ರಾಮನಗರ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರೇ ಸುಪ್ರೀಂ, ಅವರು ಏನೇ ಆದೇಶ ಮಾಡಿದ್ರೂ ಅದನ್ನ ಪಾಲನೆ ಮಾಡುತ್ತೇವೆ ಎಂದು ಸಂಸದ ಡಿ.ಕೆ.ಸುರೇಶ್ (DK Suresh) ತಿಳಿಸಿದರು.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ರಾಜ್ಯ ರಾಜಕಾರಣಕ್ಕೆ ಎಂಟ್ರಿ ವಿಚಾರ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಖರ್ಗೆ ಅವರು ರಾಜ್ಯ ರಾಜಕಾರಣಕ್ಕೆ ಬರಬಾರದು ಅಂತೇನು ಇಲ್ಲ. ಮಲ್ಲಿಕಾರ್ಜುನ ಖರ್ಗೆ ಅವರು ನಮ್ಮ ಪಕ್ಷದ ಅತ್ಯಂತ ಹಿರಿಯ ವರಿಷ್ಠರಾಗಿದ್ದಾರೆ. ನಮಗೆ ಅವರೇ ಸುಪ್ರೀಂ, ಅವರು ಏನೇ ಆದೇಶ ಮಾಡಿದ್ರೂ ಅದನ್ನ ಪಾಲನೆ ಮಾಡುತ್ತೇವೆ ಎಂದು ಹೇಳಿದರು.
Advertisement
Advertisement
ಚನ್ನಪಟ್ಟಣ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ವಿಚಾರದ ಕುರಿತು ಮಾತನಾಡಿದ ಅವರು, ರಾಮನಗರ ಜಿಲ್ಲೆಯವರೇ ಚನ್ನಪಟ್ಟಣ ಕ್ಷೇತ್ರದ ಅಭ್ಯರ್ಥಿಯಾಗುತ್ತಾರೆ. ಸ್ಥಳೀಯರ ಅಭಿಪ್ರಾಯ ಸಂಗ್ರಹಿಸಿ ವರಿಷ್ಠರಿಗೆ ರವಾನೆ ಮಾಡಲಾಗಿದೆ. ಮೂರು ದಿನಗಳಲ್ಲಿ ಚನ್ನಪಟ್ಟಣ ಕ್ಷೇತ್ರದ ಅಭ್ಯರ್ಥಿ ಘೋಷಣೆ ಆಗಲಿದೆ ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: ನಟರು ರಾಜಕೀಯ ಹಂಗು, ಹಗರಣದಲ್ಲೇಕೆ ಸಿಕ್ಕಿಕೊಳ್ತಾರೆ – ವಿಶ್ವನಾಥ್ ಪ್ರಶ್ನೆ
Advertisement
Advertisement
ಕೆಪಿಸಿಸಿ ಅಧ್ಯಕ್ಷರಿಗೆ ರಾಜ್ಯದ 224 ಕ್ಷೇತ್ರಗಳ ಜವಾಬ್ದಾರಿ ನೀಡಿದ್ದಾರೆ. ನನ್ನ ಲೋಕಸಭಾ ಕ್ಷೇತ್ರದ 8 ಕ್ಷೇತ್ರಗಳ ಬಗ್ಗೆ ನಾನು ಗಮನಹರಿಸಿದ್ದೇನೆ. ಕೆಲ ರಾಜಕೀಯ ಲೆಕ್ಕಾಚಾರ ಆಗುತ್ತಿದೆ, ಹಾಗಾಗಿ 3ನೇ ಪಟ್ಟಿ ವಿಳಂಬವಾಗುತ್ತಿದೆ. ಕಾಂಗ್ರೆಸ್ (Congress) ಪಕ್ಷದ ಕಾರ್ಯಕರ್ತರು ಹಗಲು ರಾತ್ರಿ ಕೆಲಸ ಮಾಡುತ್ತಿದ್ದಾರೆ ಎಂದರು. ಇದನ್ನೂ ಓದಿ: ನಾನು ವರುಣಾದಿಂದ ಸ್ಪರ್ಧಿಸುವುದಿಲ್ಲ, ಅದು ಮುಗಿದ ಅಧ್ಯಾಯ : ಸೋಮಣ್ಣ