ಕೋಲಾರ: ಪ್ರಧಾನಿಯಾಗಿರುವವರು ಪಂಚಾಯ್ತಿ ಚುನಾವಣೆಗಳಲ್ಲಿ ತಿರುಗುವ ಹಾಗೆ ತಿರುಗ್ತಿದ್ದಾರೆ ಎಂದು ಮಾಜಿ ಸ್ಪೀಕರ್ ರಮೇಶ್ ಕುಮಾರ್ (Ramesh Kumar) ವ್ಯಂಗ್ಯವಾಡಿದ್ದಾರೆ.
ಕೋಲಾರ ಜಿಲ್ಲೆಯ ಶ್ರೀನಿವಾಸಪುರದ ರಾಯಲಪಾಡುನಲ್ಲಿ ಮಾತನಾಡುತ್ತಾ ರಾಜ್ಯದಲ್ಲಿ ಪ್ರದಾನಿ ನರೇಂದ್ರ ಮೋದಿ (Narendra Modi) ಪ್ರವಾಸ ಕುರಿತು ಪ್ರತಿಕ್ರಿಯಿಸಿ, ಮದನಪಲ್ಲಿಯಲ್ಲಿ ಬೀಡಿ ಮಾರಾಟ ಮಾಡಲು ತಿರುಗುವ ಹಾಗೆ ಇವರು ತಿರುಗುತ್ತಿದ್ದಾರೆ. ಲಾಲ್ ಬಹಾದ್ದೂರ್ ಶಾಸ್ತ್ರಿ, ಇಂದಿರಾಗಾಂಧಿಯಂತಹವರೆಲ್ಲ ಪ್ರಧಾನಿ ಆಗಿದ್ದರು, ಈ ರೀತಿ ಆಡಲಿಲ್ಲ. ನಿಮ್ಮ ಸಚಿವರು ಲಂಚ ತೆಗೆದುಕೊಂಡಿದ್ದಾರೆ ಎಂದು ಗುತ್ತಿಗೆದಾರರು ಬರೆದ ಪತ್ರಕ್ಕೆ ಈ ದಿನದವರೆಗೂ ಉತ್ತರ ನೀಡಲಿಲ್ಲ ಎಂದು ಕಿಡಿಕಾರಿದರು.
Advertisement
Advertisement
7 ಕೆ.ಜಿ ಕೊಡುತ್ತಿದ್ದ ಅಕ್ಕಿಯನ್ನು 4 ಕೆ.ಜಿಗೆ ಇಳಿಸಿದರು. ಕಾಂಗ್ರೆಸ್‍ನ ಗುರುತಿನಿಂದ ಗೆದ್ದ ಶಾಸಕರನ್ನು ಕೋಟ್ಯಂತರ ಹಣ ಕೊಟ್ಟು ಖರೀದಿಸಿದರು. ಹೀಗೆ ಸರ್ಕಾರ ರಚಿಸಿ ಈ ರೀತಿಯಾಗಿ ಸರ್ಕಾರ ನಡೆಸುತ್ತಿದ್ದಾರೆ. ಕರ್ನಾಟಕದ ಬಿಜೆಪಿ ಸರ್ಕಾರ ಪ್ರಜಾಪ್ರಭುತ್ವವನ್ನು ಸರ್ವನಾಶ ಮಾಡಿದೆ. ಈ ಸರ್ಕಾರಕ್ಕೆ ಮಾನವೀಯತೆ ಇಲ್ಲ, ಅರ್ಥವೂ ಇಲ್ಲ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಬಿಎಸ್‌ವೈ, ಬೊಮ್ಮಾಯಿಗೆ ಕೇವಲ ಮೂರೂವರೆ ವರ್ಷ ಮಾತ್ರ ಅವಕಾಶ ಸಿಕ್ಕಿದೆ – ಮೋದಿ
Advertisement
84 ವರ್ಷದ ಮಹಾತ್ಮ ಗಾಂಧಿಯವರನ್ನು ಗುಂಡಿಟ್ಟು ಕೊಂದಿದ್ದು ಆರ್‍ಎಸ್‍ಎಸ್. ಆರ್‍ಎಸ್‍ಎಸ್ ಅಂದ್ರೆ ಅದು ಬಿಜೆಪಿ, ಬಿಜೆಪಿ ಅಂದ್ರೆ ಅದು ಬಜರಂಗದಳ ಎಂದು ಹೇಳುವ ಮೂಲಕ ಬಜರಂಗದಳ ನಿಷೇಧವನ್ನು ರಮೇಶ್ ಕುಮಾರ್ ಸಮರ್ಥಿಸಿಕೊಂಡರು.