ದಿನ್ ಬಾವಾ ಆರೋಪ
ನಾಮಪತ್ರ ಸಲ್ಲಿಸಿದ್ದು ಯಾಕೆ?
ಡಿಕೆ ಶಿವಕುಮಾರ್ ಸಲ್ಲಿಸಿದ್ದ ನಾಮಪತ್ರ ತಾಂತ್ರಿಕ ಕಾರಣದಿಂದ ತಿರಸ್ಕೃತವಾಗುವ ಭೀತಿ ಇರುವುದರಿಂದ ಸುರೇಶ್ ನಾಮಪತ್ರ ಸಲ್ಲಿಸಿದ್ದಾರೆ ಎನ್ನಲಾಗುತ್ತದೆ. ಇಬ್ಬರು ಯಾಕೆ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ ಎಂಬುದಕ್ಕೆ ಇಲ್ಲಿಯವರೆಗೆ ಯಾವುದೇ ಸ್ಪಷ್ಟವಾದ ಕಾರಣ ಸಿಕ್ಕಿಲ್ಲ.
ಪಬ್ಲಿಕ್ ಟಿವಿಗೆ ಲಭ್ಯವಾದ ಮಾಹಿತಿಗಳ ಪ್ರಕಾರ ಒಂದು ವೇಳೆ ಡಿಕೆಶಿ ನಾಮಪತ್ರ ತಿರಸ್ಕೃತವಾದರೂ ಸುರೇಶ್ ಅವರ ನಾಮಪತ್ರ ಸ್ವೀಕೃತವಾಗಿರುತ್ತದೆ ಎಂಬ ಕಾರಣಕ್ಕೆ ನಾಮಪತ್ರ ಸಲ್ಲಿಕೆ ಮಾಡಲಾಗಿದೆ ಎನ್ನಲಾಗುತ್ತಿದೆ.